Breaking News

Daily Archives: ಮೇ 16, 2023

ಸಂವಹನ ಕೌಶಲ ಅತೀ ಮುಖ್ಯ: ಸಲೀಂ ಹವಾಲ್ದಾರ

ಉಗರಗೋಳ: ಎಸ್‌ಎಸ್‌ಎಲ್‌ಸಿ ನಂತರ ಅನೇಕ ಆಯ್ಕೆಗಳಿವೆ. ಸಮರ್ಪಕ ಮಾರ್ಗದರ್ಶನ ಮತ್ತು ಜ್ಞಾನದ ಕೊರತೆಯಿಂದ ಮಕ್ಕಳು ಗೊಂದಲದಲ್ಲಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಪಾಲಕರು ಎಚ್ಚರವಹಿಸಬೇಕು ಎಂದು ಇಸ್ರೋ ವಿಜ್ಞಾನಿ ಸಲೀಮ್‌ ಹವಾಲ್ದಾರ ಹೇಳಿದರು.   ಇಲ್ಲಿನ ಬಸವಜ್ಯೋತಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಜರುಗಿದ ಎಸ್‌ಎಸ್‌ ಎಲ್‌ಸಿ ಆಯ್ತು, ಮುಂದೆ- ಎಂಬ ವಿಷಯ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಸಂವಹನ ಕೌಶಲ ಅತಿ ಮುಖ್ಯವಾಗಿದೆ. …

Read More »

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದಡಿ.ಕೆ.ಶಿ

ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕ್ಷಣ ಕ್ಷಣಕ್ಕೂ ಕಗ್ಗಂಟಾಗುತ್ತಿದ್ದು, ಸಿಎಂ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೆಟಿಯಾಗುತ್ತೇನೆ. ಮೊದಲು ಖರ್ಗೆ ಅವರನ್ನು ಭೇಟಿಯಾಗುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ನನಗೆ ತಾಯಿಯಿದ್ದಂತೆ. ಹೈಕಮಾಂಡ್ ಇದೆ, 135 ಶಾಸಕರು ಆಯ್ಕೆಯಾಗಿದ್ದೇವೆ. …

Read More »

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಕಾರ್ಯಕರ್ತರನ್ನು ಅಭಿನಂದಿಸಿದ ನೂತನ ಶಾಸಕ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ …

Read More »

ಸಿಎಂ ಸ್ಥಾನಕ್ಕೆ ಪರಮೇಶ್ವರ ಅವರನ್ನೂ ಪರಿಗಣಿಸಿ:ಬೃಹತ್​ ಪ್ರತಿಭಟನೆ

ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ, ಜಿ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ದಲಿತ ಸಮುದಾಯದ ವ್ಯಕ್ತಿ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಪೋಸ್ಟರ್​ಗಳನ್ನು ಹಿಡಿದು ಕಾರ್ಯಕರ್ತರು ಒತ್ತಾಯಿಸಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಭದ್ರಮ್ಮ ವೃತ್ತದ …

Read More »

ಏಕಾಏಕಿ ಹೊತ್ತಿ ಉರಿದ ಕಾರು.!

ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು‌ ಕೆಳಗಿಳಿಸಿದ್ದಾನೆ. …

Read More »

ವಾಟ್ಸಪ್‌ನಲ್ಲಿ ಪಾಕ್ ಪರ ಪೋಸ್ಟ್ ಮಾಡಿದ್ದ ಯುವಕ ಕಂಬಿಹಿಂದೆ.!

ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಕಾನಬಾವಿಯಲ್ಲಿ ಪಾಕಿಸ್ತಾನ ಪರ ಬರಹ ಬರೆದು ಅದನ್ನು ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನೆಲೆ ಯುವಕನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ ಘಟನೆ ನಡೆದಿದೆ. ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ (31) ಎಂಬಾತನನ್ನು ಇಲ್ಲಿನ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ವಿಜಯಪುರದ ದರ್ಗಾ ಜೈಲಿಗೆ ಕಳುಹಿಸಿದ್ದಾರೆ. ವೀರೇಶ, ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ …

Read More »

ಬೈಕ್​ ಕಾರು ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು.!

ಗದಗ : ಗದಗ ತಾಲೂಕಿನ ಅಡವಿ ಸೋಮಾಪೂರ ಬಳಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಗಳು ಮುಂಡರಗಿ ತಾಲೂಕಿನ ಸಿಂಗಟರಾಯನಕೇರಿ ತಾಂಡಾದ ನಿವಾಸಿಗಳು ಶಿವಪ್ಪ ನಾಯಕ್ (50), ಶಿವಾನಂದ ಲಮಾಣಿ (33) ಕೃಷ್ಣಪ್ಪ ಚೌಹ್ವಾನ್ ಎಂದು ತಿಳಿದುಬಂದಿದೆ. ಅಡವಿ ಸೋಮಾಪುರ ಗ್ರಾಮದಿಂದ ಮುಂಡರಗಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಟಿವಿಎಸ್ ಎಕ್ಸೆಲ್, ಹೀರೋ ಸ್ಪ್ಲೆಂಡರ್ ಹಾಗೂ ಚವರ್ಲೆಟ್ ಕಾರ್ಮ ಮಧ್ಯೆ ಸರಣಿ ಅಪಘಾತ ಅಪಘಾತ ಸಂಭವಿಸಿದೆ. …

Read More »

ಸಿದ್ದರಾಮಯ್ಯನವರೇ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ: ಕೆ.ಎನ್.ರಾಜಣ್ಣ

ತುಮಕೂರು: ಮಾಜಿ ಸಿಎಂ ಸಿದ್ದರಾಮಯ್ಯನವರೇ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಮೇ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರವಾಗಿಯೇ ಇದೆ. ಇದಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಕಾರ ಕೊಡುತ್ತಾರೆ ಎಂದರು. ನೂತನ ಸಿಎಂ ವಿಚಾರ ಇಂದು ಫೈನಲ್ ಆಗಲೇಬೇಕು. ಸಧ್ಯಕ್ಕೆ ಸಿದ್ದರಾಮಯ್ಯ ಒಬ್ಬರೇ ಪ್ರಮಾಣವಚನ ಸ್ವೀಕರಿಸಬಹುದು. ಸಚಿವ …

Read More »

ಯುವತಿ ಅಪಹರಿಸಿ ಹಣಕ್ಕಾಗಿ ಡಿಮ್ಯಾಂಡ್

ಶಿವಮೊಗ್ಗ: ಯುವತಿಯೊಬ್ಬಳನ್ನು ಅಪಹರಿಸಿರುವ ದುಷ್ಕರ್ಮಿಗಳು ಹಣಕಾಗಿ ಬೇಡಿಕೆ ಇರಿಸಿದ್ದು ಈ ಸಂಬಂಧ ದೂರು ದಾಖಲಾಗಿದೆ. ಚನ್ನಗಿರಿ ತಾಲೂಕು ನಲ್ಲೂರು ಗ್ರಾಮದ ಯುವತಿ ಅಪಹರಣಕ್ಕೊಳಗಾದವಳು. ಈಕೆ ಉನ್ನತ ವ್ಯಾಸಂಗ ಮಾಡುತ್ತಿದ್ದು ಈಕೆಯನ್ನು ದುಷ್ಕರ್ಮಿಗಳು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಪಹರಣಕಾರರು ಯುವತಿಯ ದೂರವಾಣಿ ಸಂಖ್ಯೆಯಿಂದಲೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಕರೆ ಮಾಡಿ 20 ಲಕ್ಷ ರೂಪಾಯಿ ನೀಡಿದರೆ ಮಾತ್ರ ಆಕೆಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ …

Read More »

ಮೊದಲ ಬಾರಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸುವ ಶಾಸಕರು

ಬೆಳಗಾವಿ: ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳ ಶಾಸಕರು ಮೊದಲ ಬಾರಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸುವ ಮೂಲಕ‌ ರಾಜ್ಯದ ಗಮನ ಸೆಳೆದಿದ್ದಾರೆ. ರಾಜಕೀಯ ಪವರ್​ ಸೆಂಟರ್​ ಎಂದೇ ಬಿಂಬಿತವಾಗಿರುವ ಬೆಳಗಾವಿಯಲ್ಲಿ ಈ ಬಾರಿ ಕೆಲ ಪ್ರಭಾವಿಗಳು ಪರಾಭವಗೊಂಡಿದ್ದು, ಹೊಸ ತಲೆಮಾರಿನ ನಾಯಕರು ಗೆದ್ದಿರುವುದು ವಿಶೇಷವಾಗಿದೆ. ಬಾಬಾಸಾಹೇಬ ಪಾಟೀಲ: ವೀರ ವನಿತೆ ಚನ್ನಮ್ಮನ ನಾಡು ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾಗಿರುವ ಬಾಬಾಸಾಹೇಬ ಪಾಟೀಲ (77,536 ಮತ) ಇದೇ ಮೊದಲ …

Read More »