Breaking News

Daily Archives: ಮೇ 21, 2023

ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡು 29 ವರ್ಷ.. ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡ ಸುಶ್ಮಿತಾ ಸೇನ್‌

ಮುಂಬೈ(ಮಹಾರಾಷ್ಟ): 29 ವರ್ಷಗಳ ಹಿಂದೆ ಇದೇ ದಿನಾಂಕದಂದು ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡಿದ್ದ ನಟಿ ಸುಶ್ಮಿತಾ ಸೇನ್ ಅವರ ಜೀವನದಲ್ಲಿ ಮೇ 21 ಬಹಳ ವಿಶೇಷವಾದ ದಿನವಾಗಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ, ನಟಿ ತಮ್ಮ ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರ ಮೇಲೆ, ‘ಈ ಚಿತ್ರವು ಸರಿಯಾಗಿ 29 ವರ್ಷ ಹಳೆಯದು, ಛಾಯಾಗ್ರಾಹಕ ಪ್ರಬುದ್ಧ ದಾಸ್‌ಗುಪ್ತಾ ತೆಗೆದಿದ್ದಾರೆ. ಅವರು 18 ವರ್ಷದ ನನ್ನನ್ನು ಸುಂದರವಾಗಿ …

Read More »

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು.. ಅರಣ್ಯಾಧಿಕಾರಿಗಳಿಗೆ ಜನ ಹೇಳಿದ್ದೇನು?

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ. ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ …

Read More »

ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡವರು. ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕ ಶಾಂತಮೂರ್ತಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ ವನ್ನು ಪಟ್ಟಿ ಮಾಡಿ ಪ್ರಕಟಿಸಿದ್ದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೇ …

Read More »

ಕಾಣಿಕೆ ಹುಂಡಿಗೆ ₹2 ಸಾವಿರದ ನೋಟು ಹಾಕದಂತೆ ಶಿರಡಿ ಸಾಯಿಬಾಬಾ ಭಕ್ತರಿಗೆ ಮನವಿ

ಶಿರಡಿ (ಮಹಾರಾಷ್ಟ್ರ) : ಭಾರತೀಯ ರಿಸರ್ವ್‌ ಬ್ಯಾಂಕ್(ಆರ್​ಬಿಐ) 2,000 ರುಪಾಯಿ ಕರೆನ್ಸಿ ನೋಟನ್ನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಶಿರಡಿಯ ಸಾಯಿಬಾಬಾ ದೇವಸ್ಥಾನದ ಕಾಣಿಕೆ ಹುಂಡಿಗೆ 2 ಸಾವಿರ ರುಪಾಯಿ ನೋಟುಗಳನ್ನು ಹಾಕದಂತೆ ಶ್ರೀ ಸಾಯಿ ಸಂಸ್ಥಾನ ಭಕ್ತರಲ್ಲಿ ಮನವಿ ಮಾಡಿದೆ. ಮೇ 19 ರಂದು ಆರ್‌ಬಿಐ ದೇಶದಲ್ಲಿ ಎರಡು ಸಾವಿರದ ನೋಟುಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ನಿರ್ಧಾರದ ನಂತರ ಶಿರಡಿ ಸಾಯಿಬಾಬಾ ಸಂಸ್ಥಾನ ಕೂಡಾ ಎಚ್ಚೆತ್ತುಕೊಂಡಿದೆ. ಸಾಯಿಬಾಬಾ ಸಂಸ್ಥಾನದ …

Read More »

ಆರ್.ವಿ.ದೇಶಪಾಂಡೆ ವಿಧಾನಸಭೆ ಹಂಗಾಮಿ ಸ್ಪೀಕರ್

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ವಿಧಾನ ಸಭಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದನದಿಂದ ಹೊಸ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನದ ಕಾರ್ಯ ಕಲಾಪ ನಿರ್ವಹಿಸಲು ಆರ್.ವಿ.ದೇಶಪಾಂಡೆಯವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಇದೇ ಅಧಿವೇಶನದಲ್ಲಿ ಪೂರ್ಣಾವಧಿ ಸ್ಪೀಕರ್ …

Read More »

ಬಿಜೆಪಿ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ,: ಜೋಶಿ

ಹುಬ್ಬಳ್ಳಿ: ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣಾ ಕಾರಣಕ್ಕಾಗಿ ಸುಳ್ಳು ಭರವಸೆ ನೀಡಿದ್ದಾರೆ. ಆದರೆ ಈಗ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೂರಿದರು. ಇಂದು ನಗರದ ತಮ್ಮ‌ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಒಂದನೇ ಸಂಪುಟದಲ್ಲಿ ಭರವಸೆ ಈಡೇರಿಸಲಾಗುವುದು ಎಂದಿದ್ದರು. ಆದರೆ ಈಗ ಏನು ಹೇಳುತ್ತಿದ್ದೀರಿ?. ಇನ್ ಪ್ರಿನ್ಸಿಪಲ್ ಕೊಡಲಾಗಿದೆ ಅಂತಾ. ಇದೇನಾ ಜನರಿಗೆ ನೀಡಿದ ಭರವಸೆ ಈಡೇರಿಸುವುದು?. ಇನ್ ಪ್ರಿನ್ಸಿಪಲ್ ಚುನಾವಣಾ …

Read More »

ಹಿಂದೆ ಸ್ಪೀಕರ್​ ಆಗಿದ್ದವರಿಗೆಲ್ಲ ಸೋಲು.. ಇಲ್ಲಿದೆ ವಿಧಾನಸಭಾಧ್ಯಕ್ಷರಾಗಿ ಬಳಿಕ ಸೋತವರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿನ್ನೆ ಅಸ್ತಿತ್ವಕ್ಕೆ ಬಂದಿದೆ. ನಾಳೆಯಿಂದ​ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಹಂಗಾಮಿ ಸ್ಪೀಕರ್​ ಆಗಿ ಹಿರಿಯ ಶಾಸಕ ವಿ. ಆರ್​. ದೇಶಪಾಂಡೆ ಅವರನ್ನು ನೇಮಿಸಲಾಗಿದೆ. ಆದರೆ, ಹೊಸ ಮತ್ತು ಕಾಯಂ ಸ್ಪೀಕರ್​ ಸ್ಥಾನದ ಜವಾಬ್ದಾರಿಯನ್ನು ಹಿರಿಯ ಕಾಂಗ್ರೆಸ್ ನಾಯಕರು ತೆಗೆದುಕೊಳ್ಳಲು ಸಿದ್ಧರಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆ ಹುದ್ದೆಗೆ ಅಂಟಿಗೊಂಡಿರುವ ಭಯ ಎನ್ನಲಾಗುತ್ತಿದೆ. ಹೌದು, 2004ರಿಂದ ಸಾಂವಿಧಾನಿಕ, ಪ್ರತಿಷ್ಠಿತ ಹುದ್ದೆಯಲ್ಲಿ …

Read More »

ಅಧಿಕಾರಕ್ಕಾಗಿ ನನ್ನ ಮನೆ, ಸಿದ್ದರಾಮಯ್ಯರ ಮನೆ ಎಂದು ಸುತ್ತಬೇಡಿ

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾತ್ಯತೀತ ಜನತಾ ದಳ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್​ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದೆ. ಮೇ 20 ರಂದು ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್​ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ 8 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಇದರ …

Read More »

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವು ಅವಾಂತರ ಸೃಷ್ಟಿ

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ‌ಹಿನ್ನೆಲೆಯಲ್ಲಿ ರಾಜಧಾನಿಯ ಹಲವು ಭಾಗಗಗಲ್ಲಿ ಅಲ್ಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಸುಮಾರು 3 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿದಿದೆ. ಕಾರ್ಮೋಡ ಕವಿದು, ಗುಡುಗು- ಸಿಡಿಲು ಸಹಿತ ಭರ್ಜರಿಯಾಗಿ ಮಳೆ ಸುರಿದಿದೆ. ಈ ಮಳೆಯಿಂದಾಗಿ ನಗರಸ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಜಯನಗರ, …

Read More »

ನಾಳೆಯಿಂದ 3 ದಿನ ಕರ್ನಾಟಕ ವಿಧಾನಸಭೆ ಅಧಿವೇಶನ

ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಈ ಸಮಯದಲ್ಲಿ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ನೂತನ ಸಭಾಪತಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಒಂದು ವಾರದ ನಂತರ ಸಿದ್ದರಾಮಯ್ಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ …

Read More »