Breaking News

Monthly Archives: ಮೇ 2023

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿನ ಮಹತ್ವದ ಘೋಷಣೆ: ಸಿರಿಧಾನ್ಯ ಉತ್ಪಾದನೆಗೆ ಆದ್ಯತೆ ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ 5ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ BPL ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ಬಿಪಿಎಲ್ ಕುಟುಂಬಕ್ಕೆ ಉಚಿತ 3 …

Read More »

ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತ,ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ದರ ಕಡಿಮೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಕಡಿಮೆಯಾಗಿದ್ದು, ಹೊಸ ದರ ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತಗೊಳಿಸಲಾಗಿದೆ. ಇದು 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿಯ ಗೃಹ ಬಳಕೆಯ ಅಡುಗೆ ಅನಿಲದಲ್ಲಿ …

Read More »

ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

ಬೆಳಗಾವಿ: ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ. ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬೆಳಗಾವಿ ಗ್ರಾಮೀಣದ ರೋಡ್ ಶೋ ಕೊನೇ ಕ್ಷಣದಲ್ಲಿ ರದ್ದಾಗಿದೆ. ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾರಿಹಾಳ ಗ್ರಾಮದಲ್ಲಿ ನಿಗದಿಯಾಗಿದ್ದ ಕಿಚ್ಚ ಸುದೀಪ್ ರೋಡ್ ಶೋ ರದ್ದು ಮಾಡಲಾಗಿದೆ. ಬಿಜೆಪಿ …

Read More »

ರಾತ್ರಿ ಪಾನಮತ್ತಳಾಗಿ ಓಲಾಡುತ್ತಯುವಕನ ಇರಿದು ಕೊಲೆಗೈದ ಯುವತಿ

ಬೆಳಗಾವಿ: ರಾತ್ರಿ ಪಾನಮತ್ತಳಾಗಿ ಓಲಾಡುತ್ತ ಚಾಕು ಹಿಡಿದು ರಸ್ತೆಯಲ್ಲಿ ಹೊರಟಿದ್ದ ಯುವತಿಯೊಬ್ಬಳು ಯುವಕನೊಬ್ಬನಿಗೆ ಇರಿದು ಕೊಲೆಗೈದಿದ್ದಾಳೆ. ನಗರದ ಹಳೆ ಪಿಬಿ ರಸ್ತೆಯಲ್ಲಿ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ನಾಗರಾಜ ಭೀಮಸಿ ಪಾಟೀಲ (28) ಕೊಲೆಯಾದ ಯುವಕ. ಕೈಯ್ಯಲ್ಲಿ ಚಾಕು ಹಿಡಿದುಕೊಂಡು ಮಹಿಳೆ ಕುಡಿದ ಮತ್ತಿನಲ್ಲಿ ಓಲಾಡುತ್ತ ರಸ್ತೆಯಲ್ಲಿ ಸಾಗುತ್ತಿದ್ದಳು. ಈ ವೇಳೆ ಬೈಕ್ ನಲ್ಲಿ ಸಾಗುತ್ತಿದ್ದ ನಾಗರಾಜ ಆಕೆಯನ್ನು ವಿಚಾರಿಸಿದಾಗ ಕೆರಳಿದ ಯುವತಿ ಮಾತಿಗೆ ಮಾತು ಬೆಳೆಸಿ ಯುವಕನಿಗೆ …

Read More »

ಮೂರು ವರ್ಷದ ಬಾಲಕ 1 ರೂಪಾಯಿ ಸಿಹಿ ತಿನಿಸಿಗೆ ಬಲಿ.!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮಕ್ಕಳ ಸಿಹಿ ತಿನಿಸು ಇರುವ ಹೆಬ್ಬೆರೆಳು ಗಾತ್ರದ ಗಾಜಿನ ಬಾಟಲಿಯು ಗಂಟಲಲ್ಲಿ‌ ಸಿಲುಕಿಕೊಂಡು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ 8 ನೇ ವಾರ್ಡಿನ ಮದೀನಾ ಗಲ್ಲಿಯ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಸಾವನ್ನಪ್ಪಿದ ಮಗು ಎಂದು ತಿಳಿದು ಬಂದಿದೆ. ಬಾಲಕ ಮಹ್ಮದ್ 1 ಅಂಗಡಿಯಲ್ಲಿ ಸಿಹಿ ತಿನಿಸಿದ್ದ ಬಾಟಲಿ ಕೊಂಡುಕೊಂಡಿದ್ದಾನೆ. ಅದರ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ …

Read More »

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು.!

ಬೀದರ್ : ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋದ ಘಟನೆ ನಡೆದಿದೆ. ಸುನಂಧಾ ಸಂಗಪ್ಪ ಲದ್ದೆ, ಮಗ ಸುಮಿತ್​ ಹಾಗೂ ಮಗಳು ಐಶ್ವರ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಗಪ್ಪ ಲದ್ದೆ ಜೊತೆ ಹೊಲಕ್ಕೆ ಹೋಗಿ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಹಳ್ಳದಲ್ಲಿ ಏಕಾಏಕಿ ನೀರು ಹೆಚ್ಚಾಗಿದ್ದರಿಂದ ತಾಯಿ, ಮಕ್ಕಳು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ …

Read More »

ಬೆಳಗಾವಿ ಉತ್ತರಕ್ಕೇ ಯಾರಾಗ್ತಾರೆ ಅಧಿಪತಿ…?

ಬೆಳಗಾವಿ: ಸುಶಿಕ್ಷಿತ ಮತದಾರರೇ ಹೆಚ್ಚಿರುವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಯು ಸದ್ಯ ಬಿಜೆಪಿ‌ ವಶದಲ್ಲಿದ್ದು, ಕ್ಷೇತ್ರ ಮತ್ತೆ ವಶಕ್ಕೆ‌ ಪಡೆಯಲು ಕೇಸರಿ ಪಡೆ‌ ತೀವ್ರ ಕಸರತ್ತು ನಡೆಸುತ್ತಿದೆ. ಇದಕ್ಕೆ ತಡೆಯೊಡ್ಡಲು ಕಾಂಗ್ರೆಸ್, ಎಂಇಎಸ್ ಕೂಡ ರಣತಂತ್ರ ಹೆಣೆಯುತ್ತಿವೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ‌ ಬದಲು ಡಾ. ರವಿ ಪಾಟೀಲ್​ಗೆ ಬಿಜೆಪಿ ಟಿಕೆಟ್ ನೀಡಿದ್ದು, ಕಾಂಗ್ರೆಸ್​ನಿಂದ ಮಾಜಿ ಶಾಸಕ‌ ಫಿರೋಜ್ ಸೇಠ್ ಬದಲಾಗಿ ಅವರ ಸಹೋದರ‌ ರಾಜು ಸೇಠ್ …

Read More »

ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ್ ಪರ ಪ್ರಿಯಾಂಗಾ ಗಾಂಧಿ ಮತ ಯಾಚಿಸಿದರು.

ಚಿಕ್ಕೋಡಿ(ಬೆಳಗಾವಿ): ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಕುಡಚಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ್ ಪರ ಭರ್ಜರಿ ರೋಡ್ ಶೋ ನಡೆಸಿ ಮಾತ ಯಾಚಿಸಿದರು. ಹಾರುಗೇರಿ ಪಟ್ಟಣದ ಅಥಣಿ-ಗೋಕಾಕ್ ರಸ್ತೆಯಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಪ್ರಿಯಾಂಕಾ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಬೆಲೆ ಏರಿಕೆ ಯಾರು‌ ಮಾಡಿದ್ರು?, ರಾಜ್ಯವನ್ನು ಲೂಟಿ ಯಾರು ಮಾಡಿದರು? ಜಿಎಸ್​ಟಿ ಹೇರಿ ನಿಮ್ಮ ದುಡ್ಡನ್ನು …

Read More »

2 ವರ್ಷದ ನಂತರ ಹೊಸ ಸಾಲ ಪಡೆಯಲ್ಲ’: ಗೋವಾ ಸಿಎಂ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿ

ಪಣಜಿ (ಗೋವಾ) : ಎರಡು ವರ್ಷಗಳ ನಂತರ ರಾಜ್ಯದ ಆದಾಯ ಹೆಚ್ಚಾಗುವುದರಿಂದ ಆವಾಗ ರಾಜ್ಯ ಸರ್ಕಾರ ಹೊಸ ಸಾಲ ಪಡೆಯುವ ಅಗತ್ಯ ಬೀಳಲಾರದು ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿಕಾರಿವೆ. ರಾಜ್ಯ ಸರ್ಕಾರದ ಸಾಲದ ಪ್ರಮಾಣ ಸದ್ಯ 24,175.93 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ರಾಜ್ಯದ ಪ್ರಮುಖ ಆದಾಯ ಮೂಲವಾಗಿದ್ದ ಗಣಿಗಾರಿಕೆ ಇನ್ನೂ ಆರಂಭವಾಗಿಲ್ಲ ಎಂದಿವೆ. ಗಣಿಗಾರಿಕೆ ಇನ್ನಷ್ಟೇ ಆರಂಭವಾಗಬೇಕಿದ್ದು, ಅಲ್ಲಿಯವರೆಗೆ ರಾಜ್ಯ ಸರ್ಕಾರವು …

Read More »

ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ. ಹತ್ತು ಹಲವು ಸಭೆ ನಡೆಸಿ ಸಲಹೆ ಪಡೆದು ಸಿದ್ಧಪಡಿಸಿರುವ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ಯಾವ ರೀತಿ ಭರವಸೆ ಸಿಗಲಿದೆ ಎನ್ನುವುದು ಬಹಿರಂಗವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ 10 ದಿನಗಳು ಮಾತ್ರ ಬಾಕಿ ಇದ್ದು, ಬೆಳಗ್ಗೆ 10 ಗಂಟೆಗೆ ನಗರದ ಖಾಸಗಿ ಹೋಟೆಲ್​​​ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ‌. ಈಗಾಗಲೇ ಕಾಂಗ್ರೆಸ್ ಐದು ಗ್ಯಾರಂಟಿಗಳ ಮೂಲಕ ಬಹುತೇಕ ಪ್ರಣಾಳಿಕೆಯ ಅಂಶವನ್ನು ಬಹಿರಂಗಗೊಳಿಸಿದೆ. ಹಾಗೆಯೇ ಪಂಚರತ್ನ ಯೋಜನೆಗಳ ಪ್ರಣಾಳಿಕೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಹಾಗಾಗಿ ಬಿಜೆಪಿ ಪ್ರಣಾಳಿಕೆ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಪ್ರಣಾಳಿಕೆ ಸಿದ್ಧಪಡಿಸಲು ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿ ರಚಿಸಿದ್ದು, ವಿವಿಧ ವಲಯಗಳ ನಿರೀಕ್ಷೆಗಳು ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸಿ ತಜ್ಞರ ಸಲಹೆ ಪಡೆದುಕೊಳ್ಳಲಾಗಿತ್ತು. ಈ ಕುರಿತು ಮಾಹಿತಿ ನೀಡಿರುವ ಡಾ.ಸುಧಾಕರ್, ಪಕ್ಷದ ಪ್ರಣಾಳಿಕೆ ಸಮಿತಿಯಲ್ಲಿ ಸಚಿವ ಬಿ.ಸಿ ನಾಗೇಶ್, ಭಗವಂತ ಖೂಬಾ ಸೇರಿದಂತೆ ಹಲವರು ಇದ್ದಾರೆ. ಎಲ್ಲರೂ ಸೇರಿ ಸಭೆ ಮಾಡಿದ್ದೇವೆ. ಪ್ರಣಾಳಿಕೆಗೆ ಅಭಿಪ್ರಾಯ ಸಂಗ್ರಹ ಮಾಡಿ, ಎಲ್ಲರ ಸಲಹೆ ಪಡೆದಿದ್ದೇವೆ‌. ವಿಭಾಗ, ಜಿಲ್ಲೆ, ತಾಲೂಕುವಾರು ಪಟ್ಟಿ ಮಾಡಿದ್ದೇವೆ. ಈ ಬಾರಿ ನಮ್ಮ ಸರ್ಕಾರ ಬಂದರೆ ಏನು ಮಾಡಬಹುದು ಅಂತ ಪ್ರಣಾಳಿಕೆಯಲ್ಲಿ ಹೇಳಲಿದ್ದೇವೆ ಎಂದರು. ನಮ್ಮ ಕಮಿಟಿಯಲ್ಲಿ ಸಾಕಷ್ಟು ಎಕ್ಸ್‌ಪರ್ಟ್ಸ್‌ ಇದ್ದಾರೆ. ಕರ್ನಾಟಕ ರಾಜ್ಯಕ್ಕೆ ನಮ್ಮ ಪ್ರಣಾಳಿಕೆ ಮಾದರಿಯಾಗಲಿದೆ‌, ದೇಶಕ್ಕೂ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿ ಪ್ರಣಾಳಿಕೆ ಇರಲಿದೆ. ಅಂಗೈಯಲ್ಲಿ ಚಂದ್ರ ತೋರಿಸುವ ಕೆಲಸವಂತೂ ಮಾಡಲ್ಲ. ನಮ್ಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಪ್ರಣಾಳಿಕೆ ಇರಲಿದೆ. ರಾಮರಾಜ್ಯ ನಿರ್ಮಾಣ ಪರಿಕಲ್ಪನೆ ಅಡಿಯಲ್ಲಿ ರಾಜ್ಯ ನಿರ್ಮಾಣಕ್ಕೆ ಪೂರಕವಾಗಿ ನಮ್ಮ ಪ್ರಣಾಳಿಕೆ ಇರಲಿದೆ. ಗ್ರೇಟರ್ ಬೆಂಗಳೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಬಯಲು ಸೀಮೆ ಹೀಗೆ ವಲಯವಾರು ಪ್ರಣಾಳಿಕೆ ಮಾಡಿದ್ದೇವೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬೆಂಗಳೂರು: ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಹಾಗೂ ಜೆಡಿಎಸ್​ನ ಪಂಚರತ್ನ ಭರವಸೆಗಳ ನಡುವೆ ಆಡಳಿತಾರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ. ಹತ್ತು ಹಲವು ಸಭೆ ನಡೆಸಿ ಸಲಹೆ ಪಡೆದು ಸಿದ್ಧಪಡಿಸಿರುವ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ಯಾವ ರೀತಿ ಭರವಸೆ ಸಿಗಲಿದೆ ಎನ್ನುವುದು ಬಹಿರಂಗವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ 10 ದಿನಗಳು ಮಾತ್ರ ಬಾಕಿ ಇದ್ದು, …

Read More »