ಬೆಳಗಾವಿ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕೆರೆ ಹತ್ತಿರ ಶವ ಬಿಸಾಕಿ ಹೋಗಿರುವ ಘಟನೆ ನಗರದ ಅನಗೋಳದಲ್ಲಿ ನಡೆದಿದೆ. ಅನಗೋಳದ ಹೊರ ವಲಯದ ಕೆರೆ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೃಷಿ ಕೆಲಸಕ್ಕೆ ಹೊರಟಿದ್ದ ರೈತರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸಂಜಯ್ ತುಕಾರಾಮ್ ಪಾಟೀಲ (34) ಕೊಲೆಯಾದ ವ್ಯಕ್ತಿ. ಟಿಳಕವಾಡಿ ಪೊಲೀಸರಿಂದ ತನಿಖೆ: ಕೆಲಸಕ್ಕೆ ಹೋಗಿ ಬರುವುದಾಗಿ ಮೊನ್ನೆ ಮನೆಯಿಂದ ಹೊರಬಂದಿದ್ದ ಸಂಜಯ್ ಪಾಟೀಲ …
Read More »Monthly Archives: ಜೂನ್ 2023
ಹೆಡ್ಗೇವಾರ್ ಮತ್ತು ಸಾವರ್ಕರ್ ಪಠ್ಯಕ್ಕೆ ಕೊಕ್ : ಜನರ ಬಳಿ ಹೋಗಲು ಬಿಜೆಪಿ ನಿರ್ಧಾರ
ಬೆಂಗಳೂರು : ಹೆಡ್ಗೇವಾರ್, ಸಾವರ್ಕರ್ ಪಠ್ಯ ಕೈಬಿಟ್ಟು ಟಿಪ್ಪು ಮತ್ತು ನೆಹರೂ ಪತ್ರವನ್ನು ಪಠ್ಯದಲ್ಲಿ ಸೇರಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ಈ ಸಂಬಂಧ ಬಿಜೆಪಿ ಸಾವರ್ಕರ್ ಪಾಠ ತೆರವು ವಿಷಯವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಲೋಕಸಭೆ ಚುನಾವಣೆಗೆ ತೆಗೆದುಕೊಂಡು ಹೋಗುತ್ತೇವೆ. ಪೋಷಕರ ಬಳಿ ತೆಗೆದುಕೊಂಡು ಹೋಗುತ್ತೇವೆ, ವಿದ್ಯಾರ್ಥಿಗಳ ಮುಂದೆಯೂ ಇಡುತ್ತೇವೆ ಎಂದು ಬಿಜೆಪಿ ಹೇಳಿದೆ. ಸಚಿವ ಸಂಪುಟ ನಿರ್ಣಯದ …
Read More »‘ಪುಕ್ಸಟ್ಟೆ ಅಕ್ಕಿ ಕೊಡುವಂತೆ ನಾವು ಕೇಳಿಲ್ಲ’- ಕೇಂದ್ರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಮೈಸೂರು : “ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ತಾರತಮ್ಯವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ಹೋರಾಟ ಮಾಡಲು ಕಾರ್ಯಕ್ರಮ ರೂಪಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, “ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆ ಕೇಳಿಲ್ಲ. ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದಿರೋ ಅದೇ …
Read More »ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ
ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ …
Read More »ಪಂಚಮಸಾಲಿ ಮೀಸಲಾತಿ ವಿಚಾರ: ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಆಡಳಿತಾತ್ಮಕ ಸಭೆ ಕರೆದು ತೀರ್ಮಾನಿಸಲಿ
ಬೆಳಗಾವಿ: ಈ ಬಾರಿ ನಮ್ಮ ಪಂಚಮಸಾಲಿ ಸಮಾಜ ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ನ್ಯಾಯ ಕೊಡಿಸುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಆದಷ್ಟು ಬೇಗನೆ ಮುಖ್ಯಮಂತ್ರಿಗಳು ಆಡಳಿತಾತ್ಮಕ ಸಭೆ ಕರೆದು ತಮ್ಮ ಜೊತೆ ಮಾತುಕತೆ ನಡೆಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇಂದು ನಗರದ ಗಾಂಧಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ …
Read More »ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ ಎದುರಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳು ಹಕ್ಕೊತ್ತಾಯ ಮಂಡಿಸಿವೆ. ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿಂದು ಬೃಹತ್ ಸಭೆ ನಡೆಸಿದ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು. ಮಠಾಧೀಶರ ಸಭೆಯ ನೇತೃತ್ವವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಿದ್ದರು. ಕಾಶಿ ಪೀಠದ ಚಂದ್ರಶೇಖರ …
Read More »ರಾಜ್ಯಕ್ಕೆ ಅಕ್ಕಿ ಕೊಡದ ವಿಚಾರ : ಕೇಂದ್ರದ ನಡೆಯ ಹಿಂದೆ ದುರುದ್ದೇಶ ಇದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೇಂದ್ರದ ನಡೆಯ ಹಿಂದೆ ದುರುದ್ದೇಶ ಇದೆ. ದುಡ್ಡುಕೊಟ್ಟು ಅಕ್ಕಿ ಖರೀದಿ ಮಾಡ್ತೀವಿ ಎಂದು ಹೇಳಿದ್ರು, ಒಪ್ಪದಿರಲು ಕಾರಣವೇನು? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದಕ್ಕೆ ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ನಾಯಕರೇ ಉತ್ತರ ಕೊಡಬೇಕು. ಬಡವರಿಗೆ ಹಾಗೂ ದುಡಿಯುವ ಕೈಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದಾಗ, ಇದಕ್ಕೆ ಕೇಂದ್ರ ಸರ್ಕಾರ ಏಕೆ ಅಡ್ಡಗಾಲು ಹಾಕುತ್ತಿದೆ. …
Read More »ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. …
Read More »ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು. ನಾಳೆ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ …
Read More »ಬಿಟ್ ಕಾಯಿನ್ ಹಗರಣ ಮರು ತನಿಖೆ ಮಾಡುತ್ತೇವೆ- ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರು ಮಾತನಾಡಿದರು. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನವಾಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು ಎಂದರು. ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದರು. ಆ …
Read More »