Breaking News

Daily Archives: ಜೂನ್ 11, 2023

ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವು

ಕೊಪ್ಪಳ : ಇತ್ತೀಚಿನ ದಿನಗಳಿಂದ ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿತ್ತು. ಈ ಸಂಬಂಧ ಭಾನುವಾರ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮೃತರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದರು. ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ನಿರ್ಮಲ ಮನೆಗೆ ಹಾಗೂ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದ ಹೊನ್ನಮ್ಮ ಹಾಗೂ ಶೃತಿ ಮನೆಗೆ ಭೇಟಿ ನೀಡಿದರು. ಈ …

Read More »

ಶಕ್ತಿ ಯೋಜನೆ ಬೇಡ ಅನ್ನುವವರು ಬಸ್​ನಲ್ಲಿ ಹಣ ಕೊಟ್ಟು ಪ್ರಯಾಣ ಮಾಡಲಿ :ಶಿವಾನಂದ ಪಾಟೀಲ್

ಹಾವೇರಿ : ಮಹಿಳೆಯರಿಗೆ ಉಚಿತ ಬಸ್​ ಸೇವೆ ನೀಡುವ ಶಕ್ತಿ ಯೋಜನೆ ಬೇಡ ಎನ್ನುವವರು ಬಸ್‌ನಲ್ಲಿ ದುಡ್ಡು ಕೊಟ್ಟು ಪ್ರಯಾಣ ಮಾಡಲಿ. ಅಂತವರು ಬಸ್ಸಿನಲ್ಲಿ ದುಡ್ಡು ಕೊಟ್ಟು ಪ್ರಯಾಣ ಮಾಡುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂರರಲ್ಲಿ 90 ಜನರಿಗೆ ಅವಶ್ಯಕತೆ ಇದ್ದಾಗ 10 ಜನರಿಗೆ ಅವಶ್ಯಕತೆ ಇರುವುದಿಲ್ಲ. ಆ 10 ಜನ ಅದರ ಬಗ್ಗೆ …

Read More »

ಮನೆಯಲ್ಲಿ ಮಲಗಿದ್ದ ದಂಪತಿಗೆ ಕಚ್ಚಿದ ನಾಗರಹಾವು – ಪತಿ ಸಾವು, ಪತ್ನಿ‌ ಸ್ಥಿತಿ ಗಂಭೀರ

ಬೆಳಗಾವಿ: ದಂಪತಿಗೆ ನಾಗರಹಾವು ಕಚ್ಚಿದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಸಾವು‌ ಬದುಕಿನ ಮಧ್ಯ ಹೋರಾಡುತ್ತಿರುವ ಹೃದಯವಿದ್ರಾವಕ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ. ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಸಿದ್ದಪ್ಪ ಚಿವಟಗುಂಡಿ (35) ಮೃತ ವ್ಯಕ್ತಿ. ಪತ್ನಿ ನಾಗವ್ವ (28) ಸ್ಥಿತಿ ಚಿಂತಾಜನಕವಾಗಿದೆ. ದಂಪತಿ ತಮ್ಮ ಮೂರು ಮಕ್ಕಳ ಸಮೇತ ಹೊಟ್ಟೆಪಾಡಿಗಾಗಿ ಸಾಣಿಕೊಪ್ಪದಿಂದ ಬೆಳಗಾವಿಗೆ ಬಂದು ನೆಲೆಸಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ ಕಾಮಗಾರಿಯೊಂದರಲ್ಲಿ ವಾಚ್‍ಮನ್ …

Read More »

ಕಾರಹುಣ್ಣಿಮೆಯಲ್ಲಿ ಎತ್ತು ಬೆದರಿಸುವ ಸ್ಪರ್ಧೆ, ಹತ್ತು ಜನರಿಗೆ ಗಾಯ

ವಿಜಯಪುರ: ಇನ್ನೇನು ಮುಂಗಾರು ಮಳೆ ಭೂಮಿಯನ್ನು ಸ್ಪರ್ಶ ಮಾಡುತ್ತಿದೆ. ಜೂನ್​ ತಿಂಗಳು ಬಂತೆಂದರೆ ಮಳೆಗಾಲ ಆರಂಭ ಎಂದೇ ಲೆಕ್ಕ. ರೈತ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅಣಿಯಾಗುತ್ತಾನೆ. ಎತ್ತುಗಳನ್ನು ಹೊಲಕ್ಕೆ ಇಳಿಸಿ ದುಡಿಸುವ ಮುನ್ನ ಕಾರಹುಣ್ಣಿಮೆಯಲ್ಲಿ ಮನರಂಜನೆಗಾಗಿ ಎತ್ತು ಬೆದರಿಸುವ ಸ್ಪರ್ಧೆ ಆಡುವುದು ವಾಡಿಕೆಯಾಗಿ ಬೆಳೆದುಬಂದಿದೆ. ಮಳೆ ಆರಂಭವಾಗಿ ಹೊಲ ಊಳುವುದು, ಬಿತ್ತನೆ ಎಂದು ಕೆಲಸ ಆರಂಭವಾದರೆ ರೈತನಿಗೆ ಮನರಂಜನೆ ಎಂಬುದೇ ಇರುವುದಿಲ್ಲ. ಬಿಡುವಿಲ್ಲದ ಕೆಲಸಗಳಲ್ಲಿ ರೈತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹೀಗಾಗಿ ಕಾರಹುಣ್ಣಿಮೆ …

Read More »

ಗ್ಯಾರಂಟಿ ಯೋಜನೆ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ, ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ: ಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು ಗೇಲಿ ಮಾಡಿಕೊಂಡೇ ಇರಲಿ. ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಬಡವರ, …

Read More »

ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ

ಬೆಂಗಳೂರು: ಕರ್ನಾಟಕಕ್ಕೆ ಶನಿವಾರ ಮುಂಗಾರು ಮಳೆಯ ಪ್ರವೇಶವಾಗಿದ್ದು, ಮುಂದಿನ ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜೂನ್ 14ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 13ರ ವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದೆ. ನೈರುತ್ಯ ಮುಂಗಾರು …

Read More »

ಬತ್ತಿದ ಕೃಷ್ಣಾ ನದಿ,ಒಣಗಿದ ಬೆಳೆಗಳು

ವಾಡಿಕೆಯಂತೆ ಮುಂಗಾರು ಮಳೆ‌ ಆಗದೆ ಇರುವುದರಿಂದ ಹಾಗೂ ರಣ ಬಿಸಿಲಿನ ತಾಪಕ್ಕೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಕೃಷ್ಣಾ ನದಿ ಬತ್ತಿಹೋಗಿದ್ದು, ಜಮೀನಗಳಿಗಷ್ಟೇ ಅಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೂ ಪರದಾಡುವಂತಾಗಿದೆ. .ಉತ್ತರ ಕರ್ನಾಟಕ ಜೀವನಾಡಿಯಾಗಿರುವ ಕೃಷ್ಣಾ ನದಿಯು ನೀರಿಲ್ಲದೆ ಬತ್ತಿಹೋಗಿದ್ದು,ಇದರಿಂದಾಗಿ ಜನಜಾನುವಾರುಗಳಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರೈತರು ಹಗಲು ರಾತ್ರಿ ಎನ್ನದೇ ಸಾಲಸೂಲ ಮಾಡಿ ಕಷ್ಟಪಟ್ಟು ದುಡಿದು‌ ಬೆಳೆದ ಬೆಳೆಗಳು ಸಂಪೂರ್ಣವಾಗಿ ಒಣಗಿ‌ ಹೋಗಿದ್ದು ರೈತರಿಗೆ ಗಾಯದ ಬರೆ …

Read More »

ಆಂಜನೇಯ ನಗರದ ಸರ್ಕಾರಿ ಶಾಲೆಗೆ ಬೇಟಿ ನೀಡಿದ ಉತ್ತರ ಮತಕ್ಷೇತ್ರದ ಶಾಸಕ ಆಸೀಪ್ ರಾಜು ಸೇಠ್

ಬೆಳಗಾವಿಯ ಆಂಜನೇಯ ನಗರದ ಸರ್ಕಾರಿ ಶಾಲೆಗೆ ಬೇಟಿ ನೀಡಿದ ಉತ್ತರ ಮತಕ್ಷೇತ್ರದ ಶಾಸಕ ಆಸೀಪ್ ರಾಜು ಸೇಠ್ ಶಾಲೆಯ ಸ್ಥಿತಿಗತಿ,ಕೊರತೆ ಹಾಗೂ ನೂನ್ಯತೆ ಮತ್ತು ಮಕ್ಕಳ ಶಿಕ್ಷಣದ ಕುರಿತು ಪರಶೀಲನೆ ನಡೆಸಿದರು. ಸರ್ಕಾರಿ ಶಾಲೆಗೆ ಬೇಟಿ ನೀಡಿದ ಸಂದರ್ಭದಲ್ಲಿ 1ನೇ ತರಗತಿಯಿಂದ 7ನೇ ತರಗತಿಯಲ್ಲಿ ಕೇವಲ 33 ವಿದ್ಯಾರ್ಥಿಗಳ ಇರುವುದನ್ನು ನೋಡಿ ಕಳವಳ ವ್ಯಕ್ತಪಡಿಸಿದರು.ಅಲ್ಲದೆ ಧ್ವಜ ಕಂಬಕ್ಕೆ ಹಾನಿ ಹಾಗೂ ಹಳೆಯ ಶಿತಲವ್ಯಸ್ಥೆಯ ಕಟ್ಟಡಗಳು ಮತ್ತು ಹಲವು ದಿನಗಳಿಂದ ಮುಚ್ಚಿದ್ದ …

Read More »

ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿ

ವಿಜಯಪುರ…  ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಗೊಳಸಂಗಿ ಬಳಿ ಘಟನೆ ನಡೆದಿದೆ‌. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ನಾಲ್ವರು ಮಹಿಳೆಯರು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ‌‌. ಗಾಯಾಳುಗಳನ್ನುಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಮದುವೆಯಾದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಸಂಜು ಬಸಯ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಎನ್ನುವರನ್ನು ವಿವಾಹವಾಗಿದ್ದಾರೆ. ಈ ಕುರಿತು ಇತ್ತೀಚೆಗೆ ಅವರು ತಮ್ಮ ಇನ್‌ಸ್ಟಾಗ್ರಾಂ (sanjubasayyafficial ) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಸಂಜು ಬಸಯ್ಯ ತಿಳಿಸಿದ್ದಾರೆ. ಪಲ್ಲವಿ ಅವರು ಕೆಲ ಯುಟ್ಯೂಬ್ ವಿಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ನಾವು ತೆರೆ ಎಳೆದಿದ್ದೇವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತ್ತು,ಆ …

Read More »