ಬೆಳಗಾವಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ್ ಹೂಗಾರ ಒತ್ತಾಯಿಸಿದರು. ವಿಜಯಪುರ ನಗರದಲ್ಲಿ ರವಿವಾರ ಮಾತನಾಡಿದ ಅವರು, ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಇದು ಖಂಡನೀಯ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …
Read More »Daily Archives: ಮೇ 14, 2023
ಎರಡು ದಶಕಗಳ ಚುನಾವಣಾ ಇತಿಹಾಸದಲ್ಲೇ ಜೆಡಿಎಸ್ ಅತ್ಯಂತ ಕಳಪೆ ಸಾಧನೆ!
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ‘ಕಿಂಗ್ ಮೇಕರ್’ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಬಯಕೆಗೆ ರಾಜ್ಯದ ಮತದಾರ ಪ್ರಭುಗಳು ತಣ್ಣೀರೆರೆಚಿದ್ದಾರೆ. ಈ ಬಾರಿ ಕೂಡ ಅತಂತ್ರ ಫಲಿತಾಂಶ ಬರುತ್ತದೆ ಎಂದು ಕೆಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಅಂತೆಯೇ, ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಜೆಡಿಎಸ್ ಬೆಂಬಲ ಅನಿವಾರ್ಯವಾಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೆ, ಕಾಂಗ್ರೆಸ್ಗೆ ಸ್ಪಷ್ಟ ಬಹುಮತವನ್ನು ಜನತೆ ನೀಡಿದ್ದಾರೆ. ಇದೇ ವೇಳೆ ಜೆಡಿಎಸ್ಗೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು …
Read More »ಆಪ್ತ ಶಾಸಕರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆ
ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಇಂದು ಸಂಜೆ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ.ಶಿವಕುಮಾರ್ ಇಂದು ನೊಣವಿನಕರೆಯ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದಾರೆ. ದೇವರ ಮೊರೆ ಹೋಗಿರುವ ಅವರು ನಗರ ಬಿಡುತ್ತಿದ್ದಂತೆ, ಮತ್ತೋರ್ವ ಪ್ರಬಲ ಆಕಾಂಕ್ಷಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಬೈರತಿ ಸುರೇಶ್ ಅವರಿಗೆ ಸಂಬಂಧಿಸಿದ ಪ್ಲಾಟ್ನಲ್ಲಿ ಸಭೆ …
Read More »ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂDK.ಶಿವಕುಮಾರ್ ನಡುವೆ ನೇರ ಪೈಪೋಟಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿವೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 5:30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಈಗಾಗಲೇ ಹೈಕಮಾಂಡ್ ತಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಉತರ ಕರ್ನಾಟಕ ಭಾಗದ ಶಾಸಕರ ವಿಶ್ವಾಸ ಗಳಿಸಲು ಕಸರತ್ತು ನಡೆಸಿದ್ದಾರೆ. ಇನ್ನು ಹಳೇ …
Read More »ಖರ್ಗೆ ಭೇಟಿಯಾದ ನೂತನ ಶಾಸಕರು*
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ನೂತನ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ನೂತನ ಶಾಸಕರ ದಂಡೇ ಆಗಮಿಸಿದೆ. ಶಾಸಕರಾದ ಜಮೀರ್ ಅಹ್ಮದ್, ಹೆಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಶಾಸಕರು ಆಗಮಿಸಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಯಾರಾಗಬೇಕು ಎಂಬ ಬಗ್ಗೆ ಆಯ್ಕೆ ನಡೆಯಲಿದೆ.
Read More »