ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದ ನಂತರ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮತಿ ನೀಡಿದೆ. ಪ್ರತಿ ಯೂನಿಟ್‌ಗೆ 70 ಪೈಸೆ ಬೆಲೆ ಏರಿಕೆ ಮಾಡಲು ಕೆಇಆರ್‌ಸಿ ಅನುಮನೋದನೆ ನೀಡಿದ್ದು, ಹೊಸ ದರಗಳು ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. ವಿದ್ಯುತ್ ವಿತರಣಾ ಕಂಪನಿಗಳು ಪ್ರತಿ ಯೂನಿಟ್‌ಗೆ 146 ಪೈಸೆ ಬೆಲೆ ಹೆಚ್ಚಿಸಬೇಕೆಂದು ಕೋರಿದ್ದವು. ಅವುಗಳ ಕೋರಿಕೆಯನ್ನು ಮನ್ನಿಸದೇ ಅರ್ಧಕ್ಕಿಂತ ಕಡಿಮೆ ಮೊತ್ತದ ಹೆಚ್ಚಳಕ್ಕೆ ಕೆಇಆರ್‌ಸಿ …
Read More »Daily Archives: ಮೇ 12, 2023
ಮಹಾತೀರ್ಪಿಗೆ ಕರುನಾಡು ಸಜ್ಜು: ಕಮಲ ಅರಳುತ್ತಾ, ‘ಕೈ’ ಕಮಾಲ್ ಮಾಡುತ್ತಾ?.. ಜೆಡಿಎಸ್ ಆಗಲಿದೆಯಾ ಕಿಂಗ್ ಮೇಕರ್?
ಬೆಂಗಳೂರು: ನಾಳೆ ಕರ್ನಾಟಕ ವಿಧಾನಸಭೆ ಚುನಾವಣೆಯ ಮಹಾತೀರ್ಪು ಹೊರಬೀಳಲಿದೆ. ಮತಯಂತ್ರಗಳಲ್ಲಿ ಭದ್ರವಾಗಿರುವ ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಇತ್ತ ರಾಜ್ಯ, ರಾಷ್ಟ್ರದ ಗಮನ ಸಳೆದಿರುವ ಮತ ಎಣಿಕೆಗಾಗಿ ರಾಜ್ಯಾದ್ಯಂತ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ರಾಜ್ಯಾದ್ಯಂತ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಜಕೀಯ ಪಕ್ಷಗಳ ಹೃದಯ ಬಡಿತ ಹೆಚ್ಚಾಗಿದೆ. ನಾಳೆ ಹೈ ವೋಲ್ಟೇಜ್ ಸಮರ ಕಣದ ನಿರ್ಣಾಯಕ ದಿನ. ಮತಪ್ರಭುಗಳು ಯಾರ …
Read More »ನಾಳೆ ಕೌಂಟಿಂಗ್ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..
ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ …
Read More »ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು: ಸತೀಶ್ ಜಾರಕಿಹೊಳಿ
ಬೆಳಗಾವಿ: ಈ ಬಾರಿ ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು. ಪ್ರತಿಬಾರಿ ಆಪರೆಶನ್ ಕಮಲ ಸಕ್ಸಸ್ ಆಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಲೆಕ್ಕದ ಪ್ರಕಾರ ನಮಗೆ ಬಹುಮತದ ಕೊರತೆಯಾಗಲ್ಲ. ಯಾರು ಏನೆ ಮಾಡಿದ್ರೂ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಎಂದರು. ಮೈತ್ರಿಗೆ ಸಿದ್ಧವಿರುವುದಾಗಿ …
Read More »ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ 3 ಹಂತದ ಬಿಗಿ ಭದ್ರತೆ
ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು: ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇವಿಎಂ ಮತ್ತು ವಿವಿಪ್ಯಾಟ್ಗಳನ್ನು ಇರಿಸಲಾಗಿರುವ ಎಲ್ಲಾ ಸ್ಟ್ರಾಂಗ್ ರೂಮ್ಗಳಲ್ಲಿ ಪೊಲೀಸರೊಂದಿಗೆ ಅರೆಸೇನಾ ಪಡೆಗಳು ಕಾವಲು ಕಾಯುತ್ತಿವೆ. …
Read More »ಷರತ್ತು ಒಪ್ಪಿದ್ರೆ ಮೈತ್ರಿಗೆ ಸಿದ್ಧ; ಸಂದೇಶ ರವಾನಿಸಿದ ಮಾಜಿ ಸಿಎಂ HDK
ಬೆಂಗಳೂರು:ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಮಗೆ 50 ಸೀಟ್ ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನಮ್ಮ ಷರತ್ತು ಈಡೇರಿಸುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರಗಳಡಿ ಎರಡು ಬಾರಿ ಮುಖ್ಯಮಂತ್ರಿಯಾದಾಗ ಕುಮಾರಸ್ವಾಮಿ …
Read More »ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭ B.S.Y.ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಬೊಮ್ಮಾಯಿ
ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ವಿಚಾರವಾಗಿ ರಣತಂತ್ರ ರೂಪುಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹೈ ವೋಲ್ಟೇಜ್ ಮೀಟಿಂಗ್ ನಡೆಸಿರುವ ಬೆನ್ನಲ್ಲೇ ಇತ್ತ ಬಿಜೆಪಿ ಪಾಳಯದಲ್ಲಿಯೂ ಚಟುವಟಿಕೆ ಚುರುಕುಗೊಂಡಿದ್ದು, ತೆರೆ ಮರೆಯಲ್ಲಿ ತಂತ್ರ ಹೆಣೆಯುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ …
Read More »ಗರಿಗೆದರಿದ ರಾಜಕೀಯ: ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸರಣಿ ಸಭೆ
ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಪಕ್ಷಕ್ಕೆ ಬಹುಮತ ಬಂದರೆ ಸರ್ಕಾರ ರಚನೆ ವಿಚಾರ ನಿಟ್ಟಿನಲ್ಲಿ ಹಾಗೂ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆ ನಿಟ್ಟಿನಲ್ಲಿ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ …
Read More »ಬೆಳಗಾವಿಯ 18 ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ
ಬೆಳಗಾವಿ: ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ …
Read More »ಕೇಂದ್ರ ಸರಕಾರದ ವಿರುದ್ಧ ಕೇಜ್ರಿಗೆ ಜಯ: ಎಂಟು ವರ್ಷಗಳ ಅಧಿಕಾರ ಸಂಘರ್ಷ ಮುಕ್ತಾಯ
ಹೊಸದಿಲ್ಲಿ: ಪೊಲೀಸ್-ಕಾನೂನು ಸುವ್ಯವಸ್ಥೆ, ಜಮೀನು-ಕಟ್ಟಡ ಇಲಾಖೆಯನ್ನು ಬಿಟ್ಟು ಉಳಿದ ಕಡೆ ದಿಲ್ಲಿಯ ಚುನಾಯಿತ ಸರಕಾರದ್ದೇ ನಿರ್ಧಾರ… ಹೀಗೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರ ತೀರ್ಪು ನೀಡಿದೆ. ದಿಲ್ಲಿ ಸರಕಾ ರಕ್ಕೆ ಸೇವಾ ಇಲಾಖೆಗಳಲ್ಲೂ ಯಾವುದೇ ಅಧಿಕಾರ ಇಲ್ಲವೆಂದು ನ್ಯಾ|ಎ.ಕೆ. ಸಿಕ್ರಿ ಮತ್ತು ನ್ಯಾ|ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ 2019ರಲ್ಲಿ ನೀಡಿದ್ದ ತೀರ್ಪನ್ನು ಒಪ್ಪಲು ಕೂಡ ನ್ಯಾಯಪೀಠ ನಿರಾಕರಿಸಿದೆ. ಇದರ ಜತೆಗೆ ಸರಕಾರ ಕೈಗೊಳ್ಳುವ …
Read More »