ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. ಬೆಂಗಳುರು ಕೇಂದ್ರದಲ್ಲಿ ಶೇ.19.30ರಷ್ಟು ಮತದಾನ, ಬೆಂಗಳೂರು ಉತ್ತರದಲ್ಲಿ ಶೇ.17.50ರಷ್ಟು ಮತದಾನ, ಬೆಂಗಳೂರು ದಕ್ಷಿಣದಲ್ಲಿ ಶೇ.17ರಷ್ಟು, ಬೆಂಗಳೂರು ನಗರ ಶೇ.17.72ರಷ್ಟು ಮತದಾನ, ಬೆಂಗಳೂರು ಗ್ರಾಮಾಂತರ ಶೇ.20.23ರಷ್ಟು ಮತದಾನವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನವಾಗಿದೆ. ಕೊಡಗು ಶೇ.26.49ರಷ್ಟು ಮತದಾನ, ಕೊಪ್ಪಳದಲ್ಲಿ ಶೇ.21.46ರಷ್ಟು …
Read More »Daily Archives: ಮೇ 10, 2023
ಮತದಾನಕ್ಕೆ ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವು
ಬೆಳಗಾವಿ: ವಿಧಾನಸಭಾ ಚುನವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಬೆಳಗಾವಿಯ ಸವದತ್ತಿಯಲ್ಲಿ ಮತದಾನಕ್ಕೆಂದು ಬಂದ ವೃದ್ಧೆಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸವದತ್ತಿ ಯೆಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪಾರವ್ವ ಸಿದ್ನಾ (70) ಮೃತ ಮಹಿಳೆ. ಮತಚಲಾಯಿಸಲು ಮತದಾರರ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಪಾರವ್ವ ಅವರು ಲೋ ಬಿಪಿಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ವಿಧಾನಸಭಾ ಚುನಾವಣೆ ತಮ್ಮ ಮತದಾನದಹಕ್ಕು ಚಲಾಯಿಸಿದ ಸಂತೋಷ ಜಾರಕಿಹೊಳಿ ದಂಪತಿಗಳು
ಗೋಕಾಕ ನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ದ ಸಂತೋಷ್ ಜಾರಕಿಹೊಳಿ ದಂಪತಿಗಳು ಗೋಕಾಕ: ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಇಂದು ಮತದಾನ ಇನ್ನು ಮೂರನೇ ದಿನಕ್ಕೆ ಇದರ ತೀರ್ಪು ಗೋಕಾಕ ನಲ್ಲಿ ಸಂತೋಷ್ ಜಾರಕಿಹೊಳಿ ಹಾಗೂ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ತಮ್ಮ ಮತದಾನ ಹಕ್ಕನ್ನ ಚಲಾವಣೆ ಮಾಡಿದ್ದಾರೆ. ಗೋಕಾಕ ವಿಧಾನಸಭೆ ಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಮಹಾಂ ತೇಶ್ ಕಡಾಡಿ ಅವರ್ ವಿರುದ್ಧ ಸ್ಪರ್ದೆ ಮಾಡಿದ್ದಾರೆ …
Read More »ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ.
ಹಾವೇರಿ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಾಲ್ಲಿ ಮತದಾನ ಚುರುಕುಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ ಬಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತದಾನ ಮಾಡಿದ್ದಾರೆ. ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.
Read More »ವಿಧಾನಸಭೆ ಚುನಾವಣೆ: ಎಲ್ಲೆಡೆ ಬಿರುಸಿನ ಮತದಾನ ಆರಂಭ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆ ದಿನ ಬಂದಿದೆ. ರಾಜ್ಯದ ಎಲ್ಲೆಡೆ ಮುಂಜಾನೆಯಿಂದಲೇ ಬಿರುಸಿನ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮತದಾನ ಪ್ರಭುಗಳು ಆಯಾ ಮತಕ್ಷೇತ್ರಕ್ಕೆ ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಹಿರಿಯ ನಾಗರಿಕರು ತಮ್ಮ ಮಕ್ಕಳು, ಮೊಮ್ಮಕ್ಕಳೊಂದಿಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು. ಎಲ್ಲೆಲ್ಲಿ ಯಾರು ಮತದಾನ ಮಾಡಿದರು: ಶಿಕಾರಿಪುರ: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ವೈ ಕುಟುಂಬ ಮುಂಜಾನೆಯೇ ತಮ್ಮ ಮತವನ್ನು ಚಲಾಯಿಸಿದರು. ಬೆಳಗಾವಿ: ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ …
Read More »ವೊಟರ್ ಐಡಿ ಇಲ್ಲದಿದ್ದರೂ ಈ ದಾಖಲೆಗಳಿದ್ದರೆ ಮತದಾನ ಮಾಡಬಹುದು
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದಲೆ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ವೋಟರ್ ಐಡಿ ಇಲ್ಲದಿದ್ದರೂ ಮತದಾರರು ಈ ದಾಖಲೆಗಳು ಇದ್ದರೆ ಮತದಾನ ಮಾಡಬಹುದು. ಪಾಸ್ ಪೋರ್ಟ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಎಂನರೇಗಾ ಜಾಬ್ ಕಾರ್ಡ್, ಕಚೇರಿ, ಕಂಪನಿಗಳು ತಮ್ಮ ಸಿಬ್ಬಂದಿಗಳಿಗೆ ನೀಡಿರುವ ಫೋಟೋ …
Read More »ರಾಜ್ಯಾದ್ಯಂತ ಮತದಾನ ಆರಂಭ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. 224 ವಿಧಾನ ಸಭೆ ಕ್ಷೇತ್ರಗಳಿಗೆ ಒಟ್ಟೂ 58,545 ಮತಗಟ್ಟೆ ತೆರೆಯಲಾಗಿದ್ದು, ಎಲ್ಲ ಕಡೆ ಶಾಂತವಾಗಿ ಮತದಾನ ನಡೆಯುತ್ತಿದೆ. ಒಟ್ಟೂ 5.30 ಕೋಟಿ ಜನ ಮತದಾನದ ಹಕ್ಕು ಹೊಂದಿದ್ದಾರೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗ್ಗೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮತಗಟ್ಟೆಗೆ ತೆರಳಿದ್ದಾರೆ. ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪುತ್ರ ಭರತ ಹಾಗೂ ಪುತ್ರಿ …
Read More »