Breaking News

Daily Archives: ಜೂನ್ 3, 2023

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಗೋರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯರಗುಂಟಿ ಗ್ರಾಮ ಬರುತ್ತದೆ. ಇತ್ತೀಚೆಗೆ ಕಲುಷಿತ ನೀರಿನಿಂದ ಗೋರೆಬಾಳ ಗ್ರಾಮದಲ್ಲಿ ಹಲವು ಜನರು ವಾಂತಿ – ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗೋರೆಬಾಳ ಗ್ರಾಮದಲ್ಲಿ ವಾಂತಿ – ಭೇದಿ ಪ್ರಕರಣ ನಿಯಂತ್ರಣಕ್ಕೆ ಬರುವ ಮುನ್ನವೇ ಪಕ್ಕದ …

Read More »

ಗ್ಯಾರಂಟಿಗಳಲ್ಲಿ ಗೊಂದಲಗಳಿವೆ, ಕಾಂಗ್ರೆಸ್​ನವರು​ ಜನರಿಗೆ ಮೋಸ ಮಾಡಿದ್ದಾರೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಒಡಿಶಾದ ರೈಲು ದುರಂತ ಎಲ್ಲರಿಗೂ ನೋವು, ದುಃಖವನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರೈಲು ಅಪಘಾತ ನಡೆಯದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಬಹುದೊಡ್ಡ ದುರಂತ ಸಂಭವಿಸಿ, 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್​ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಹಾರ ಕಾರ್ಯಗಳು ಭರದಿಂದ ನಡೆಯುತ್ತಿವೆ ಎಂದು ತಿಳಿಸಿದರು. ಘಟನೆಯ …

Read More »

ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ

ಬೆಳಗಾವಿ: ಬೆಳಗಾವಿ ಏರ್​ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. ಅಗ್ನಿ …

Read More »

ಕೌಟುಂಬಿಕ ಕಲಹ: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಳಗಾವಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವ್ವ ಹಣಮಂತ ಹಿಡಕಲ್(30) ಕೊಲೆಯಾದ ದುರ್ದೈವಿ. ಹಣಮಂತ ಸಿದ್ದಪ್ಪ ಹಿಡಕಲ್( 35) ಕೊಲೆ ಆರೋಪಿ. ಪ್ರಕರಣದ ವಿವರ: ಪತಿ ಹಣಮಂತ ಯಾವುದೇ ಕೆಲಸ ಮಾಡದೇ ಓಡಾಡಿಕೊಂಡಿದ್ದನಂತೆ. ಪತ್ನಿ ಬಸವ್ವ ಕೂಲಿ ಕೆಲಸ ಮಾಡಿ ಸಂಸಾರದ ಬಂಡಿ ಸಾಗಿಸುತ್ತಿದ್ದರು. ಪತಿ ಹಣಮಂತನಿಗೆ ನೀನು ಕೆಲಸ ಮಾಡುತ್ತಿಲ್ಲ …

Read More »

ಬೆಳಗಾವಿಯಲ್ಲಿ ವಾರ್ಡ್ ಸಮಿತಿ ರಚನೆ ವಿಳಂಬ: ನಾಗರಿಕರ ಅಸಮಾಧಾನ

ಬೆಳಗಾವಿ: ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ರಚನಾತ್ಮಕವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಕ್ಕಾಗಿ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕೆಂಬ ಕಾನೂನಿದೆ. ಆದರೆ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆ ಸದಸ್ಯರು ಆಯ್ಕೆಯಾಗಿ 2 ವರ್ಷ ಕಳೆಯುತ್ತಾ ಬಂದರೂ ವಾರ್ಡ್ ಸಮಿತಿ ರಚನೆ ಆಗದೇ ಇರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತದಲ್ಲಿ ನಾಗರಿಕರ ಸಹಭಾಗಿತ್ವದೊಂದಿಗೆ ವಾರ್ಡ್‌ಗಳಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕು ಎಂಬ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ಸ್ ಕಾಯ್ದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »