Breaking News

Monthly Archives: ಮೇ 2023

ರಕ್ಕಸಕೊಪ್ಪ ನೀರಿನ ಮಟ್ಟ ತಗ್ಗಿದರೂ ನೋ ಟೆನ್ಶನ್‌

ಬೆಳಗಾವಿ: ಬೇಸಿಗೆ ಕಾಲ ಬಂತೆಂದರೆ ನೀರಿನ ಬವಣೆ ಸಹಜ. ಅದರಂತೆ ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ತಗ್ಗಿದ್ದರಿಂದ ಸದ್ಯ ವಾರಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ನೀರಿನ ಮಟ್ಟ ತಗ್ಗಿದರೂ ಜೂನ್‌ ಮಧ್ಯದವರೆಗೂ ಈ ನೀರನ್ನು ಸಮರ್ಪಕವಾಗಿ ಪೂರೈಸಬಹುದಾಗಿದೆ.   ಬೆಳಗಾವಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕಿಂತಲೂ ಈ ಸಲ ತುಸು ಕಡಿಮೆ ಆಗಿದೆ. ಈಗ …

Read More »

3 ತಿಂಗಳೊಳಗೆ ಫಿಟ್‌ ಆಗಿ ಇಲ್ಲಾ ರಾಜೀನಾಮೆ ನೀಡಿ: ಪೊಲೀಸರಿಗೆ DG ಖಡಕ್‌ ವಾರ್ನಿಂಗ್‌

ಮೊದಲೆಲ್ಲಾ ಪೊಲೀಸರಿಗೂ ಡೊಳ್ಳು ಹೊಟ್ಟೆಗೂ ಅದೇನೋ ಸಂಬಂಧವಿದ್ದಂತಿತ್ತು. ಆದರೆ ಈಗ ಕಾಲ ಬದಲಾಗಿದೆ. ಈಗೀಗ ಪೊಲೀಸ್‌ ಅಧಿಕಾರಿಗಳೂ ಫಿಟ್‌ ಆಂಡ್‌ ಫೈನ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ತಮ್ಮ ಸಹೋದ್ಯೋಗಿಗಳಿಗೂ ಅದೇ ರೀತಿ ಇರುವಂತೆ ಪ್ರೇರಣೆಯನ್ನೂ ಮಾಡುತ್ತಿದ್ದಾರೆ.   ಇದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಅಸ್ಸಾಂನ ಪೋಲಿಸ್‌ ಅಧಿಕಾರಿಯೊಬ್ಬರು ತಮ್ಮ ಸಹೋದ್ಯೋಗಿಗಳಿಗೆ ʻ3 ತಿಂಗಳೊಳಗೆ ಫಿಟ್‌ ಆಗಿ ಇಲ್ಲಾ ರಾಜೀನಾಮೆ ನೀಡಿʼ ಎಂದು ಖಡಕ್‌ ಸೂಚನೆ ನೀಡಿದ್ದಾರೆ. ʻನಾವು ಅಸ್ಸಾಂನ ಐಪಿಎಸ್‌ …

Read More »

ಪಾಕ್ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್: ತಾಳಿಕೋಟೆ ಯುವಕನ ಬಂಧನ

ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಯುಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಪೊಲೀಸ್ ಅತಿಥಿಯಾಗಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ ಮುಲ್ಲಾ ಎಂಬಾತ ಇನ್ಸ್ಟಾಗ್ರಾಂನಲ್ಲಿ ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಸ್ಟೋರಿ ಹಾಕಿದ್ದ.   ಇಬ್ರಾಹಿಂ ಮುಲ್ಲಾನ ಇನ್ಸ್ಟಾಗ್ರಾಂ ವೀಕ್ಷಿಸಿದ ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ತಾಳಿಕೋಟೆ ಪೊಲೀಸರು …

Read More »

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಇದರೊಂದಿಗೆ ಕಳೆದ ನಾಲ್ಕು ತಿಂಗಳಲ್ಲಿ ಬಂದಿರುವ ಎರಡನೇ ಬೆದರಿಕೆ ಕರೆ ಇದಾಗಿದೆ ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ, ಕರೆ ಸ್ವೀಕರಿಸಿದ ಸಿಬ್ಬಂದಿ …

Read More »

ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​

ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಮಹಿಳಾ ಕಂಡಕ್ಟರ್​ ಬಸ್​ನಲ್ಲೇ ಹೆರಿಗೆ ಮಾಡಿಸಿದ ಅಪರೂಪದ ಪ್ರಸಂಗವೊಂದು ನಡೆದಿದೆ. ಚಿಕ್ಕಮಗಳೂರು ಘಟಕದ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಈ ಪ್ರಕರಣ ನಡೆದಿದೆ.ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆಎ-13 ಎಫ್-0855ರಲ್ಲಿ ಬೆಂಗಳೂರು-ಚಿಕ್ಕಮಗಳೂರು ಮಾರ್ಗವಾಗಿ ನಿನ್ನೆ ತೆರಳುತ್ತಿದ್ದಾಗ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.25ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಬಸ್​ನಲ್ಲಿ 15 ಪ್ರಯಾಣಿಕರಿದ್ದರು. ಈ ಬಸ್​ನಲ್ಲಿ …

Read More »

ಪಂಚಮಸಾಲಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಿ : ಮಾಜಿ ಸಚಿವ ಶಶಿಕಾಂತ ನಾಯಿಕ ಆಗ್ರಹ

ಬೆಳಗಾವಿ : ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ಪಂಚಮಸಾಲಿ ಸಮಾಜ ಸಂಪೂರ್ಣ ಬೆಂಬಲ ನೀಡಿದ್ದು. ನಮ್ಮ ಸಮಾಜಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದರು. ಇಂದು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆಯಲ್ಲಿ ಕರ್ನಾಟಕ ಜನ ಬದಲಾವಣೆ ಬಯಸಿದ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಸರ್ಕಾರ ರಚಿಸುತ್ತಿದೆ. ಇದರಿಂದ ನಮಗೂ ಬಹಳಷ್ಟು ಖುಷಿಯಾಗಿದೆ. ಬಿಜೆಪಿಯಲ್ಲಿ ಬಹಳ …

Read More »

ನೂತನ ಶಾಸಕರಾಗಿರುವ ಆಸೀಫ್​ (ರಾಜು) ಸೇಠ್ ಹಾಗೂ ಮಾಜಿ ಶಾಸಕ ಫೀರೋಜ್​​ ಸೇಠ್​ ಅವರು ಸ್ಥಗಿತಗೊಂಡಿದ್ದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಚಾಲನೆ ನೀಡಿದರು.

  ಬೆಳಗಾವಿ‌ಯಲ್ಲಿ ಸ್ಥಗಿತಗೊಂಡಿದ್ದ ಅತೀ ಉದ್ದದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಆಸೀಫ್ ಸೇಠ್​​​ ಚಾಲನೆಬೆಳಗಾವಿ: ಇಲ್ಲಿನ ಕೋಟೆ ಆವರಣದಲ್ಲಿ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ದೇಶದ ಅತೀ ಉದ್ದದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಬೆಳಗಾವಿ ಉತ್ತರ ಕ್ಷೇತ್ರದ ನೂತನ ಶಾಸಕ ಆಸೀಫ್ (ರಾಜು) ಸೇಠ್ ಇಂದು ಚಾಲನೆ ನೀಡಿದರು.   ಫಿರೋಜ್ ಸೇಠ್ ಶಾಸಕರಾಗಿದ್ದ ವೇಳೆ ಕಿಲ್ಲಾ ಕೆರೆ ಆವರಣದಲ್ಲಿ ಅತೀ ಎತ್ತರದ 110 ಮೀಟರ್ ಧ್ವಜಸ್ತಂಭ ನಿರ್ಮಿಸಿ ರಾಷ್ಟ್ರಧ್ವಜ ಹಾರಾಟಕ್ಕೆ ಚಾಲನೆ …

Read More »

ಗೋಸಾಗಣೆ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು

ಬೆಂಗಳೂರು : ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನೇತೃತ್ವದ ರಜಾಕಾಲದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಆರೋಪಿಗಳಾದ ಪುನೀತ್ ಕೆರೆಹಳ್ಳಿ, …

Read More »

ಪಿವಿಆರ್​ ಐನಾಕ್ಸ್ ದೇಶದೆಲ್ಲಡೆ 50 ಸ್ಕ್ರೀನ್​​ ಮುಚ್ಚುವ ನಿರ್ಧಾರ

ಪಿವಿಆರ್​ ಐನಾಕ್ಸ್ ದೇಶದೆಲ್ಲಡೆ 50 ಸ್ಕ್ರೀನ್​​ ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಒಂದು ಕಡೆ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ ಅನ್ನುವ ಮಾತಿದೆ. ಆದರೆ ಚಿತ್ರರಂಗದವರು ಈ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಒಟಿಟಿಯಿಂದ ಎದುರಾಗ್ತಿರುವ ಸಮಸ್ಯೆಯ ಬಗ್ಗೆಯೂ ಆಲೋಚನೆ ಮಾಡ್ತಿಲ್ಲ. ಚಿತ್ರಮಂದಿರಗಳ ಸ್ಥಿತಿ ಗತಿಯ ಕುರಿತು ಚರ್ಚೆ ಮಾಡ್ತಿಲ್ಲ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನ ಮರಳಿ ಕರೆತರುವ ಕುರಿತು ಚಿಂತನ ಮಂಥನ ನಡೆಯುತ್ತಿಲ್ಲ ಮಾಡ್ತಿಲ್ಲ ಎಂಬ ಮಾತುಗಳಿವೆ. ಇತ್ತ ಮಲ್ಟಿಪ್ಲೆಕ್ಸ್​ಗಳು ಭಾರಿ ನಷ್ಟ …

Read More »

ಬೆಂಗಳೂರು ನಗರದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆ ಕುರಿತಂತೆ ಎನ್​ಐಎ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಬೆಂಗಳೂರು : 2020ರ ಆಗಸ್ಟ್ 11ರಂದು ಬೆಂಗಳೂರು ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಎನ್‌ಐಎ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.   ಸಾರ್ವಜನಿಕ ಆಸ್ತಿ ನಷ್ಟ ಆರೋಪ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯಲ್ಲಿ ನಡೆಯುತ್ತಿರುವ ತನಿಖೆ ಮತ್ತು ಈ ಸಂಬಂಧದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಮೊಹಮ್ಮದ್ …

Read More »