ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ 9 ವರ್ಷಗಳ ಸೇವಾ ಅವಧಿಯಲ್ಲಿ ಮಾಡಿದ ಕಾರ್ಯಗಳು ಮತ್ತು 2019ರಿಂದ ಬೆಂಗಳೂರು ದಕ್ಷಿಣದಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿದರು. ಇದೇ ವೇಳೆ ನಮೋ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನವನ್ನು ಹೆಚ್.ಡಿ.ದೇವೇಗೌಡರ ಮೂಲಕ ವಿತರಣೆ ಮಾಡಿಸಿ ಗಮನ ಸೆಳೆದರು. ಸೂರ್ಯ ಅವರ ಈ ಭೇಟಿಯು ಮಹಾ …
Read More »Daily Archives: ಜೂನ್ 14, 2023
ತೊಗರಿ, ಉದ್ದು ಬೆಲೆ ಏರಿಕೆ: ದಾಸ್ತಾನಿಗರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ನವದೆಹಲಿ: ಬೇಳೆ ಕಾಳುಗಳ ಬೆಲೆ ಏರಿಕೆ ನಿಯಂತ್ರಣ ವಿಷಯವಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಹತ್ವದ ನಿರ್ದೇಶನ ನೀಡಿದೆ. ಮುಖ್ಯವಾಗಿ, ತೊಗರಿ ಮತ್ತು ಉದ್ದು ಕಾಳುಗಳನ್ನು ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಅಲ್ಲದೇ, ಈ ಬೇಳೆ ಕಾಳುಗಳ ಕಳಪೆ ಪೂರೈಕೆ ಮತ್ತು ಏರುತ್ತಿರುವ ಬೆಲೆ ಕಾರಣದಿಂದ ಅವುಗಳ ಮೇಲೆ ದಾಸ್ತಾನಿನ ಮೇಲೆ ಮಿತಿಗಳನ್ನು ಹೇರಲು ಕೇಂದ್ರ ಒತ್ತಾಯಿಸಿದೆ. ಬುಧವಾರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು …
Read More »ಹು-ಧಾ ಮಹಾನಗರ ಪಾಲಿಕೆ ಕೈ ವಶ ಮಾಡಿಕೊಳ್ಳಲು ಶೆಟ್ಟರ್ ಗೆ ಟಾಸ್ಕ್ ಕೊಟ್ಟ ಡಿ ಕೆ ಶಿವಕುಮಾರ್
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ಕಾವು ಈಗಾಗಲೇ ರಂಗೇರಿದೆ. ಕಮಲ ಪಾಳೆಯದಲ್ಲಿದ್ದ ಅಧಿಕಾರವನ್ನು ಕಾಂಗ್ರೆಸ್ ವಶ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಸ್ ನಡೆಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಂತ್ರಿ ಡಿ ಕೆ ಶಿವಕುಮಾರ್ ಟಾಸ್ಕ್ ನೀಡಿದ್ದಾರೆ ಎನ್ನುವ ಮಾತು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದೇ ತಿಂಗಳ ಜೂನ್ 20ರಂದು ನಡೆಯಲಿರುವ ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಚುನಾವಣೆಗೆ ಕಾಂಗ್ರೆಸ್ ನಾಯಕರು …
Read More »ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ವಾಯವ್ಯ ಸಾರಿಗೆಯಲ್ಲಿ ಜೂ.13ರಂದು ಪ್ರಯಾಣಿಸಿದ ಮಹಿಳೆಯರೆಷ್ಟು ಗೊತ್ತೇ?
ಹುಬ್ಬಳ್ಳಿ: ರಾಜ್ಯಾದ್ಯಂತ ಆರಂಭವಾಗಿರುವ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಡಿ ಜೂನ್ 13ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 11.09 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ.2.72 ಕೋಟಿಗಳಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ನಿರೀಕ್ಷೆಗೆ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ದಿನ ಜೂನ್ 13 ಮಂಗಳವಾರ ವಾಯವ್ಯ ಕರ್ನಾಟಕ ರಸ್ತೆ …
Read More »ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು
ರಾಮನಗರ: ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ …
Read More »ಅನ್ನಭಾಗ್ಯ ಆರಂಭವಾಗುವುದು ಅನುಮಾನ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜು.1 ರಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯ ಆರಂಭವಾಗುವುದು ಅನುಮಾನ ಎಂಬ ಅಭಿಪ್ರಾಯವನ್ನು ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಸೇರಿದೆ. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು. ಬಿಪಿಎಲ್, ಅಂತ್ಯೋದಯ ಕಾರ್ಡ್ನವರಿಗೆ 10 …
Read More »CAA, NRC ಕುರಿತು ನಾಟಕ ಪ್ರದರ್ಶನ: ಬೀದರ್ ಶಾಲಾ ಮಂಡಳಿ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರೀಕರ ನೋಂದಣಿ (ಎನ್ಆರ್ಸಿ) ಕುರಿತು ಬೀದರ್ ಶಾಹೀನ್ ಶಾಲೆಯ ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದ ಕುರಿತಂತೆ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಹೀನ್ ಶಾಲೆಯ ಮುಖ್ಯಸ್ಥರಾದ ಅಲ್ಲಾವುದ್ದೀನ್, ಅಬ್ದುಲ್ ಖಾಲೀಕ್, ಮೊಹಮ್ಮದ್ ಬಿಲಾಲ್ ಇನಾಂದರ್ ಮತ್ತು ಮೊಹಮ್ಮದ್ ಮೆಹ್ತಾಬ್ ಹೈಕೋರ್ಟ್ಗೆ ಅರ್ಜಿ …
Read More »GST ಕೌನ್ಸಿಲ್ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ
ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್‌ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …
Read More »ಕಾಂಗ್ರೆಸ್ ಬಿಜೆಪಿ ನಡುವೆ ಅನ್ನಭಾಗ್ಯ ಅಕ್ಕಿ ವಾರ್: ಸಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ನಡೆದಿದೆ. ಸಿದ್ದರಾಮಯ್ಯ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ಸರಣಿ ಟ್ವೀಟ್ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬೆನ್ನಲ್ಲೇ ಮಾಜಿ ಸಚಿವ ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಸಿದ್ದರಾಮಯ್ಯ ವಿರುದ್ಧ …
Read More »ಕೌಟುಂಬಿಕ ಕಲಹದಿಂದ ಗಾಯಗೊಂಡಿದ್ದ ಅತ್ತೆ ಸಾವು.. ಸೊಸೆ ವಿರುದ್ಧ ಕೊಲೆ ಕೇಸ್ ದಾಖಲು
ಬೆಳಗಾವಿ : ಕೌಟುಂಬಿಕ ಕಲಹದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯ ಸಾವಿಗೆ ಸೊಸೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ವತಃ ಮೃತ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಲಹೊಂಗಲ ಪಟ್ಟಣದ ಮಹೆಬೂಬಿ ಯಾಕೂಶಿ (53) ಎಂಬವರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಈ ಸಂಬಂಧ ಸೊಸೆ ಮೆಹರೂನಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸುಬಾನ್ ಯಾಕೂಶಿ ಪೊಲೀಸರಿಗೆ ದೂರು ನೀಡಿದ್ದಾರೆ. …
Read More »