Breaking News

Daily Archives: ಜೂನ್ 17, 2023

ರೈಲು ದುರಂತ ಸಂತ್ರಸ್ತರಿಗೆ ₹10 ಕೋಟಿ ಕೊಡುವೆ, ಸ್ವೀಕರಿಸಿ; ಜೈಲಿನಿಂದಲೇ ಸರ್ಕಾರಕ್ಕೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್‌!

ನವದೆಹಲಿ: ಭಾರತೀಯ ರೈಲ್ವೆ ಇತಿಹಾಸದಲ್ಲೇ ಅತಿದೊಡ್ಡ ಅಪಘಾತಗಳಲ್ಲಿ ಒಂದಾದ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ನೆರವಾಗಲು ಬಹುಕೋಟಿ ರೂಪಾಯಿ ವಂಚಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಮುಂದೆ ಬಂದಿದ್ದಾನೆ. ದುರಂತದಲ್ಲಿ ಮೃತಪಟ್ಟವರ ಮಕ್ಕಳು ಭವಿಷ್ಯಕ್ಕಾಗಿ ದೇಣಿಗೆಯಾಗಿ 10 ಕೋಟಿ ರೂಪಾಯಿ ನೀಡಲು ಬಯಸಿದ್ದು, ಸ್ವೀಕರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜೈಲಿನಿಂದಲೇ ಶುಕ್ರವಾರ ಪತ್ರ ಬರೆದಿದ್ದಾನೆ. ಜೂನ್​ 2ರಂದು ಒಡಿಶಾದ ಬಾಲಸೋರ್​ ಜಿಲ್ಲೆಯಲ್ಲಿ ಮೂರು ರೈಲುಗಳ ಅಪಘಾತದಲ್ಲಿ …

Read More »

3 ತಿಂಗಳಲ್ಲಿ ಬೆಂಗಳೂರನ್ನು ಟ್ರಾಫಿಕ್‌ ಮುಕ್ತ ಸಿಟಿ ಮಾಡಿ- ಅಧಿಕಾರಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಗಡುವು

ಬೆಂಗಳೂರು : ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ‌ ಅಪಖ್ಯಾತಿಗೆ ಒಳಗಾಗಿದೆ. ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್‌ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿ.ಪರಮೇಶ್ವರ್, ಎಸಿಪಿ ಮೇಲ್ಮಟ್ಟ ಪೊಲೀಸ್​ ಅಧಿಕಾರಿಗಳೊಂದಿಗೆ ಇಂದು ನಗರ ಪೊಲೀಸ್ ಇಲಾಖೆಯ ಕಾರ್ಯಗಳ ಬಗ್ಗೆ ಸಭೆ …

Read More »

ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ.: ಆರ್.ಬಿ.ತಿಮ್ಮಾಪೂರ್

ಬೆಂಗಳೂರು: ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಯಾವುದೇ ಅಧಿಕೃತ ಆದೇಶವೂ ಆಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ. ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುತ್ತೇನೆ ಎಂದರು. ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ …

Read More »

ಒಣಗುತ್ತಿರುವ ಭತ್ತದ ಸಸಿ: ಸಂಕಷ್ಟದಲ್ಲಿ ಬೆಳಗಾವಿ ಅನ್ನದಾತರು

ಬೆಳಗಾವಿ: ಈ ಬಾರಿ ಮಳೆರಾಯ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಜೂನ್‌ ಮೂರನೇ ವಾರ ಬಂದರೂ ಮಳೆಯಾಗದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭತ್ತ ಬೆಳೆದ ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಹೌದು. ಬೆಳಗಾವಿ ಸುತ್ತಮುತ್ತಲಿನ ರೈತರು ಅಧಿಕವಾಗಿ ಭತ್ತವನ್ನೆ ಬೆಳೆಯುತ್ತಾರೆ. ಉತ್ತಮ ಮುಂಗಾರು ಮಳೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಇಲ್ಲಿನ ವಡಗಾವಿ, ಅನಗೋಳ ಮತ್ತು ತಾಲೂಕಿನ ಯಳ್ಳೂರು ಸೇರಿ ಸುತ್ತಮುತ್ತಲಿನ ಗ್ರಾಮಗಳ ರೈತರು ಮೇ ತಿಂಗಳ 3 ಮತ್ತು 4ನೇ ವಾರದಲ್ಲೇ ಭತ್ತದ ಒಣ …

Read More »

ಮಗುವಿನ ಮೃತದೇಹ ಕೈಚೀಲದಲ್ಲಿ ಇಟ್ಟುಕೊಂಡು ಬಸ್​ನಲ್ಲಿ ಪ್ರಯಾಣಿಸಿದ ತಂದೆ…!

ಮಧ್ಯ ಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆರೋಗ್ಯ ಮೂಲ ಸೌಕರ್ಯವಿಲ್ಲದ ಕಠೋರ ಸ್ಥಿತಿ ಬಿಂಬಿಸುವ ಘಟನೆ ಬಹಿರಂಗವಾಗಿದೆ. ಹೌದು, ಮಧ್ಯಪ್ರದೇಶದ ಜಬಲ್‌ಪುರದ ದಿಂಡೋರಿಯ ಬಡ ವ್ಯಕ್ತಿಯೊಬ್ಬರು, ಜಬಲ್‌ಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್‌ಗೆ ಪಾವತಿಸಲು ಸಾಧ್ಯವಾಗದ ಕಾರಣ, ತನ್ನ ನವಜಾತ ಶಿಶುವಿನ ಮೃತದೇಹವನ್ನು ಚೀಲದಲ್ಲಿ ಇಟ್ಟುಕೊಂಡು ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ದಿಂಡೋರಿಯ ಗ್ರಾಮದ ನಿವಾಸಿಯಾಗಿರುವ ವ್ಯಕ್ತಿಯ ಪತ್ನಿ ಜಮಾನಿ ಬಾಯಿ ಹೆರಿಗೆ ನೋವಿನ ಹಿನ್ನೆಲೆಯಲ್ಲಿ ದಿಂಡೋರಿ ಜಿಲ್ಲಾ ಆಸ್ಪತ್ರೆಗೆ …

Read More »