Breaking News

Daily Archives: ಜೂನ್ 27, 2023

“ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭವಿದ್ದಾಗ ಮಾತ್ರ ಸಿಜೇರಿಯನ್ ಮಾಡಬೇಕು. :ದಿನೇಶ್ ಗುಂಡೂರಾವ್,

ಮೈಸೂರಿನ ಕೆ.ಆರ್.ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಕೆ. ಹರೀಶ್ ಗೌಡ ಹಾಗು ಅನಿಲ್ ಚಿಕ್ಕಮಾದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರು : ನಗರದ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ಕೊಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೆರಿಗೆ ವಾರ್ಡ್‌ನಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಿದರು. “ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭವಿದ್ದಾಗ ಮಾತ್ರ ಸಿಜೇರಿಯನ್ ಮಾಡಬೇಕು. ರೋಗಿಗಳಿಗೆ ಹೊರಗೆ ಔಷಧಿ ತೆಗೆದುಕೊಂಡು ಬನ್ನಿ ಎಂದು …

Read More »

ಎಲ್ಲ ನಾಯಕರು ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಟೀಲ್ ಎಚ್ಚರಿಕೆ

ಮಂಗಳೂರು : ಯಾರೂ ಯಾವುದೇ ಹೇಳಿಕೆಗಳ‌ನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಎಲ್ಲರೂ ಕೆಲಸ ಮಾಡಬೇಕು. ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ …

Read More »

ಮುಂಗಾರು ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ.

ಕಲಬುರಗಿ : ಮಳೆಗಾಲ ಆರಂಭವಾಗಿ ತಿಂಗಳಾಗುತ್ತಿದ್ದರು ಸಹ ತೊಗರಿನಾಡು ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಮಳೆ ಬಾರದೆ ರೈತರು ಕೃಷಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಗಿದ್ದಾರೆ. ಆಕಾಶದತ್ತ ಮುಖ ಮಾಡಿರೋ ರೈತಾಪಿ ವರ್ಗ ಸಾಂಪ್ರದಾಯಿಕ ಆಚರಣೆಗೆ ಮುಂದಾಗಿದ್ದು, ಮಳೆಗಾಗಿ ಜಿಲ್ಲೆಯಲ್ಲಿ ರೈತರು ಕಪ್ಪೆಗಳ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಿ ದೇವರಲ್ಲಿ ಮೊರೆ ಇಟ್ಟಿದ್ದಾರೆ‌. ಕಲಬುರಗಿ ತಾಲ್ಲೂಕಿನ ಜಂಬಗಾ ಬಿ ಗ್ರಾಮಸ್ಥರು ಮಳೆಗಾಗಿ ಕಪ್ಪೆಗಳ ಮದುವೆ ನೆರವೇರಿಸಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ‌. ಗಂಡು ಮತ್ತು …

Read More »

ವಂದೇ ಭಾರತ್ ರೈಲಿನಲ್ಲೂ ಬೆಳಗಾವಿಗೆ ಅನ್ಯಾಯ

ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.   3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …

Read More »

ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.   ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ ವಿಕಾಸ್ ಕುಮಾರ್ ವಿಕಾಶ್- …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.    

Read More »

ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ರಾಜ್ಯದ ಜನಕ್ಕೆ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದು ನಮ್ಮ ಪ್ರಣಾಳಿಕೆಯಲ್ಲಿ. ಹಾಗಾಗಿ ನಾವು ಬಿಜೆಪಿಯವರನ್ನು ಕೇಳಿ ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅವಶ್ಯಕತೆ ಇರಲಿಲ್ಲ. ಮುಂಬರುವ ದಿನಗಳಲ್ಲಿ ಪ್ರಾಮಾಣಿಕವಾಗಿ ಜನರಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್ ಭರವಸೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಷಯ ತಿಳಿಸಿದರು. ಫುಡ್ ಕಾರ್ಪೋರೇಶನ್ ಅವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ಬರೆದುಕೊಟ್ಟಿದ್ದರು. ಈಗ ಹಿಂಪಡೆದಿದ್ದಾರೆ. …

Read More »

ನೀರು ಸರಬರಾಜಿನಲ್ಲಿ ಸಮಸ್ಯೆ ಎದುರಾಗದಂತೆ ತಾಲ್ಲೂಕು ಪ್ರವಾಸ ಕೈಗೊಳ್ಳಿ: ಜಿ.ಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಕ್ಷಣವೇ ತಾಲ್ಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು …

Read More »

ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 100, 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದ 106ರ ಅಜ್ಜಿ!

ಡೆಹ್ರಾಡೂನ್ (ಉತ್ತರಾಖಂಡ): ಯುವರಾಣಿ ಮಹೇಂದ್ರ ಕುಮಾರಿ ಅವರ ಸ್ಮರಣಾರ್ಥ ಆಯೋಜಿಸಿರುವ 18ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೋಮವಾರ ಆರಂಭವಾಯಿತು. ಎರಡು ದಿನಗಳ ಕಾಲ ನಡೆಯಲಿರುವ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 5 ವರ್ಷದಿಂದ 106 ವರ್ಷದೊಳಗಿನ ಆಟಗಾರರು ಭಾಗವಹಿಸುತ್ತಿರುವುದು ವಿಶೇಷ. ಯುವಕರಲ್ಲಿ ಕ್ರೀಡೆಗಳ ಕುರಿತು ಆಸಕ್ತಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಸ್ಪರ್ಧೆಯನ್ನು ಕಾಂಗ್ರೆಸ್ ಮುಖಂಡ ಸೂರ್ಯಕಾಂತ ದಶಮಾನ ನಡೆಸುತ್ತಿದ್ದಾರೆ. ಇಂದು ಈ ಸ್ಪರ್ಧೆಯ …

Read More »

ಗ್ರಾಮ ಒನ್​ನಲ್ಲಿ ಯಾರಾದರೂ ಲಂಚ ಕೇಳಿದರೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್​

ರಾಮನಗರ: ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಸಮಸ್ಯೆಗಳನ್ನು ಪರಿಹರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು …

Read More »