Breaking News

Daily Archives: ಜೂನ್ 25, 2023

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

4 ಸಾವಿರ ಬಸ್‌ಗಳ ಖರೀದಿ, ಬೆಳಗಾವಿ ಜಿಲ್ಲೆಗೆ ಹೆಚ್ಚು ಹೊಸ ಬಸ್ ಬಿಡುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ಈ‌ ಹಿಂದೆಯೂ ಸಚಿವನಾಗಿದ್ದಾಗ ಬೆಳಗಾವಿ ನಗರ ಸಾರಿಗೆ ಆರಂಭಿಸಿದ್ದು ಕೂಡ ನಾನೇ. ಬೆಳಗಾವಿ ದೊಡ್ಡ ಜಿಲ್ಲೆ ಆಗಿರುವ ಹಿನ್ನೆಲೆ ಹೆಚ್ಚು ಹೊಸ ಬಸ್​ಗಳನ್ನು ಬಿಡುವ ಜವಾಬ್ದಾರಿ ನಮ್ಮದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ಈ ವೇಳೆ ಪ್ರಯಾಣಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಮಾಧ್ಯಮದವರ ಜೊತೆ ಸಚಿವರು ಮಾತನಾಡಿ, 2016ರಲ್ಲಿ ಬಸ್ ನಿಲ್ದಾಣ …

Read More »

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

ಭಾರೀ ಮಳೆ.. ನವದೆಹಲಿಯ ರೈಲ್ವೆ ಫ್ಲಾಟ್​ಫಾರ್ಮ್​ನಲ್ಲಿ ವಿದ್ಯುತ್ ಕಂಬ ಸ್ಪರ್ಶಿಸಿ ಮಹಿಳೆ ಸಾವು

ನವದೆಹಲಿ: ಶನಿವಾರ ರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನವದೆಹಲಿಯ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗೆ ಮಳೆ ನೀರು ನುಗ್ಗಿದೆ. ಈ ವೇಳೆ ಮಹಿಳೆಯೊಬ್ಬರು ವಿದ್ಯುತ್ ಕಂಬವನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಸಾಕ್ಷಿ ಅಹುಜಾ ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಗ್ಗೆ 5.30 ಕ್ಕೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ನೀರಿನಿಂದ ತುಂಬಿದ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯಲು …

Read More »

ಮಳೆಗಾಗಿ ವಿಚಿತ್ರ ಆಚರಣೆ: ಸ್ಮಶಾನದಲ್ಲಿ ಹೂತಿದ್ದ ಸಮಾಧಿ ಅಗೆದು, ಶವಗಳಿಗೆ ನೀರುಣಿಸಿದ ಗ್ರಾಮಸ್ಥರು!

ವಿಜಯಪುರ: ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಾಗಿದ್ದ ಮುಂಗಾರು ಮಳೆ ವಿಳಂಬವಾಗಿದೆ. ಹೀಗಾಗಿ ರಾಜ್ಯದ ಹಲವೆಡೆಮಳೆಗಾಗಿ ಪ್ರಾರ್ಥಿಸಿ ಕತ್ತೆ ಮದುವೆ, ಕಪ್ಪೆ ಮದುವೆ, ದೇವರಿಗೆ ನೀರುಣಿಸುವುದು ಸೇರಿದಂತೆ ವಿವಿಧ ರೀತಿಯ ಆಚರಣೆ ಮತ್ತು ಸಂಪ್ರದಾಯವನ್ನು ಈಗಲೂ ಗ್ರಾಮೀಣ ಪ್ರದೇಶದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಸ್ಮಶಾನದಲ್ಲಿ ಹೂತಿದ್ದ ಶವಗಳಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಆಚರಣೆ ಬೆಳಕಿಗೆ ಬಂದಿದೆ. ಇದು ವಿಚಿತ್ರ ಸಂಪ್ರದಾಯವಾದರೂ ಸಹ ಗ್ರಾಮಸ್ಥರು ಈ ಆಚರಣೆಯನ್ನು …

Read More »

ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಕಾಂಗ್ರೆಸ್: ಶಶಿಕಲಾ ಜೊಲ್ಲೆ

ಬೆಳಗಾವಿ: ಸುಮ್ಮನೆ ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಇನ್ನೊಬ್ಬರ ವಿರುದ್ಧ ಸುಮ್ಮನೆ ಆಪಾದನೆ ಮಾಡೋದು ಕಾಂಗ್ರೆಸ್ ಮುಖಂಡರ ಕೆಲಸ. ಪ್ರಧಾನಿ ಮೋದಿ ಮೇಲೆ ಆಪಾದನೆ ಮಾಡೋದು ಎಷ್ಟು ಸಮಂಜಸ ಅಂತಾ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಅಕ್ಕಿ ಕೊಡುತ್ತಿಲ್ಲವೆಂದು ಮೋದಿ ಟಾರ್ಗೆಟ್ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅದನ್ನು ನಾವು ಖಂಡನೆ …

Read More »

ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ

ಬೆಳಗಾವಿ: ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು …

Read More »

ಮೋದಿ ಜನಪ್ರಿಯತೆ ಮಂಕಾಗಿದೆ, ಕರ್ನಾಟಕದಲ್ಲಿ ಮೋದಿ ವರ್ಚಸ್ಸು ನಂಬಿದ್ದ ಬಿಜೆಪಿ ಧೂಳಿಪಟ ಆಯ್ತು: ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಐದು ಭರವಸೆಗಳನ್ನು ನೀಡಿದ್ದೇವೆ. ಅದರಲ್ಲಿ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಾವು ಘೋಷಣೆ ಮಾಡಿದ್ದೀವಿ. ಆದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕೇಳಿದರೆ ಅಕ್ಕಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸಾರ್ವತ್ರಿಕ ಲೋಕಸಭಾ …

Read More »

ಮೋದಿ‌ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ: ಬೊಮ್ಮಾಯಿ

ಬೆಳಗಾವಿ: ಪಾಟ್ನಾದಲ್ಲಿ ತೃತೀಯ ರಂಗದ ನಾಯಕರು ಸಭೆ ಮಾಡಿದ್ದಾರೆ. ಅಲ್ಲಿ ದೇಶದ ಉದ್ಧಾರದ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿ ಅವರನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋಲಲ್ಲ. ರಾಹುಲ್ ಗಾಂಧಿಗೆ ಮದುವೆ ಆಗೋದಿಲ್ಲ. ಮೋದಿಗೆ ಪರ್ಯಾಯವಾಗಿ …

Read More »