Breaking News

Daily Archives: ಮೇ 31, 2023

ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು

ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ …

Read More »

ಲಕ್ಷ್ಮಣ ಸವದಿ ಮನೆಗೆ ರಾತ್ರಿ ಡಿಸಿಎಂ ಡಿಕೆಶಿ ಭೇಟಿ: ಸತೀಶ್ ಜಾರಕಿಹೊಳಿ, ಹೆಬ್ಬಾಳ್ಕರ್ ಸಾಥ್

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಬೆಳಗಾವಿಯಲ್ಲಿರುವ ಮನೆಗೆ ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಡಿಕೆಶಿ, ಸವದಿ ಅವರನ್ನು ಸಮಾಧಾನಪಡಿಸಿದರು. ಇದೇ ವೇಳೆ, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿಯೂ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಾಸಕ …

Read More »

ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ

ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ. ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ. ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ …

Read More »