Breaking News

Daily Archives: ಮೇ 29, 2023

ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ : ಡಿ.ಕೆ. ಶಿವಕುಮಾರ

ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ” ಎಂದು ತಿಳಿಸಿದರು.ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರಕಾರ. ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ” ಎಂದರು. “ಯುವಕರು, …

Read More »

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂ, ಡಿಸಿಎಂ ಗಳೊಂದಿಗೆ ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. “ಈ ಸಭೆಯಲ್ಲಿ ಅಭಿವೃದ್ಧಿಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿರುವ ನರೇಂದ್ರ ಮೋದಿ, “ಸಭೆ ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತದ ವಿಧಾನ ಮತ್ತು ಹಲವಾರು ಜನಪರ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿವರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಬಗ್ಗೆಯೂ …

Read More »

ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರ ಶಿವಾನಂದ ಭೂಸಗೋಳ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ಕೊಟಬಾಗಿ ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ …

Read More »

ಯಾರಿಗೆ ಯಾವ ಖಾತೆ? ಸಂಪೂರ್ಣ ವಿವರ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಎಲ್ಲ 34 ಜನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸಿದ್ದರಾಮಯ್ಯ ನಿರೀಕ್ಷೆಯಂತೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆಗಳನ್ನು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಸಚಿವರುರಾಮಲಿಂಗಾರೆಡ್ಡಿಗೆ ಸಾರಿಗೆ ಇಲಾಖೆ: ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಹಿರಿಯ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಬೇಡಿಕೆ ಇಟ್ಟಿದ್ದರೂ ಸಹ ಅಂತಿಮವಾಗಿ ಅದನ್ನು ಡಿ.ಕೆ.ಶಿವಕುಮಾರ್ …

Read More »

ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ

ಬೆಂಗಳೂರು : ನೂತನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲ ಖಾಲಿ ಇರುವ ಶಿಕ್ಷಕರಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ. ಒಟ್ಟು 33 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರಾಥಮಿಕ ಶಾಲೆಗಳಲ್ಲಿ ಪಾಠಮಾಡಲು ಒಟ್ಟು 27 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ ಪಾಠ ಮಾಡಲು ಒಟ್ಟು 6 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ …

Read More »