Breaking News

Daily Archives: ಜೂನ್ 11, 2023

ಶಕ್ತಿ ಯೋಜನೆ’ಯ `ಲೋಗೋ’ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.   ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, …

Read More »

ಲೈಂಗಿಕ ಕಿರುಕುಳ ಆರೋಪ ಪ್ರಾಂಶುಪಾಲ ಅಮಾನತು

ಬಳ್ಳಾರಿ: ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಎಎಸ್ ಎಂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶರಣಪ್ಪ ಅವರನ್ನು ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಕಾಲೇಜು ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದ್ದರು. ಈ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ …

Read More »

ಎಣ್ಣೆ ಪ್ರಿಯರಿಗೆ ಸರ್ಕಾರದ ಶಾಕ್​… ಶೇ. 20ರಷ್ಟು ಮದ್ಯದ ಬೆಲೆ ದಿಢೀರ್​ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವುದು ಒಂದೆಡೆ ಜನರಿಗೆ ಸಂತಸ ತಂದಿದೆ. ಆದರೆ, ಇನ್ನೊಂದೆಡೆ ಉಚಿತ ನೆಪದಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿದೆ. ಜೊತೆಗೆ ಮದ್ಯ ಪ್ರಿಯರಿಗೂ ಶಾಕ್ ನೀಡಲಾಗಿದೆ. ಆದಾಯ ಸಂಗ್ರಹಿಸಲು ಸರ್ಕಾರ ಶೇ. 20 ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ನಿನ್ನೆಯಿಂದಲೇ ಬಿಯರ್ ಬೆಲೆ ಹೆಚ್ಚಳವಾಗಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದೆ ಜಾರಿಗೊಳಿಸುತ್ತಿದೆ. ನಾಳೆ ಮಹಿಳೆಯರಿಗೆ ಉಚಿತ ಬಸ್ …

Read More »

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು : H.K.ಪಾಟೀಲ್

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ಪ್ರಮುಖ ಇಲಾಖೆಗಳಲ್ಲಿ ಒಂದು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಅಗತ್ಯ ಇದೆ. ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷೆ ಮಟ್ಟದಲ್ಲಿ ಆದ್ಯತೆ ಸಿಕ್ಕಿಲ್ಲ. ಅದಕ್ಕೆ ಹಲವು ಕಾರಣಗಳಿವೆ. …

Read More »

ಹಾವೇರಿ ಗೋಲಿಬಾರ್​ಗೆ 16 ವರ್ಷ.

ಹಾವೇರಿ: ಇಂದಿಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು 16 ವರ್ಷ ಕಳೆದಿವೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ನಗರದಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆಯಲ್ಲಿ ರೈತರು ಭಾಗವಹಿಸುವ ಮೂಲಕ ಬಸ್ ನಿಲ್ದಾಣದ ಬಳಿ ಇರುವ ಹುತಾತ್ಮ ರೈತ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ವೇಳೆ ವಿವಿಧ ರೈತ ಮುಖಂಡರು ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು. 10 ಜೂನ್ 2008 ರ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ …

Read More »

ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿದ ಕೆ ಎಲ್ ರಾಹುಲ್

ಹುಬ್ಬಳ್ಳಿ: ಭಾರತದ ಶ್ರೇಷ್ಠ ಕ್ರಿಕೆಟ್​ ಆಟಗಾರ ಕೆ ಎಲ್ ರಾಹುಲ್​ ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ವಿದ್ಯಾರ್ಥಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್​ ವಿಭಾಗದಲ್ಲಿ 600ಕ್ಕೆ 571 ಅಂಕಗಳನ್ನು ಪಡೆದು ಉತ್ತೀರ್ಣನಾಗಿದ್ದಾರೆ. ಬಡ ಕುಟುಂಬದಿಂದ ಬಂದಿರುವ ಈತ ಹೆಚ್ಚಿನ ವಿದ್ಯಾಭ್ಯಾಸ ನಡೆಸಲು ಆಸಕ್ತಿ ಹೊಂದಿದ್ದ. ಆದರೆ ಕುಟುಂಬದ ಆರ್ಥಿಕ ಪರಿಸ್ಥಿತಿ ಸರಿ ಇರದ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ …

Read More »

ಕುಡಿದು ಶಾಲೆಗೆ ಬಂದ ಸರ್ಕಾರಿ ಶಿಕ್ಷಕ

ಬೆಳಗಾವಿ : ಕುಡಿದ ಅಮಲಿನಲ್ಲಿ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನಿದ್ದೆಗೆ ಜಾರಿ ಕರ್ತವ್ಯಲೋಪ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಕನ್ನಡ ಶಿಕ್ಷಕ ರವಿ ಪಾಟೀಲ ಕುಡಿದು ಶಾಲೆಗೆ ಬಂದು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ಮಹಾದ್ವಾರ ರಸ್ತೆಯಲ್ಲಿರುವ ಸರ್ಕಾರಿ ಮರಾಠಿ ಮಾಧ್ಯಮ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ರವಿ ಪಾಟೀಲ ಇಂದು ಮದ್ಯ ಸೇವಿಸಿ ಶಾಲೆಗೆ ಬಂದು ಇಲ್ಲೇ ಮಲಗಿದ್ದಾರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. …

Read More »

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ.‌ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ. ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ …

Read More »