ಮಹಾರಾಷ್ಟ್ರ : ಇಲ್ಲಿನ ಚಿಕಲ್ದಾರ ತಾಲೂಕಿನ ಬಿಹಾಲಿ ಹಳ್ಳಿಯು ಬಿದಿರಿನ ಉತ್ಪನ್ನಗಳ ತಯಾರಿಕೆಯ ಗ್ರಾಮವೆಂದು ಪ್ರಸಿದ್ಧವಾಗಿದೆ. ಬಿದಿರಿನಿಂದ ಬುಟ್ಟಿಗಳು ಹಾಗೂ ಅನೇಕ ಸಣ್ಣ ಮತ್ತು ಆಕರ್ಷಕ ವಸ್ತುಗಳು ಇಲ್ಲಿ ತಯಾರಿಕೆ ನಡೆಸುವುದು ಕಂಡು ಬರುತ್ತವೆ. ಮೆಲ್ಘಾಟ್ ಅಮರಾವತಿಯ ‘ಬಿಹಾಲಿ’ ಹಳ್ಳಿಯ ಪ್ರತೀಕ್ ಎಂಬುವವರ ಮನೆಯಲ್ಲಿ ಬಿದಿರಿನಿಂದ ಮಾಡಿದ ಸೂಪ್ ಬಟ್ಟಲುಗಳು ಮತ್ತು ಬುಟ್ಟಿಗಳು ಸೇರಿದಂತೆ ಅನೇಕ ಸಣ್ಣ ಮತ್ತು ಆಕರ್ಷಕವಾದ ವಸ್ತುಗಳು ಕಂಡುಬರುತ್ತವೆ. ಒಟ್ಟು ಸುಮಾರು 170 ಮನೆಗಳನ್ನು ಹೊಂದಿರುವ …
Read More »Monthly Archives: ಮೇ 2023
ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, :ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …
Read More »ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ.
ಶಿರಸಿ: ಉ.ಕ ಜಿಲ್ಲೆಯ ಶಿರಸಿ ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ. ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆಯವರಿಗೆ ಸೇರಿದ ೨ ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ಬುಧವಾರ ಮಧ್ಯಾಹ್ನ ಬೆಂಕಿ ತಗುಲಿದ್ದು ಕೊಟ್ಯಾಂತರ ರೂ. ಹಾನಿಯಾಗಿದೆ. ಹಾನಿಯಿಂದ ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಹೊಗೆ ಕಾಣಿಸಿಕೊಂಡ …
Read More »Social Media ಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್: ಮಂಗಳೂರು ಪೊಲೀಸ್ ಆಯುಕ್ತರಿಂದ ಎಚ್ಚರಿಕೆ
ಮಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಎಚ್ಚರಿಕೆ ನೀಡಿದ್ದಾರೆ. ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ …
Read More »ಡಿಕೆಶಿಗೆ ಸಿಎಂ ಸ್ಥಾನ ಕೊಡಿ: ರಾಮನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ರಾಮನಗರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕುಮಾರ್ ನೇತೃತ್ವದಲ್ಲಿ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಮೈಸೂರು-ಬೆಂಗಳೂರು ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಡಿಕೆ… ಡಿಕೆ.. ಎಂದು ಘೋಷಣೆ ಕೂಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪೋಸ್ಟರ್ ಗಳನ್ನ ಹಿಡಿದು ಹೈಕಮಾಂಡ್ ಗೆ ಸಿಎಂ ಹುದ್ದೆ ನೀಡುವಂತೆ …
Read More »ನನ್ನ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಕಾರಣರಲ್ಲ.!: ಸೋಮಣ್ಣ ಆಕ್ರೋಶ
ಚಾಮರಾಜನಗರ: ನನ್ನ ಜತೆಯಲ್ಲೇ ಇದ್ದವರು ನನ್ನ ಕತ್ತು ಕೊಯ್ದರು. ನನ್ನ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಕಾರಣರಲ್ಲ. ನಮ್ಮ ಪಕ್ಷದೊಳಗೆ ಇದ್ದವರೇ ಕಾರಣ ಎಂದು ಮಾಜಿ ಸಚಿವ, ಚಾಮರಾಜ ನಗರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಭಾಷಣವಿಡೀ ಹೆಸರು ಪ್ರಸ್ತಾಪ ಮಾಡದೇ ಪಕ್ಷದ ಕೆಲವು ಮುಖಂಡರನ್ನು ತರಾಟೆಗೆ …
Read More »ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು, ನಾಲ್ಕು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಸುತ್ತಿನ ಹೈಕಮಾಂಡ್ ಮಟ್ಟದ ಮಾತುಕತೆಗಳ ನಂತರವೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನಡುವೆ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಬಿಗ್ …
Read More »ಸುಪ್ರೀಂ ಕೋರ್ಟ್ನಲ್ಲಿಂದು ಡಿಕೆಶಿ ಪ್ರಕರಣದ ವಿಚಾರಣೆ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ನಾಲ್ಕು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಸುತ್ತಿನ ಹೈಕಮಾಂಡ್ ಮಟ್ಟದ ಮಾತುಕತೆಗಳ ನಂತರವೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಮಹತ್ವದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಡಿಕೆಶಿ …
Read More »ಪ್ರತ್ಯೇಕ ವಂಚನೆ ಪ್ರಕರಣ: ದುಪ್ಪಟ್ಟು ಹಣ ಕೊಡುವುದಾಗಿ 18 ಲಕ್ಷ ರೂ. ಪಂಗನಾಮ
ಹುಬ್ಬಳ್ಳಿ: ದುಪ್ಪಟ್ಟು ಹಣ ಕೊಡುವುದಾಗಿ ನಂಬಿಸಿ 18 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಉಪನಗರ ಠಾಣೆಯಲ್ಲಿ ದಾಖಲಾಗಿದೆ. ಹೈದರಾಬಾದ್ ಮೂಲದ ರಾಮಕೃಷ್ಣ ಗೋಶಕೊಂಡಾ, ಅಕ್ಕಿಆಲೂರಿನ ಮಾಸೂಮ್ ಎನ್.ಎಂಬುವವರು ಮೋಸ ಮಾಡಿದ್ದಾರೆ ಎಂದು ಇಲ್ಲಿನ ಇಸ್ಲಾಂಪುರ ಪ್ರದೇಶದ ಜುಲಾಮ್ ಮೊಹಿದ್ದೀನ್ ಎಂಬುವರು ದೂರು ನೀಡಿದ್ದಾರೆ. ಟ್ರೇಡಿಂಗ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ 45 ದಿನಗಳಲ್ಲಿ 2 ಪಟ್ಟು ಹಣ ಕೊಡುವುದಾಗಿ ನಂಬಿಸಿ, 10 ಲಕ್ಷ ರೂ. ಬ್ಯಾಂಕ್ ಅಕೌಂಟ್ ಹಾಗೂ 8 …
Read More »ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ: ಪ್ರವೀಣ್ ಸೂದ್ ಟ್ವೀಟ್
ಬೆಂಗಳೂರ: ಸಿಬಿಐನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಕರ್ನಾಟಕ ರಾಜ್ಯ ಪೊಲೀಸ್ ಡಿಜಿ ಆಯಂಡ್ ಐಜಿಪಿ ಪ್ರವೀಣ್ ಸೂದ್ ಟ್ವಿಟ್ ಮಾಡಿ ತಮ್ಮ ಅಧಿಕಾರವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ. ಒಟ್ಟು ಮೂರು ಟ್ವೀಟ್ಗಳ ಮೂಲಕ ಮಾಹಿತಿ ನೀಡಿರುವ ಪ್ರವೀಣ್ ಸೂದ್, ಅಧಿಕಾರವನ್ನು ಶೀಘ್ರದಲ್ಲಿಯೇ ಹಸ್ತಾಂತರ ಮಾಡುತ್ತೇನೆ. ಕರ್ನಾಟಕ ಡಿಜಿ, ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತಿದ್ದೇನೆ. ಇವು ಕರ್ನಾಟಕ ಡಿಜಿ ಆಯಂಡ್ ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ಕೊನೆಯ ಟ್ವೀಟ್ ಆಗಿವೆ …
Read More »