ಬೆಳಗಾವಿ: ನಾಲ್ಕು ಜನರು ಸಾಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಖಾನಾಪುರ ತಾಲೂಕಿನ ಗೋಲಿಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದರು. ಯಲ್ಲಪ್ಪ ಪ್ರಕಾಶ ವಣ್ಣೂರ(25) ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ಪಲ್ಲವಿ ವಣ್ಣೂರ(16), ಐಶ್ವರ್ಯಾ ವಣ್ಣೂರ(15) ಭೀಮಪ್ಪ ಬಸಪ್ಪ ವಣ್ಣೂರ(40) ಗಾಯಗೊಂಡಿದ್ದಾರೆ. ಗಾಯಾಳುಗಳ ದೇಹದ ಭಾಗಗಳು …
Read More »Daily Archives: ಜೂನ್ 1, 2023
ಮಹಾರಾಷ್ಟ್ರ: ಬಾಯಿಯ ನೈರ್ಮಲ್ಯ ಅಭಿಯಾನಕ್ಕೆ ‘ನಗುವಿನ ರಾಯಭಾರಿ’ ಆಗಿ ಸಚಿನ್ ನೇಮಕ
ಮುಂಬೈ: ಬಾಯಿಯ ಆರೋಗ್ಯವನ್ನು ಉತ್ತೇಜಿಸುವ ಮಹಾರಾಷ್ಟ್ರದ ಸ್ವಚ್ಚ ಮುಖ್ ಅಭಿಯಾನಕ್ಕೆ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರು ‘ನಗುವಿನ ರಾಯಭಾರಿ’ (ಸ್ಮೈಲ್ ಅಂಬಾಸಿಡರ್) ಆಗಿ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ತೆಂಡೂಲ್ಕರ್ ಅವರೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದರು. ಮುಂದಿನ ಐದು ವರ್ಷಗಳ ಕಾಲ ಬ್ಯಾಟಿಂಗ್ ದಿಗ್ಗಜ ತೆಂಡೂಲ್ಕರ್ ಪ್ರಚಾರದ ಬ್ರಾಂಡ್ ಅಂಬಾಸಿಡರ್ ಆಗಿರುತ್ತಾರೆ. ಸ್ವಚ್ಛ …
Read More »ಶಿಂದೆ ಬಣದ 22 ಶಾಸಕರು, 9 ಸಂಸದರು ಶೀಘ್ರ ರಾಜೀನಾಮೆ: ಉದ್ಧವ್ ಠಾಕ್ರೆ
ಮುಂಬೈ: ಶಿವಸೇನಾದ ಏಕನಾಥ್ ಶಿಂದೆ ಬಣದ 22 ಶಾಸಕರು ಮತ್ತು 9 ಸಂಸದರು ರಾಜೀನಾಮೆ ನೀಡಲಿದ್ದಾರೆ ಎಂದು ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ. ಬಿಜೆಪಿಯ ಮಲತಾಯಿ ಧೋರಣೆಯಿಂದ ಉಸಿರುಗಟ್ಟಿದ ವಾತಾವರಣದಲ್ಲಿ ಬೇಸತ್ತಿರುವ ಅವರು, ಶಿಂದೆ ಬಣವನ್ನು ತೊರೆಯಲಿದ್ದಾರೆ ಎಂದು ಉದ್ಧವ್ ಹೇಳಿದ್ದಾರೆ. ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ, ಬಿಜೆಪಿಯಿಂದ ಮಲತಾಯಿ ಧೋರಣೆ ಎದುರಿಸುತ್ತಿದ್ದೇವೆ ಎಂಬ ಶಿವಸೇನಾ ಸಂಸದ …
Read More »ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ
ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ. ಇದು ಅತಿದೊಡ್ಡ ದೇಶ ವಿರೋಧಿ ಕೃತ್ಯ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷ ಅಧಿಕಾರ ಪೂರ್ಣಗೊಳಿಸಿರುವುದರ ವಿರುದ್ಧ ಬುಧವಾರವೂ ಖರ್ಗೆ ವಾಗ್ದಾಳಿ ಮುಂದುವರಿಸಿದ್ದಾರೆ. ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡುವುದು ದೇಶಕ್ಕೆ ದೊಡ್ಡ ಹಾನಿ. …
Read More »2 ತಿಂಗಳಲ್ಲಿ 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಮಾನದಂಡಗಳನ್ನು ಪಾಲಿಸದ ಆರೋಪದಿಂದ ಕಳೆದ ಎರಡು ತಿಂಗಳಲ್ಲಿ ದೇಶದಾದ್ಯಂತ ಸುಮಾರು 40 ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು, ಗುಜರಾತ್, ಅಸ್ಸಾಂ, ಪಂಜಾಬ್, ಆಂಧ್ರಪ್ರದೇಶ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದ ನೂರಕ್ಕೂ ಹೆಚ್ಚು ಕಾಲೇಜುಗಳೂ ಇದೇ ಕ್ರಮ ಎದುರಿಸಲಿವೆ ಎಂದು ಆ ಮೂಲಗಳು ಮಾಹಿತಿ ನೀಡಿವೆ. ನಿಯಮಗಳ ಉಲ್ಲಂಘನೆ ಮತ್ತು ಸಿ.ಸಿ. ಟಿ.ವಿ ಕ್ಯಾಮೆರಾ ಅವಳವಡಿಕೆ, ಬಯೊಮೆಟ್ರಿಕ್ ಹಾಜರಾತಿ …
Read More »ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಸೋಲು ಖಚಿತ: ರಾಹುಲ್ ಗಾಂಧಿ
ನವದೆಹಲಿ/ಸಾಂತಕ್ಲಾರ (ಅಮೆರಿಕ): ‘ಭಾರತದಲ್ಲಿನ ಒಂದು ಗುಂಪಿನ ಜನರು ಜಗತ್ತಿನಲ್ಲಿ ಎಲ್ಲವೂ ತಮಗೇ ತಿಳಿದಿದೆ. ದೇವರಿಗಿಂತಲೂ ಹೆಚ್ಚು ತಿಳಿವಳಿಕೆ ಇದೆ ಎಂದುಕೊಂಡಿದ್ದಾರೆ. ಇದೊಂದು ಕಾಯಿಲೆ. ನಮ್ಮ ಪ್ರಧಾನಿಯೂ ಇಂಥ ಪ್ರಭೇದದ ಜನರಲ್ಲಿ ಒಬ್ಬರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಾಗರೋತ್ತರ ಭಾರತೀಯ ಕಾಂಗ್ರೆಸ್ ಮಂಗಳವಾರ ಆಯೋಜಿಸಿದ್ದ ‘ಪ್ರೀತಿಯ ಅಂಗಡಿ’ (ಮೊಹಬ್ಬತ್ ಕಿ ದುಕಾನ್) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿಧ ಕ್ಷೇತ್ರಗಳು, ಸಂಘಟನೆಯವರು ಇದರಲ್ಲಿ ಭಾಗವಹಿಸಿದ್ದರು. …
Read More »ಕಾಂಗ್ರೆಸ್ ಗ್ಯಾರಂಟಿ ಕುಟುಕಿದ ಪ್ರಧಾನಿ ನರೇಂದ್ರ ಮೋದಿ
ಜೈಪುರ (ಪಿಟಿಐ): ’50 ವರ್ಷಗಳ ಹಿಂದೆಯೇ ಬಡತನ ನಿರ್ಮೂಲನೆ ಮಾಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡಿತ್ತು. ಆ ಗ್ಯಾರಂಟಿ ಇಂದಿಗೂ ಈಡೇರಿಲ್ಲ. ಬಡವರನ್ನು ಹಾದಿ ತಪ್ಪಿಸುವುದೇ ಕಾಂಗ್ರೆಸ್‌ನ ನೀತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಕುಟುಕಿದ್ದಾರೆ. ಕೇಂದ್ರ ಸರ್ಕಾರದ ಒಂಬತ್ತು ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ರಾಜಸ್ಥಾನದ ಅಜ್ಮೀರ್‌ನಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಬಡವರಿಗೆ ದ್ರೋಹ ಬಗೆದಿದೆ. ತನ್ನ ಆಡಳಿತಾವಧಿಯಿಂದಲೂ ಬಡವರನ್ನು ಹಾದಿ ತಪ್ಪಿಸುವ ನೀತಿ ಅಳವಡಿಸಿಕೊಂಡು ಬರುತ್ತಿದೆ. ‘ಕೈ’ …
Read More »ಎಲ್‌ಪಿಜಿ ಸಿಲಿಂಡರ್ ಬೆಲೆ ₹83.50 ಕಡಿತ
ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರ ಗುರುವಾರ ₹83.50 ಕಡಿತಗೊಂಡಿದೆ. ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್ ಬೆಲೆ ₹1773 ಆಗಿದೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
Read More »2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು : ನಿತಿನ್ ಗಡ್ಕರಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು. ‘ಟೈಮ್ಸ್ ನೆಟ್‌ವರ್ಕ್ ಇಂಡಿಯಾ ಎಕಾನಾಮಿಕ್ಸ್’ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿತಿನ್ ಗಡ್ಕರಿ, ‘ಕಳೆದ ಒಂಭತ್ತು ವರ್ಷದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಅಭಿವೃದ್ದಿ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸಿದೆ. ಅಭಿವೃದ್ದಿ ಕೆಲಸಗಳನ್ನು ನೋಡಿಯೇ ದೇಶದ ಜನತೆ ಚುನಾವಣೆಯಲ್ಲಿ ನಮ್ಮನ್ನು ಬಹುಮತದಲ್ಲಿ ಗೆಲ್ಲಿಸಲಿದ್ದಾರೆ’ ಎಂದರು. …
Read More »ಬ್ರಿಜ್‌ಭೂಷಣ್ ಬಂಧನಕ್ಕೆ ಉತ್ತರಪ್ರದೇಶದಲ್ಲಿ ನಡೆದ ರೈತರ ಮಹಾಪಂಚಾಯತ್ ಒತ್ತಾಯ
ಲಖನೌ: ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಖ್ಯಾತ ಕುಸ್ತಿಪಟುಗಳ ಜೊತೆ ಪೊಲೀಸರು ನಡೆದುಕೊಂಡ ರೀತಿಯನ್ನು ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ರೈತರ ಮಹಾಪಂಚಾಯತ್ ಟೀಕಿಸಿದೆ. ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿರುವ ಸಭೆ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿದೆ. ‘ನಮ್ಮ ಹೆಣ್ಣುಮಕ್ಕಳ(ಮಹಿಳಾ ಕುಸ್ತಿಪಟುಗಳು) ಜೊತೆ ನಾವು ದೃಢವಾಗಿ …
Read More »