ಕೊಪ್ಪಳ: ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿರುವ ಪಿಎಸ್‌ಐ ಹಗರಣ, 40 ಪರ್ಸೆಂಟ್ ಹಗರಣ ಹಾಗೂ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು. ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕೆಲಸ ಮಾಡಿದ್ದೇವೆ. ಆದರೆ, ಇನ್ನು …
Read More »Daily Archives: ಜೂನ್ 3, 2023
ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ : ಷರತ್ತು ಮತ್ತು ನಿಬಂಧನೆಗಳು ಹೀಗಿವೆ..
ಬೆಂಗಳೂರು : ರಾಜ್ಯದ ಪದವೀಧರರು, ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡುವ ಕರ್ನಾಟಕ ಯುವ ನಿಧಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಯೋಜನೆ ಜಾರಿಗೆ ಅನುಮೋದನೆ ಸಿಕ್ಕಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ. ಅದರಂತೆ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ಪ್ರತಿ ತಿಂಗಳು ರೂ.3,000, ಡಿಪ್ಲೋಮಾ ಶಿಕ್ಷಣ ಪಡೆದಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ರಂತೆ ನಿರುದ್ಯೋಗ ಭತ್ಯೆ …
Read More »ನೀವೇ ಈ ಚುನಾವಣೆ ಮಾಡಿ ನನ್ನನ್ನು ಗೆಲ್ಲಿಸಿದ್ದೀರಿ: ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ
ರಾಮನಗರ: ನಾನು ಇಲ್ಲಿಗೆ ಅಭಿನಂದನೆ ಮಾಡಿಸಿಕೊಳ್ಳುವುದಕ್ಕಿಂತ, ನಿಮಗೆ ಅಭಿನಂದನೆ ತಿಳಿಸಲು ಬಂದಿದ್ದೇನೆ. ನೀವು ಶಕ್ತಿ ತುಂಬಿದ್ದಕ್ಕೆ ಉಪಕಾರ ಸ್ಮರಿಸಿ ನಿಮ್ಮ ಸೇವೆಗೆ ಸಿದ್ಧ ಎಂದು ತಿಳಿಸಲು ಇಲ್ಲಿಗೆ ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ಕಬ್ಬಾಳು, ಸಾತನೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕೃತಜ್ಞತಾ ಸಭೆಯಲ್ಲಿ ಮಾತನಾಡಿ, ರಾಜ್ಯದ ಇತಿಹಾಸದಲ್ಲಿ 1,23,000 ಮತಗಳ ಅಂತರದ ದಾಖಲೆಯ ಗೆಲುವನ್ನು ನೀವು ನನಗೆ ಕೊಟ್ಟಿದ್ದೀರಿ. ನನ್ನ ಕಟ್ಟಿಹಾಕಲು …
Read More »KSRTC ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ.: ಡಿಕೆ ಶಿವಕುಮಾರ್
ರಾಮನಗರ: ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಎಲ್ಲಿಗೆ ಬೇಕಾದರೂ ಹೋಗಿ, ಓಡಾಡಿ. ಆದರೆ ಗಂಡಸರು ಟಿಕೆಟ್ ತಗೆದುಕೊಂಡು ಓಡಾಡಿ. ಕೆಎಸ್‌ಆರ್ ಟಿಸಿ ನಡಿಯಬೇಕಲ್ಲ, ಅದಕ್ಕೆ ಗಂಡಸರು ಟಿಕೆಟ್ ತಕೊಳ್ರಪ್ಪ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕಬ್ಬಾಳು ಗ್ರಾಮದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ. …
Read More »ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್.! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ
ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ. ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 …
Read More »ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ್ ಸಚಿವ ಕೆ ವೆಂಕಟೇಶ್ ಪ್ರಶ್ನೆ
ಮೈಸೂರು: ಗೋಹತ್ಯೆ ನಿಷೇಧಿಸಿ ಹಿಂದಿನ ಬಿಜೆಪಿ ಸರ್ಕಾರ ಕಾನೂನು ಜಾರಿಗೆ ತಂದಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಈ ಕಾನೂನು ರದ್ದುಗೊಳಿಸುವ ನಿರ್ಧಾರ ಮಾಡಿದೆಯಾ ಎಂಬ ಪ್ರಶ್ನೆ ಉದ್ಬವಿಸಿದೆ. ಏಕೆಂದರೆ, ಈ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ನ ನಾಯಕರು ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಪುನರ್ ಪರಿಶೀಲಿಸುವ ಮಾತುಗಳನ್ನಾಡುತ್ತಿದ್ದಾರೆ. ಇದೀಗ ನೂತನ ಪಶು ಸಂಗೋಪನ ಸಚಿವರು ಸಹ ಇದೇ ದಾಟಿಯಲ್ಲಿ ಮಾತನಾಡಿದ್ದಾರೆ. “ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ …
Read More »ಒಡಿಶಾ ರೈಲು ದುರಂತಕ್ಕೆ ಕಾರಣವೇನು.. ಹೊರಬಿತ್ತು ಪ್ರಾಥಮಿಕ ತನಿಖಾ ಮಾಹಿತಿ
ನವದೆಹಲಿ: ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ಮಾಹಿತಿ ಹೊರಬಿದ್ದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್‌ಗೆ ಪ್ರವೇಶಿಸಿ ಬಹಾನಗರ್ ಬಜಾರ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳು ಚದುರಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಆ ಬೋಗಿಗಳಿಗೆ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ …
Read More »ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.
ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ. ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ …
Read More »ಹಾವೇರಿಯಲ್ಲಿದೆ ಸುಸಜ್ಜಿತ ಅತ್ಯಾಧುನಿಕ ಗ್ರಂಥಾಲಯ:
ಹಾವೇರಿ: ಮೊಬೈಲ್ ಹಾವಳಿಗೆ ಮರೆಮಾಚುತ್ತಿರುವ ಹವ್ಯಾಸಗಳಲ್ಲಿ ಓದುವ ಹವ್ಯಾಸ ಸಹ ಒಂದು. ಈ ಹಿಂದೆ ಪ್ರತಿ ಗ್ರಾಮಕ್ಕೆ ಒಂದು ಗ್ರಂಥಾಲಯಗಳಿದ್ದವು. ಗ್ರಾಮದ ಜನರು ದಿನಪತ್ರಿಕೆ ವಾರಪತ್ರಿಕೆ ಮಾಸಿಕ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆ ಓದಲು ಗ್ರಂಥಾಲಯಕ್ಕೆ ಬರುತ್ತಿದ್ದರು. ಅದರ ಜೊತೆಗೆ ಕನ್ನಡ ನುಡಿಯ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಕವನಸಂಕಲನ, ಕಾದಂಬರಿ, ಕಾವ್ಯ ಪ್ರಭಂದಗಳು ಕಾದಂಬರಿಗಳು ಕಥಾಸಂಕಲನ ಸೇರಿದಂತೆ ವಿವಿಧ ಪ್ರಕಾರದ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಅಷ್ಟೇ ಯಾಕೆ ಕನ್ನಡದ ಆದಿಕವಿಗಳಿಂದ ಹಿಡಿದು …
Read More »ಜಿಲ್ಲಾ ಉಸ್ತುವಾರಿಗೆ ಸಚಿವರ ಪೈಪೋಟಿ ಆರಂಭ: ಇಲ್ಲಿದೆ ಸಂಭಾವ್ಯ ಪಟ್ಟಿ!!
ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು. ಸಂಪುಟ ರಚನೆ, ಖಾತೆ ಹಂಚಿಕೆಯೂ ಆಯಿತು. ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಿನ್ನೆಯಷ್ಟೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೀಗ ಜಿಲ್ಲಾ ಉಸ್ತುವಾರಿಗೆ ಪೈಪೋಟಿ ಆರಂಭವಾಗಿದೆ. ಮೈಸೂರು, ತುಮಕೂರು ಮತ್ತು ಧಾರವಾಡ ಜಿಲ್ಲೆಗಳ ಉಸ್ತುವಾರಿಗಾಗಿ ಸಚಿವರುಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಸಚಿವರುಗಳಿಲ್ಲದ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ಹಾಸನ, ದಕ್ಷಿಣ ಕನ್ನಡಕ್ಕೆ ಯಾರು ಉಸ್ತುವಾರಿಗಳಾಗಲಿದ್ದಾರೆ ಎಂಬ ಕುತೂಹಲದ ಜೊತೆಗೆ …
Read More »