ನವದೆಹಲಿ: ಮೇ. 23 ರ ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸಲಾಗುತ್ತಿದೆ. ಕೌಂಟರ್ನಲ್ಲಿ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಸೋಮವಾರ ಹೇಳಿದೆ. ಮೇ.23ರ ಮಂಗಳವಾರದ ಇಂದಿನಿಂದ ಹಿಂಪಡೆಯಲಾದಂತ 2,000 ರೂಪಾಯಿ ಮುಖಬಲೆಯ ನೋಟುಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ …
Read More »Daily Archives: ಮೇ 23, 2023
ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ನ್ಯಾಯಾಂಗ ಮತ್ತು ದೇಶದ ಘನತೆಗೆ ಧಕ್ಕೆ ತರುವ ಮಾದರಿಯಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ಗೆ (ಬಿಬಿಸಿ) ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ. ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ದೇಶದ ಘನತೆಗೆ ಧಕ್ಕೆಯುಂಟಾಗಿದೆ. ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ನ್ಯಾಯಾಂಗದ ವಿರುದ್ಧ …
Read More »ವಿಧಾನಸಭೆಗೆ ಸ್ಪೀಕರ್ ಯಾರು? ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ತೀರ್ಮಾನ:ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ ಸದಸ್ಯರ ಪದಗ್ರಹಣ ಪ್ರಯುಕ್ತ ಮೂರು ದಿನಗಳ ಅಧಿವೇಶನ ಕರೆದಿರುವ ಸಿಎಂ ಕಡೆಯ ದಿನ ಬೆಳಗ್ಗೆ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334 ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣ ಜಪ್ತಿ
ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.
Read More »