Breaking News

Daily Archives: ಜೂನ್ 27, 2023

ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 11 ಜನರಿಗೆ ಗಾಯ

ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ …

Read More »

ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಓಡಾಡಬೇಕಾದ ದುಸ್ಥಿತಿ

ಬೆಳಗಾವಿ : ಒಂದೆಡೆ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ರಾಜ್ಯ ಸರ್ಕಾರ ಚಾಲನೆ ಕೊಟ್ಟಿದೆ. ಆದರೆ ಇಲ್ಲಿನ ಕಾಡಂಚಿನ ಗ್ರಾಮಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ದುಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಖಾನಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿನ ಜನರು ಸರಿಯಾದ ಬಸ್​ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಇಲ್ಲಿನ ಬಾಲಕೆ ಕೆಎಚ್, ಶಿಂಧೊಳ್ಳಿ, ಹೊನಕಲ್, ಗವ್ವಾಳಿ, ಪಾಸ್ತೊಳಿ, ಅಮಗಾಂವ, ತಳೇವಾಡಿ, …

Read More »

ಮಧ್ಯಪ್ರದೇಶದಲ್ಲೂ ಪೇಸಿಎಂ ಪೋಸ್ಟರ್ ವಾರ್

ಭೋಪಾಲ್ (ಮಧ್ಯ ಪ್ರದೇಶ) : ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇದೀಗ ಪೋಸ್ಟರ್ ವಾರ್​ನಿಂದಾಗಿ ರಾಜ್ಯದ ರಾಜಕೀಯ ಮತ್ತಷ್ಟು ರಂಗೇರುತ್ತಿದೆ. ಮಾಜಿ ಸಿಎಂ ಕಮಲ್ ನಾಥ್ ಮತ್ತು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಅಲ್ಲಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ, ಈಗ ಮತ್ತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ …

Read More »

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.   ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

Read More »

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.   ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ …

Read More »