ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋಗಿದ್ದ ಹೆಡ್ ಕಾನ್ಸ್‌ಟೇಬಲ್ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ಧಾರೆ. ಸಿದ್ದಣ್ಣ ಬಂಧಿತ ಆರೋಪಿ. ಗುರುವಾರ ಮಧ್ಯರಾತ್ರಿ ಹೆಡ್ ಕಾನ್ಸ್‌ಟೇಬಲ್ ಮೈಸೂರು ಅಲಿಯಾಸ್ ಮಯೂರ್ ಚವ್ಹಾಣ್ (51) ಅಕ್ರಮ ಮರಳು ಸಾಗಾಟದ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದರು. ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆ ಯಜಮಾನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಪತಿ ಸಾವಿಗೆ …
Read More »Daily Archives: ಜೂನ್ 17, 2023
ದಕ್ಷಿಣ ಕನ್ನಡದ ಕೊಲೆ ಪ್ರಕರಣಗಳು: ದೀಪಕ್ ರಾವ್, ಮಸೂದ್, ಫಾಝಿಲ್, ಜಲೀಲ್ ಕುಟುಂಬಗಳಿಗೆ ಸಿಎಂ ನಿಧಿಯಿಂದ ತಲಾ 25 ಲಕ್ಷ ಪರಿಹಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಹತ್ಯೆಗೀಡಾದ ನಾಲ್ವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಲಾಗಿದೆ. ಸುಳ್ಯದ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಮಂಗಳೂರಿನ ಸುರತ್ಕಲ್ನ ಮೊಹಮ್ಮದ್ ಫಾಜಿಲ್, ಅಬ್ದುಲ್ ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ಸಿಎಂ ನಿಧಿಯಿಂದ ತಲಾ 25 ಲಕ್ಷ ಪರಿಹಾರಬೆಳ್ಳಾರೆಯ …
Read More »ಪರಿಚಯ – ಪ್ರಣಯ, ದೋಖಾ ಆರೋಪ: ಕನ್ನಡದ ಸಹ ನಟಿಯ ಬಂಧನ
ಶಿವಮೊಗ್ಗ: ಕನ್ನಡ ಚಿತ್ರರಂಗದ ಸಹ ನಟಿ ಉಷಾ ಅಲಿಯಾಸ್ ಉಷಾ ರವಿಶಂಕರ್ ಅವರನ್ನು ವಂಚನೆ ಪ್ರಕರಣದಲ್ಲಿ ಶಿವಮೊಗ್ಗದ ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಅವರು ಸುಮಾರು 6.50 ಲಕ್ಷ ರೂನಷ್ಟು ಹಣ ಪಡೆದು ವಾಪಸ್ ಮಾಡದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಶರವಣನ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರಿನ ಮೇರೆಗೆ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಉಷಾ ಅವರನ್ನು ಬಂಧಿಸಿದ್ದಾರೆ. ಶರವಣನ್ ಎಂಬವವರು ಧಾರಾವಾಹಿ …
Read More »140 ಕೋಟಿ ಬಾಚಿದ ‘ಆದಿಪುರುಷ್’: ಮೊದಲ ದಿನವೇ 100 ಕೋಟಿ ಗಡಿ ದಾಟಿದ ಪ್ರಭಾಸ್ರ ಸಿನಿಮಾ
ಬಾಹುಬಲಿ 2, ಸಾಹೋ ಸಿನಿಮಾ ನಂತರ ‘ಆದಿಪುರುಷ್’ ಮೊದಲ ದಿನವೇ 100 ಕೋಟಿ ರೂ. ಗಡಿ ದಾಟಿದ ಪ್ರಭಾಸ್ ಅಭಿನಯದ ಮೂರನೇ ಸಿನಿಮಾವಾಗಿದೆ. ದಕ್ಷಿಣ ಸಿನಿ ರಂಗದ ಪ್ರಭಾಸ್ ಮತ್ತು ಬಾಲಿವುಡ್ ಬಹುಬೇಡಿಕೆ ನಟಿ ಕೃತಿ ಸನೋನ್ ಅಭಿನಯದ ಪೌರಾಣಿಕ ಚಲನಚಿತ್ರ ಆದಿಪುರುಷ್ ಜೂನ್ 16ರಂದು (ನಿನ್ನೆ, ಶುಕ್ರವಾರ) ಅದ್ಧೂರಿಯಾಗಿ ತೆರೆ ಕಂಡಿದೆ. ಮಿಶ್ರ ಪ್ರತಿಕ್ರಿಯೆ ಪಡೆದಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಪ್ಯಾನ್ ಇಂಡಿಯಾ ಮಟ್ಟದಲ್ಲಿ …
Read More »ಅಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ ಸಹೋದರನನ್ನು ಸುಟ್ಟು ಹಾಕಿದ ಹಂತಕರು!
ಬಾಪಟ್ಲಾ, ಆಂಧ್ರಪ್ರದೇಶ: 10ನೇ ತರಗತಿ ಓದುತ್ತಿದ್ದ ಬಾಲಕನೊಬ್ಬನ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಘಟನೆ ಬಾಪಟ್ಲಾ ಜಿಲ್ಲೆಯ ಚೆರುಕುಪಲ್ಲಿ ತಾಲೂಕಿನ ರಾಜೋಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿತ್ತು. ಈ ಘಟನೆ ಕುರಿತು ಕೆಲವೊಂದು ವಿಷಯಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಚೆರುಕುಪಲ್ಲಿ ತಾಲೂಕಿನ ಉಪ್ಪಳ ಅಮರನಾಥ್ (14) ಅವರ ತಂದೆ ಬಾಲ್ಯದಲ್ಲಿಯೇ ತೀರಿಕೊಂಡಿದ್ದು, ತಾಯಿ, ಸಹೋದರಿ, ತಾತನೊಂದಿಗೆ ವಾಸವಾಗಿದ್ದಾರೆ. ರಾಜೋಲು ಪಂಚಾಯಿತಿ ರೆಡ್ಲಪಾಲೇನಿ ನಿವಾಸಿ ಪಾಮು ವೆಂಕಟೇಶ್ವರ ರೆಡ್ಡಿ ಅಮರನಾಥ್ …
Read More »ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು? ಗೀತಾ ಶಿವರಾಜ್ಕುಮಾರ್
ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜ್ಕುಮಾರ್ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ …
Read More »ಕಾರು – ಕಂಟೇನರ್ ಮಧ್ಯೆ ಭೀಕರ ಅಪಘಾತ: ಇಬ್ಬರು ಸೇವಕರು ಸಾವು, ಕಾಡಸಿದ್ದೇಶ್ವರ ಸ್ವಾಮೀಜಿಗೆ ಗಾಯ
ಬೆಳಗಾವಿ: ಕಾರು, ಕಂಟೇನರ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಾದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ದೇವಲವಾಡಿ ಗ್ರಾಮದ ನಿವಾಸಿ ಪಾಂಡುರಂಗ ಜಾಧವ್ …
Read More »*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಮಹಾರಾಷ್ಟ್ರದ ಶಾಲೆಯ ದಾಖಲೆ ಮರಾಠಿಯಲ್ಲಿದ್ದರೂ ಕನ್ನಡದಲ್ಲಿಯೇ ವಿವರಗಳನ್ನು ತುಂಬಿದ್ದಲ್ಲದೇ ” ಕರ್ನಾಟಕ ರಾಜ್ಯ”ಎಂದೂ ಬರೆದ ಮನದಾಳದ ಇಚ್ಛೆಯನ್ನು ಪ್ರಕಟಿಸಿದ ಗುಗವಾಡ ಶಾಲಾ ಮುಖ್ಯಾಧ್ಯಾಪಕರು!
ಮಹಾರಾಷ್ಟ್ರದ ಶಾಲೆಯ ದಾಖಲೆ ಮರಾಠಿಯಲ್ಲಿದ್ದರೂ ಕನ್ನಡದಲ್ಲಿಯೇ ವಿವರಗಳನ್ನು ತುಂಬಿದ್ದಲ್ಲದೇ ” ಕರ್ನಾಟಕ ರಾಜ್ಯ”ಎಂದೂ ಬರೆದ ಮನದಾಳದ ಇಚ್ಛೆಯನ್ನು ಪ್ರಕಟಿಸಿದ ಗುಗವಾಡ ಶಾಲಾ ಮುಖ್ಯಾಧ್ಯಾಪಕರು! ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಗವಾಡ ಗ್ರಾಮದ ಈ ಶಾಲೆಯ ಮುಖ್ಯಾಧ್ಯಾಪಕರು ನೀಡಿದ ಟಿಸಿ( ವರ್ಗಾವಣೆ ಪ್ರಮಾಣಪತ್ರ)ಈಗ ವೈರಲ್ ಆಗಿದೆ. ಅಚ್ಚ ಕನ್ನಡ ಪ್ರದೇಶಗಳಾದ ಜತ್ತ ತಾಲೂಕಿನ 44 ಹಳ್ಳಿಗಳ ಪೈಕಿ ಗುಗವಾಡ ಗ್ರಾಮವೂ ಒಂದಾಗಿದೆ.ಇಲ್ಲಿಯ ಶಾಲೆಯ ಮುಖ್ಯಾಧ್ಯಾಪಕರು ರಾಹುಲ್ ಚೌಗುಲೆ ಎಂಬವರಿಗೆ ನೀಡಿದ …
Read More »ಮಂಡ್ಯ ರೈತರಿಗೆ ಸಿಹಿ ಸುದ್ದಿ! ಮೈಶುಗರ್ ಕಾರ್ಖಾನೆ ಮರು ಕಾರ್ಯಾರಂಭ
ಮಂಡ್ಯ : ರಾಜ್ಯದಲ್ಲಿ ಸಕ್ಕರೆನಾಡು ಎಂದರೆ ಮೊದಲು ನೆನಪಾಗುವುದೇ ಮಂಡ್ಯ ಜಿಲ್ಲೆ. ಈ ಭಾಗದ ಜನರು ಉತ್ತಮ ನೀರಾವರಿ ವ್ಯವಸ್ಥೆ ಇರುವುದರಿಂದ ಅತಿ ಹೆಚ್ಚು ಕಬ್ಬು ಬೆಳೆಯುತ್ತಾರೆ. ಹೀಗಾಗಿ ಜಿಲ್ಲೆಯಲ್ಲಿ ಮೈಶುಗರ್ ಕಾರ್ಖಾನೆ ದೊಡ್ಡ ಮಟ್ಟದಲ್ಲಿ ರೈತರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸುತ್ತಿತ್ತು. ಕಾರಣಾಂತರಗಳಿಂದ ರಾಜ್ಯ ಸರ್ಕಾರದ ಏಕೈಕ ಸಕ್ಕರೆ ಕಾರ್ಖಾನೆ ಮುಚ್ಚಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೀಗ ಮುಚ್ಚಿದ ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಸಾಂಕೇತಿಕವಾಗಿ ಸಕ್ಕರೆ ಸಚಿವ …
Read More »