ಪತಿ ಮತ್ತು ಪತ್ನಿ ಹಾಗೂ ಐದು ವರ್ಷದ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರು ಮೋಹನ್ ಪ್ರತಾಪ್ ಸಿಂಗ್ ದಂಗರ್ (30), ಪತ್ನಿ ಪೂಜಾ ದಂಗರ್ (25) ಮತ್ತು ಇವರ ಐದು ವರ್ಷದ ಪುತ್ರಿ ಎಂದು ವರದಿಯಿಂದ ತಿಳಿದು ಬಂದಿದೆ. ಕೃಷಿ ಮಾಡುತ್ತಿದ್ದ ಮೋಹನ್ ತಮ್ಮ ಕುಟುಂಬ ಸಮೇತ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ದಂಪತಿ ಮೊದಲಿಗೆ ತಮ್ಮ …
Read More »Daily Archives: ಮೇ 24, 2023
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ : ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಸೋಲಿಗೆ ಕಾರಣ ಎಂದಿದ್ದಾರೆ. ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ …
Read More »ವಿಧಾನಸಭಾ ನೂತನ ಸ್ಪೀಕರ್ ಆಗಿ U.T. ಖಾದರ್ ಆಯ್ಕೆ
ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ. ನನ್ನ ಸರ್ಕಾರದ ಅವಧಿಯಲ್ಲಿ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದೀರಿ. ಸದನದಲ್ಲಿ …
Read More »ಸಿದ್ದರಾಮಯ್ಯ,D.K. ಶಿವಕುಮಾರ ಶಾಸಕರಿಗೆ ಮಹತ್ವದ ಸೂಚನೆ ನೀಡಿದರು
ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದರು. ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ …
Read More »ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ
ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡುತ್ತಿದ್ದೀರಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕಾಂಗ್ರೆಸ್ ನಾಯಕರ ಭ್ರಮೆ. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಹೆಸರುವಾಸಿಯಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಗೃಹ ಇಲಾಖೆ, ಪೊಲೀಸರ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುವ ಬದಲು ನೈತಿಕ ಸ್ಥೈರ್ಯ ಕುಗ್ಗಿಸುವ ಮಾತನಾಡಿದ್ದಾರೆ. ಇಂತಹ …
Read More »