ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …
Read More »Daily Archives: ಜೂನ್ 22, 2023
ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟೀಕರಣ .
ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳನ್ನು ಅರ್ಜಿ ಹಾಕಲು ಕೇಂದ್ರ ಸರ್ಕಾರ ಕಂಪ್ಯೂಟರ್ ಸರ್ವರ್ ಹ್ಯಾಕ್ ಮಾಡಿದೆ ಎಂಬ ಹೇಳಿಕೆ ನೀಡಿದ್ದೆನು. ಆದರೆ ಇದೊಂದು ರಾಜಕೀಯ ಹೇಳಿಕೆ. ಬಿಜೆಪಿಯವರು ಇಂಥ ಹೇಳಿಕೆಗಳನ್ನು ಬಹಳ ಸಲ ಹೇಳಿದ್ದುಂಟು. ಇವೆಲ್ಲ ರಾಜಕೀಯ ಎಂದು ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಕೆಲವು ಸರ್ವರ್ ಹ್ಯಾಕ್ ಮಾಡಿದೆ ಎಂಬ …
Read More »65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …
Read More »ವಿಜಯಪುರದಲ್ಲಿ ಸರಣಿ ಅಪಘಾತ.. ಇಬ್ಬರು ಸಾವು, ಐವರಿಗೆ ಗಂಭೀರ ಗಾಯ
ವಿಜಯಪುರ : ಕೆಎಸ್ಆರ್ಟಿಸಿ ಬಸ್, ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಐವರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ-ಕಗ್ಗೋಡ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜಾಲವಾದಿ ಗ್ರಾಮದ ಬಾಬುಸಾಹೇಬ ಮಕಾನದಾರ (50) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಥಣಿಯಿಂದ ಗಾಣಗಾಪುರಕ್ಕೆ ತೆರಳುತ್ತಿದ್ದ ಬಸ್ಗೆ …
Read More »ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಇಒಗೆ ದಂಡಸಮೇತ 5 ವರ್ಷ ಜೈಲು ಶಿಕ್ಷೆ
ಗದಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ಶಂಕ್ರಪ್ಪ ಹಳ್ಳಿಗುಡಿ ಎಂಬವರಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಇಂದು ಆದೇಶ ನೀಡಿತು. ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಆದೇಶ ಹೊರಡಿಸಿದರು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳು …
Read More »ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ
ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ. ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್‌ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ …
Read More »ಸಿದ್ದರಾಮಯ್ಯ- ಅಮಿತ್ ಶಾ ಭೇಟಿ
ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಅನ್ನಭಾಗ್ಯ ಯೋಜನೆ ಹಾಗೂ ಅದರ ಜಾರಿಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಕುರಿತಾದ ಭರವಸೆ ಈಡೇರಿಸುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ಸಿಐಗೆ ಜೂನ್ 9ರಂದು ಪತ್ರ …
Read More »500 ಮದ್ಯದ ಅಂಗಡಿಗಳನ್ನು ಮುಚ್ಚಲು ತೀರ್ಮಾನ!
ಚೆನ್ನೈ : ರಾಜ್ಯದಲ್ಲಿರುವ 500 ಮದ್ಯದ ಅಂಗಡಿಗಳನ್ನು ಮುಚ್ಚಲು ತಮಿಳುನಾಡು ಸರ್ಕಾರ ತೀರ್ಮಾನಿಸಿದೆ. ಜೂನ್ 22 ರಿಂದ ಆರಂಭಗೊಂಡು 500 ಮದ್ಯದ ಮಳಿಗೆಗಳನ್ನು ಮುಚ್ಚಲಾಗುವುದು ಎಂದು ತಮಿಳು ನಾಡು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಹಕಾರಿ ಸಂಸ್ಥೆಯಾಗಿರುವ ತಮಿಳುನಾಡು ಮಾರ್ಕೆಟಿಂಗ್ ಕಾರ್ಪೊರೇಶನ್ ಲಿಮಿಟೆಡ್ (TASMAC) ಹೇಳಿದೆ. ರಾಜ್ಯದಲ್ಲಿ 500 ಮದ್ಯದ ಮಳಿಗೆಗಳನ್ನು ಗುರುತಿಸಿದ್ದು, ಏಪ್ರಿಲ್ 20, 2023 ರಂದು ಹೊರಡಿಸಲಾದ ಸರ್ಕಾರದ ಆದೇಶದ ಆಧಾರದನ್ವಯ ಗುರುವಾರ (ಜೂನ್ 22) ದಿಂದ ಮಳಿಗೆಗಳನ್ನು ಮುಚ್ಚಲು …
Read More »