Breaking News

Daily Archives: ಮೇ 8, 2023

ಇಂದು ಬೆಳಗ್ಗೆ 10 ಗಂಟೆಗೆ SSLC ಫಲಿತಾಂಶ ಪ್ರಕಟ

ಬೆಂಗಳೂರು: ಇಂದು(ಸೋಮವಾರ) ಬೆಳಗ್ಗೆ 10 ಗಂಟೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. 11 ಗಂಟೆಯ ನಂತರ ವಿದ್ಯಾರ್ಥಿಗಳು ವೆಬ್​​ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿತ್ತು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳು ಮಾಧ್ಯಮಗೋಷ್ಟಿ ನಡೆಸಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. 11 ಗಂಟೆಯಿಂದ …

Read More »

ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್

ದಕ್ಷಿಣ ಕನ್ನಡ: ಬೈಕ್ ಮತ್ತು ಆಟೋ ರ‍್ಯಾಲಿ ನಡೆಯುತ್ತಿದ್ದಾಗ ಎಸ್​ಡಿಪಿಐ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಉಳ್ಳಾಲದ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆಯವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ಆಟೋ ರಿಕ್ಷಾ ಹಾಗೂ ಬೈಕ್ ರ‍್ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಘಟನೆ ನಡೆದಿದೆ. ನಡೆದಿದ್ದೇನು?: ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾಗಿದ್ದಾರೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ …

Read More »

ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೊತ್ಸವದ ಆನೆ ಬಲರಾಮ (67) ಅನಾರೋಗ್ಯದಿಂದ ಮೃತಪಟ್ಟಿದೆ. ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿ ಬಲರಾಮ ಮೃತಪಟ್ಟಿರುವುದಾಗಿ ಆನೆ ಶಿಬಿರ ಸಿಬ್ಬಂದಿಗಳು ತಿಳಿಸಿದ್ದಾರೆ. ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇತ್ತೀಚೆಗೆ ಅನಾರೊಗ್ಯದಿಂದ ಬಳಲುತ್ತಿತ್ತು. ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

Read More »

ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದ ಪೊಲೀಸರು

ಬೈಲಹೊಂಗಲ: ಬೈಲಹೊಂಗಲ ತಾಲೂಕಿನಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮತ್ತು ಪೊಲೀಸರು ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ತಡಸಲೂರಿನ ಫಾರ್ಮ್ ಹೌಸ್ ನಲ್ಲಿ ಕುಕ್ಕರ್ ಗಳನ್ನು ಸಂಗ್ರಹಿಸಡಲಾಗಿತ್ತು. ಮತದಾರರಿಗೆ ಹಂಚಲು ಈ ಕುಕ್ಕರ್ ಗಳನ್ನು ಸಂಗ್ರಹಿಸಿಟ್ಟಿರಬಹುದು ಎನ್ನುವ ಶಂಕೆಯ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Read More »