Breaking News

Daily Archives: ಮೇ 27, 2023

ನೂತನ ಸಚಿವರ ಪ್ರಮಾಣವಚನ ಆರಂಭ

ಬೆಂಗಳೂರು: ನೂತನ ಸಚಿವರ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, 24 ಜನ ಶಾಸಕರು ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11:45ಕ್ಕೆ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ. ಈಬಾರಿ ಹಲವು ಹೊಸಬರಿಗೆ ಸಚಿವ ಸ್ಥಾನ ನೀಡಲಾಗುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಕೆ.ವೆಂಕಟೇಶ್, ಬಿ.ನಾಗೇಂದ್ರ ಮೊದಲಾದವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಪಟ್ಟಿ: ಹೆಚ್.ಕೆ.ಪಾಟೀಲ್ ಕೃಷ್ಣಬೈರೇಗೌಡ ಚಲುವರಾಯಸ್ವಾಮಿ ಪಿರಿಯಾಪಟ್ಟಣ ವೆಂಕಟೇಶ್ ಡಾ.ಹೆಚ್.ಸಿ.ಮಹದೇವಪ್ಪ ಈಶ್ವರ ಖಂಡ್ರೆ ಕೆ.ಎನ್.ರಾಜಣ್ಣ …

Read More »

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಸಿ.ಮಂಜುನಾಥ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಗುರುವನ್ನು ದೇವರೆಂದು ಭಾವಿಸುವ ದೇಶವಿದು. ಶಿಕ್ಷಕ ಮಂಜುನಾಥ್ ಕೃತ್ಯದಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗಬಹುದು. ಪೋಶಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯಬಹುದು. ಹೀಗಾಗಿ ಆರೋಪಿ ಜಾಮೀನಿಗೆ ಅರ್ಹನಲ್ಲ ಎಂದು ನ್ಯಾ.ಉಮೇಶ್ ಎಂ.ಅಡಿಗ ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತೊಯಲ್ಲಿ ಪ್ರಕರಣ ದಾಖಲಾಗಿತ್ತು.

Read More »

ಕಪಾಟಿನಲ್ಲಿ ಅವಿತು ಕುಳಿತು ಭುಸುಗುಟ್ಟ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ.

ಮೂಡಿಗೆರೆ: ಪಿರಿಯಾಪಟ್ಟಣದ ಬಸಲಾಪುರ ಶಾಲಾ ಸ್ವಚ್ಛತೆ ವೇಳೆ ನಾಗರ ಹಾವೊಂದು ಕಪಾಟಿನಲ್ಲಿ ಅವಿತು ಕುಳಿತು ಭುಸುಗುಟ್ಟ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ. ಈ ಚಿತ್ರ ಕಂಡವರೆಲ್ಲ ಅಬ್ಬಬ್ಬಾ..! ಎಂದಿದ್ದಾರೆ. ಇದರ ಬೆನ್ನಿಗೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮುಸ್ಲಿಂ ಯುವತಿಯೊಬ್ಬಳ ಮನೆಯ ಕಪಾಟಿನಲ್ಲಿ ಬಜರಂಗದಳದ ಕಾರ್ಯಕರ್ತನೊಬ್ಬ ಪ್ರತ್ಯಕ್ಷವಾಗಿರುವ ವಿಡಿಯೊ ವೈರಲ್ ಆಗಿದೆ ! ಈ ಮೂಲಕ ಇತ್ತೀಚೆಗೆ ಗ್ರಾಮದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣ ಈಗ …

Read More »

ಪ್ರವೀಣ್ ನೆಟ್ಟಾರು ಪತ್ನಿ ಅವರ ನೇಮಕಾತಿಯನ್ನು ರದ್ದು ಮಾಡಿದ ಸರ್ಕಾರ.

ಬೆಂಗಳೂರು: ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರು ಅವರ ನೇಮಕಾತಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಮ್ತ್ರಿಗಳ ವಿಶೇಷ ಅಧಿಕರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಟಿಯಿಂದ 2022ರ ಸೆ.22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ನೂತನ …

Read More »

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಒಲಿದ ಸಚಿವ ಸ್ಥಾನ: ಸವದಿ, ಅಶೋಕ್ ಪಟ್ಟಣ ಸೇರಿ ಇತರರಿಗೆ ನಿರಾಶೆ

ಬೆಳಗಾವಿ: ಘಟಾನುಘಟಿ ನಾಯಕರ ನಡುವೆ ಕಾಂಗ್ರೆಸ್​ನ 2ನೇ ಪಟ್ಟಿಯಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಬಿಡುಗಡೆ ಮಾಡಿದ ಕಾಂಗ್ರೆಸ್ ಪಟ್ಟಿಯಲ್ಲಿ 24 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ಮತ್ತೆರಡು ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಕೇವಲ ಒಂದೇ ಸ್ಥಾನ ಸಿಕ್ಕಿದ್ದು, ಅದು ಲಕ್ಷ್ಮೀ ಹೆಬ್ಬಾಳ್ಕರ್ ಪಾಲಾಗಿದೆ. ಬಿಜೆಪಿ ಬಿಟ್ಟು ಬಂದು ಕಾಂಗ್ರೆಸ್ ಸೇರಿ ಭಾರಿ …

Read More »

ಮೇ 29 ರಿಂದ ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ

ಮೂಡಲಗಿ: ಪಟ್ಟಣದ ಗಾಂಧಿ ಚೌಕ ಬಳಿಯ ಢವಳೇಶ್ವರ ಓಣಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ಮೇ 29ಮತ್ತು 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ. 29 ರಂದು ಬೆಳಗ್ಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಿಂದ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ ಮೆರವಣಿಗೆ ನಡೆಯುವುದು. ನಂತರ ಹೋಮ-ಹವನದೊಂದಿಗೆ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರಾಣ …

Read More »

ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಲು ಶಾಸಕಿ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ

ನಿಪ್ಪಾಣಿ: ತಾಲೂಕಿನಲ್ಲಿ ಸ್ತವನಿಧಿ ಗ್ರಾಮವೊಂದು ಬಿಟ್ಟರೆ ಎಲ್ಲಿಯೂ ನೀರಿನ ತೊಂದರೆ ಇಲ್ಲ. ಸ್ತವನಿಧಿ ಗ್ರಾಮದಲ್ಲಿ ಶನಿವಾರದಿಂದ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲು ಸೂಚಿಸಲಾಗಿದೆ. ತಾಲೂಕಿನಲ್ಲಿ ಪ್ರವಾಹ, ಮಳೆಯಿಂದ ಹಾನಿಯಾದಲ್ಲಿ ಜಾಗೃತಿ ವಹಿಸಲು ತಾಲೂಕಾಡಳಿತಕ್ಕೆ ಸೂಚಿಸಲಾಗಿದೆ. ಒಪ್ಪಂದದ ಪ್ರಕಾರ ಮಹಾರಾಷ್ಟ್ರದಿಂದ ಇನ್ನೂ ನೀರು ಬರಬೇಕಾಗಿದ್ದು ಅದನ್ನು ಶೀಘ್ರದಲ್ಲೆ ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ’ ಎಂದು ಶಾಸಕಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು …

Read More »

ಮಾರುಕಟ್ಟೆಯಲ್ಲಿ ತೊಗರಿ ಆವಕ ಕೊರತೆ: ಭಾರೀ ಡಿಮ್ಯಾಂಡ್​, ಕ್ವಿಂಟಾಲ್​ಗೆ 10 ಸಾವಿರ ರೂವರೆಗೆ ಏರಿಕೆ

ವಿಜಯಪುರ: ಅಕಾಲಿಕ ಮಳೆಯಿಂದ ತೊಗರಿ ಆವಕದ ಕೊರತೆ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಮಾರುಕಟ್ಟೆಗೆ ಬಾರದ ಹಿನ್ನೆಲೆ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಶುಕ್ರವಾರ ತೊಗರಿ ಬೆಲೆ ಏಕಾಏಕಿ ಕ್ವಿಂಟಾಲ್‌ಗೆ ನಾಲ್ಕು ಸಾವಿರದಿಂದ ಹತ್ತು ಸಾವಿರದವರೆಗೆ ಏರಿಕೆಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ವಿಜಯಪುರ ಭಾಗದ ರೈತರು ಹಿಂದಿನಂತೆ ಜೋಳವನ್ನು ಹೆಚ್ಚಾಗಿ ಬೆಳೆಯುವುದನ್ನು ಕೈಬಿಟ್ಟಿದ್ದಾರೆ. ಬದಲಾಗಿ ಕಳೆದ ಐದು ವರ್ಷಗಳಿಂದ ತೊಗರಿ ಬೆಳೆಗೆ ಆದ್ಯತೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 7 ಲಕ್ಷ …

Read More »