ಬೆಂಗಳೂರು: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ, ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆ ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಭೀಮ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಎಚ್ಚರಿಸಿದರು. ಜಾತಿ ಸಮಾಜಕ್ಕೆ …
Read More »Daily Archives: ಜೂನ್ 10, 2023
ದಾವಣಗೆರೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ದಾವಣಗೆರೆ : ಜಿಲ್ಲೆಯಜಗಳೂರು ತಾಲೂಕಿನಲ್ಲಿ ಇಂದು ಜೋರು ಮಳೆ ಸುರಿದಿದ್ದು, ಸಿಡಿಲು ಬಡಿದು ಇಬ್ಬರು ಅಸುನೀಗಿದ್ದಾರೆ. ಅಣಬೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗೊಲ್ಲರಹಟ್ಟಿ ಗ್ರಾಮದ ಕಾಟಲಿಂಗಪ್ಪ (42) ಹಾಗೂ ರಾಜು (32) ಮೃತರು. ಕಾಟಲಿಂಗ ಹಾಗು ರಾಜು ಸೇರಿ ಐವರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದರು. ಬೆಳಗ್ಗೆಯಿಂದ ಸಂಜೆಯತನಕ ಹತ್ತಿ ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂದಿರುಗಬೇಕಿತ್ತು. ಇದೇ ಸಮಯಕ್ಕೆ ಸರಿಯಾಗಿ ಮಳೆ ಆರಂಭವಾಗಿದೆ. ಮಳೆಯಿಂದ ಆಶ್ರಯ …
Read More »ಮಕ್ಕಳ ಜೀವದ ಜೊತೆ ಚೆಲ್ಲಾಟ: ಆಟೋ ಚಾಲಕರ ವಿರುದ್ಧ ಖಡಕ್ ಕ್ರಮಕ್ಕೆ ಮುಂದಾದ ಹು-ಧಾ ಪೊಲೀಸರು
ಹುಬ್ಬಳ್ಳಿ : ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿವೆ. ಮಕ್ಕಳನ್ನು ಶಾಲೆಗಳಿಗೆ ಬಿಡುವ ಮತ್ತು ಕರೆದುಕೊಂಡು ಬರುವ ಆಟೋ ರಿಕ್ಷಾ ಹಾಗೂ ಕ್ಯಾಬ್ ಚಾಲಕರು ಹಣದಾಸೆಗೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಆರು ಮಂದಿ ಕೂರುವ ಆಸನದಲ್ಲಿ ಹತ್ತರಿಂದ ಹದಿನೈದು ಮಂದಿ, ಚಾಲಕನ ಅಕ್ಕಪಕ್ಕ ನಾಲ್ವರು, ಬೀಳುವ ಭಯದಲ್ಲಿ ಆಟೋವನ್ನು ಬಿಗಿಯಾಗಿ ಕಷ್ಟಪಟ್ಟು ಹಿಡಿದುಕೊಳ್ಳುವ ಮಕ್ಕಳು, ಎರಡೂ ಬಾಗಿಲ ಹೊರಗಡೆ ಬ್ಯಾಗ್‌ಗಳ ರಾಶಿ, ಉಸಿರುಗಟ್ಟುವ ವಾತಾವರಣದಲ್ಲಿ ಎಳೆ ಜೀವಗಳ ಪಯಾಣ. ಇದು ಶಾಲಾ ಮಕ್ಕಳ …
Read More »3ನೇ ಬಾರಿ ಸತೀಶ್ ಜಾರಕಿಹೊಳಿಗೆ ಒಲಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟ
ಬೆಳಗಾವಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಇಂದು ಹಂಚಿಕೆಯಾಗಿದ್ದು, ನಿರೀಕ್ಷೆಯಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸತೀಶ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿ ಜಿಲ್ಲಾ ಮಂತ್ರಿಯಾಗಿದ್ದಾರೆ. ಎರಡು ವರ್ಷದ ಬಳಿಕ ಬೆಳಗಾವಿ ಜಿಲ್ಲೆಯವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. 2020ರ ಫೆಬ್ರವರಿಯಲ್ಲಿ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದ ರಮೇಶ ಜಾರಕಿಹೊಳಿ ಮಾರ್ಚ್ 3, 2021ರಂದು ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ರಾಜೀನಾಮೆ …
Read More »ಉಚಿತ ವಿದ್ಯುತ್ ಜಾರಿಗೆ ತನ್ನಿ: ರಾಜ್ಯ ಸರ್ಕಾರದ ವಿರುದ್ದ ಬೆಳಗಾವಿ ನೇಕಾರರ ಪ್ರತಿಭಟನೆ
ಬೆಳಗಾವಿ : ಒಂದೆಡೆ ಸರ್ಕಾರ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ್ದರೆ, ಮತ್ತೊಂದೆಡೆ ಮಗ್ಗಗಳ ವಿದ್ಯುತ್ ದರ ಹೆಚ್ಚಾಗಿದ್ದು ನೇಕಾರರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡಿರುವ ಬೆಳಗಾವಿಯ ನೇಕಾರರು ವಿದ್ಯುತ್ ಬಿಲ್ ಕಟ್ಟದಿರಲು ನಿರ್ಧರಿಸಿದ್ದಾರೆ. ಅಲ್ಲದೇ ಉಚಿತ ವಿದ್ಯುತ್ ಜಾರಿ ಸೇರಿ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸೇವಾ ಸಂಘದ ನೇತೃತ್ವದಲ್ಲಿ ನೇಕಾರರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ …
Read More »ಜುಲೈ 3 ರಿಂದ 14 ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದೆ. ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಜುಲೈ 5 ರಿಂದ 7 ರವರೆಗೆ ಕಲಾಪ ನಡೆಯಲಿದೆ. ಜು.8 ಮತ್ತು 9 ರಂದು ಸರ್ಕಾರಿ ರಜೆ ಇದ್ದು, 10 ರಿಂದ 14 ರವರೆಗೆ ಕಲಾಪ …
Read More »ಬಂಟ್ವಾಳ: ವಿದ್ಯುತ್ ಶಾಕ್ಗೆ ವ್ಯಕ್ತಿ ಬಲಿ, ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬಂಟ್ವಾಳ : ಮರದಿಂದ ಅಡಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಶಾಫಿ (28) ಮೃತ ದುರ್ದೈವಿ. ಶಾಫಿ ಅವರು ಕಳೆದ ಅನೇಕ ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು. ಈ ವರ್ಷ ಅಡಿಕೆ ಕೀಳಲು ಸಾವಿರಾರು ರೂ. ನೀಡಿ ಹೊಸ ಸಲಾಕೆಯನ್ನು ಖರೀದಿಸಿದ್ದರು. …
Read More »ಮಗುವನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!
ತುಮಕೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ನಿಂದ ಕೊಯ್ದು ಹತ್ಯೆ ಮಾಡಿದ ತಾಯಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜಿಲ್ಲೆಯ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಿನ್ನೆ(ಶುಕ್ರವಾರ) ಈ ಘಟನೆ ನಡೆದಿದೆ. ಕ್ರಿತೀಶ್ (1) ಮೃತ ಮಗು. ಶ್ವೇತಾ (28) ಮಗು ಕೊಲೆ ಮಾಡಿದ ತಾಯಿ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಕ್ರಿತೀಶ್ ಕೈಯನ್ನು ಶ್ವೇತಾ ಏಕಾಏಕಿ ಕೊಯ್ದಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ಮಗು ಸ್ಥಳದಲ್ಲಿಯೇ ಸಾವನಪ್ಪಿದೆ. ಬಳಿಕ …
Read More »