Breaking News

Monthly Archives: ಜೂನ್ 2023

ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ಬೆಂಗಳೂರು: ಸ್ನೇಹಿತರ ಎಡವಟ್ಟಿಗೆ ಅಮಾಯಕ ಫುಡ್ ಡೆಲಿವರಿ ಬಾಯ್​ ಬಲಿಯಾಗಿರುವ ಘಟನೆ ತಡರಾತ್ರಿ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್​ ಆರ್​​​ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಜೊಮ್ಯಾಟೊದಲ್ಲಿ ಫುಡ್ ಡೆಲಿವರಿ ಮಾಡಿಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಪ್ರಸನ್ನ ಕುಮಾರ್ ಮೃತ ದುರ್ದೈವಿ. ಹೌದು ಮದ್ಯಪಾನದ ಮತ್ತಿನಲ್ಲಿದ್ದರು ಎನ್ನಲಾಗಿರುವ ಸ್ನೇಹಿತರು ಅಜಾಗರೂಕತೆಯಿಂದ ಕಾರನ್ನು ಓಡಿಸಿ ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನ ಕುಮಾರ್​ಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣರಾಗಿದ್ದಾರೆ. ಅಪಘಾತದ ನಂತರ …

Read More »

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ:ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬಿಜೆಪಿಯವರೇ ಅಕ್ಕಿ ಕೊಡಿಸಿ ಅಂದ್ರೆ ಸರಿಯಲ್ಲ: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು, ಇದೀಗ ಛತ್ತೀಸ್‌ಘಡದಿಂದ ಅಕ್ಕಿ …

Read More »

ನಟ ಕಿಚ್ಚ ಸುದೀಪ್ ವಿರುದ್ಧ ರಾಜಣ್ಣ ಕಿಡಿ

ದಾವಣಗೆರೆ : ರಾಜ್ಯದಲ್ಲಿ ನಾಯಕ ಸಮಾಜದವರು ಮುಂದೆ ಡಿಸಿಎಂ ಹಾಗು ಸಿಎಂ ಆಗಬೇಕು. ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಮಾತ್ರ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ನಾಯಕ ಸಮುದಾಯದ ಡಿಸಿಎಂ ಆಗಬೇಕು ಎಂಬ ದಾಳ ಉರುಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಮಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು. ನಾನು ಮುಂದೆ ಯಾವುದೇ …

Read More »

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್​ ಪರಿಸ್ಥಿತಿ ಹೇಗಿರಲಿದೆ ಎಂದು ಕಾದು ನೋಡಿ: ವಿಜಯೇಂದ್ರ

ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯಂತೆ ಎಲ್ಲರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್​ನವರು ಭರವಸೆ ನೀಡಿದ್ದು …

Read More »

ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ RSS ಮನವಿ:

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಖಂಡಿಸಿದೆ. ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ, ಪೊಲೀಸ್, ಭದ್ರತಾ ಪಡೆಗಳು ಮತ್ತು ಕೇಂದ್ರದ ಏಜೆನ್ಸಿಗಳು ಸೇರಿದಂತೆ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದೂ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈಶಾನ್ಯ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಪರಿಹಾರ …

Read More »

ಜೂನ್​ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ನೈಋತ್ಯ ರೈಲ್ವೆ ವಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪ್ರತಿಷ್ಠಿತ ವಂದೇ ಭಾರತ್‌ ರೈಲು ಗುರುವಾರ ಬೆಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲು ಜೂನ್​​ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡುವ ಮುನ್ನ ಸೋಮವಾರದಿಂದ ಪ್ರಾಯೋಗಿಕ ಚಾಲನೆ …

Read More »

ಗೃಹ ಜ್ಯೋತಿ ಯೋಜನೆಗೆ ಮೊದಲ ದಿನ 55 ಸಾವಿರ ಗ್ರಾಹಕರ ನೋಂದಣಿ

ಬೆಂಗಳೂರು : ಗೃಹ ಜ್ಯೋತಿ ಯೋಜನೆಗಾಗಿ ಮೊದಲ ದಿನ 55,000 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ಸೇವಾ ಸಿಂಧು ಪೋರ್ಟಲ್​ನಲ್ಲಿ ಗೃಹ ಜ್ಯೋತಿ ಯೋಜನೆಯ ನೋಂದಣಿ ಆರಂಭಗೊಂಡಿದೆ‌. 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಮೊದಲ ದಿನವಾದ ಭಾನುವಾರ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಅರ್ಜಿ ಸಲ್ಲಿಕೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 …

Read More »

ಕಲಬುರಗಿಯಲ್ಲಿ ಇಬ್ಬರು‌ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ‌

ಕಲಬುರಗಿ: ತಂದೆಯೊಬ್ಬ ತನ್ನ ಮಗ ಹಾಗೂ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ‌ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ ಬಳಿ ಪೋಚಾವರಂದಲ್ಲಿ ನಡೆದಿದೆ. ಚಿಂಚೋಳಿ ತಾಲೂಕು ಕುಂಚಾವರಂ ಗ್ರಾಮದ ಹಾಗೂ ಸದ್ಯ ತೆಲಂಗಾಣದಲ್ಲಿ ವಾಸವಾಗಿದ್ದ ಹಣಮಂತ ವಡ್ಡರ್ (40) ಹಾಗೂ ಆತನ ಪುತ್ರ ಓಂಕಾರ (9), ಪುತ್ರಿ ಅಕ್ಷರಾ (6) ಮೃತರು. ಮೃತ ಹಣಮಂತ ಕೆಲ ವರ್ಷಗಳಿಂದ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ ವಾಸವಿದ್ದರು. ಇತ್ತೀಚೆಗೆ ಹಣಮಂತ ತನ್ನ ಮಕ್ಕಳೊಂದಿಗೆ ಕುಂಚಾವರಂ …

Read More »

ಗೋಳಗುಮ್ಮಟ ವೀಕ್ಷಣೆಗೆ ಬಂದ ನಾರಿ ‘ಶಕ್ತಿ’: ಒಂದೇ ದಿನಕ್ಕೆ 5 ಸಾವಿರ ಟಿಕೆಟ್ ಸೇಲ್

ವಿಜಯಪುರ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನಲೆಯಲ್ಲಿ ಮಹಿಳೆಯರು ಕುಟುಂಬ ಸಮೇತ ಪ್ರವಾಸಿ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ವಿಜಯಪುರದ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಭಾನುವಾರ ಮಹಿಳೆಯರ ದಂಡೇ ಹರಿದು ಬಂದಿದೆ. ಇದರಿಂದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ವೀಕ್ಷಣೆಗೆ ಟಿಕೆಟ್​ಗಾಗಿ ನೂಕುನುಗ್ಗಲು ಉಂಟಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮಹಿಳೆಯರು ತಮ್ಮ ಮಕ್ಕಳ ಜತೆ ಆಗಮಿಸಿ ಗೋಳಗುಮ್ಮಟ ವೀಕ್ಷಣೆ ಮಾಡಲು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ …

Read More »

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ)ನವರು ಮೊದಲು ಕೊಡುತ್ತೇವೆಂದು ಹೇಳಿ ಈಗ ವಿತ್‌ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ಯೋಚನೆ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಜಾರ್ಖಂಡ್, ತೆಲಂಗಾಣ, ಪಂಜಾಬ್ ರಾಜ್ಯಗಳ ಜತೆ ಚರ್ಚೆ ಆಗುತ್ತಿದೆ. …

Read More »