Breaking News

Daily Archives: ಮೇ 11, 2023

ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿರುವ ಕುಮಾರಸ್ವಾಮಿ ಅವರ ಆರೋಗ್ಯ ಕೈಕೊಟ್ಟಿದ್ದು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯಲಿರುವ ಅವರ ಅಲ್ಲಿ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಕಳೆದ ಮೂರು ತಿಂಗಳುಗಳಿಂದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಎಡೆಬಿಡದೆ ನಿರತರಾಗಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ 20 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದಲೇ …

Read More »

ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯ ವಿಧಾನಸಭೆಗೆ ಬುಧವಾರ ನಡೆದ ಚುನಾವಣೆಯ ಮತದಾನದ ವೇಳೆ ಜನಾರ್ದನ ರೆಡ್ಡಿಯವರು ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿ ಕ್ಷೇತ್ರದ ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ …

Read More »

ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

Read More »

ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ …

Read More »