Breaking News

Monthly Archives: ಜೂನ್ 2023

ಮಕ್ಕಳ ಜೀವದ ಜೊತೆ ಚೆಲ್ಲಾಟ: ಆಟೋ ಚಾಲಕರ ವಿರುದ್ಧ ಖಡಕ್ ಕ್ರಮಕ್ಕೆ ಮುಂದಾದ ಹು-ಧಾ ಪೊಲೀಸರು

ಹುಬ್ಬಳ್ಳಿ : ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿವೆ. ಮಕ್ಕಳನ್ನು ಶಾಲೆಗಳಿಗೆ ಬಿಡುವ ಮತ್ತು ಕರೆದುಕೊಂಡು ಬರುವ ಆಟೋ ರಿಕ್ಷಾ ಹಾಗೂ ಕ್ಯಾಬ್ ಚಾಲಕರು ಹಣದಾಸೆಗೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಆರು ಮಂದಿ ಕೂರುವ ಆಸನದಲ್ಲಿ ಹತ್ತರಿಂದ ಹದಿನೈದು ಮಂದಿ, ಚಾಲಕನ ಅಕ್ಕಪಕ್ಕ ನಾಲ್ವರು, ಬೀಳುವ ಭಯದಲ್ಲಿ ಆಟೋವನ್ನು ಬಿಗಿಯಾಗಿ ಕಷ್ಟಪಟ್ಟು ಹಿಡಿದುಕೊಳ್ಳುವ ಮಕ್ಕಳು, ಎರಡೂ ಬಾಗಿಲ ಹೊರಗಡೆ ಬ್ಯಾಗ್‌ಗಳ ರಾಶಿ, ಉಸಿರುಗಟ್ಟುವ ವಾತಾವರಣದಲ್ಲಿ ಎಳೆ ಜೀವಗಳ ಪಯಾಣ. ಇದು ಶಾಲಾ ಮಕ್ಕಳ …

Read More »

3ನೇ ಬಾರಿ‌ ಸತೀಶ್‌ ಜಾರಕಿಹೊಳಿಗೆ ಒಲಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟ

ಬೆಳಗಾವಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ‌ ಇಂದು ಹಂಚಿಕೆಯಾಗಿದ್ದು, ನಿರೀಕ್ಷೆಯಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ‌ ಸಚಿವರಾಗಿ ಸತೀಶ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿ ಜಿಲ್ಲಾ ಮಂತ್ರಿಯಾಗಿದ್ದಾರೆ. ಎರಡು ವರ್ಷದ ಬಳಿಕ ಬೆಳಗಾವಿ ಜಿಲ್ಲೆಯವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. 2020ರ ಫೆಬ್ರವರಿಯಲ್ಲಿ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದ ರಮೇಶ ಜಾರಕಿಹೊಳಿ ಮಾರ್ಚ್ 3, 2021ರಂದು ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ರಾಜೀನಾಮೆ …

Read More »

ಉಚಿತ ವಿದ್ಯುತ್ ಜಾರಿಗೆ ತನ್ನಿ: ರಾಜ್ಯ ಸರ್ಕಾರದ ವಿರುದ್ದ ಬೆಳಗಾವಿ ನೇಕಾರರ ಪ್ರತಿಭಟನೆ

ಬೆಳಗಾವಿ : ಒಂದೆಡೆ ಸರ್ಕಾರ ಪ್ರತಿ ಮನೆಗೂ 200 ಯೂನಿಟ್​ ಉಚಿತ ವಿದ್ಯುತ್ ಘೋಷಿಸಿದ್ದರೆ, ಮತ್ತೊಂದೆಡೆ ಮಗ್ಗಗಳ ವಿದ್ಯುತ್ ದರ ಹೆಚ್ಚಾಗಿದ್ದು ನೇಕಾರರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡಿರುವ ಬೆಳಗಾವಿಯ ನೇಕಾರರು ವಿದ್ಯುತ್ ಬಿಲ್ ಕಟ್ಟದಿರಲು ನಿರ್ಧರಿಸಿದ್ದಾರೆ. ಅಲ್ಲದೇ ಉಚಿತ ವಿದ್ಯುತ್ ಜಾರಿ ಸೇರಿ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸೇವಾ ಸಂಘದ ನೇತೃತ್ವದಲ್ಲಿ ನೇಕಾರರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ …

Read More »

ಜುಲೈ 3 ರಿಂದ 14 ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದೆ. ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.   ನಂತರ ಜುಲೈ 5 ರಿಂದ 7 ರವರೆಗೆ ಕಲಾಪ ನಡೆಯಲಿದೆ. ಜು.8 ಮತ್ತು 9 ರಂದು ಸರ್ಕಾರಿ ರಜೆ ಇದ್ದು, 10 ರಿಂದ 14 ರವರೆಗೆ ಕಲಾಪ …

Read More »

ಬಂಟ್ವಾಳ: ವಿದ್ಯುತ್ ಶಾಕ್​ಗೆ ವ್ಯಕ್ತಿ ಬಲಿ, ಚಾರ್ಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬಂಟ್ವಾಳ : ಮರದಿಂದ ಅಡಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಶಾಫಿ (28) ಮೃತ ದುರ್ದೈವಿ. ಶಾಫಿ ಅವರು ಕಳೆದ ಅನೇಕ ವರ್ಷಗಳಿಂದ ಅಡಿಕೆ ವ್ಯವಹಾರ ನಡೆಸುತ್ತಿದ್ದರು. ಈ ವರ್ಷ ಅಡಿಕೆ ಕೀಳಲು ಸಾವಿರಾರು ರೂ. ನೀಡಿ ಹೊಸ ಸಲಾಕೆಯನ್ನು ಖರೀದಿಸಿದ್ದರು. …

Read More »

ಮಗುವನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ತುಮಕೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್​​ನಿಂದ ಕೊಯ್ದು ಹತ್ಯೆ ಮಾಡಿದ ತಾಯಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜಿಲ್ಲೆಯ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಿನ್ನೆ(ಶುಕ್ರವಾರ) ಈ ಘಟನೆ ನಡೆದಿದೆ. ಕ್ರಿತೀಶ್ (1) ಮೃತ ಮಗು. ಶ್ವೇತಾ (28) ಮಗು ಕೊಲೆ ಮಾಡಿದ ತಾಯಿ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಕ್ರಿತೀಶ್ ಕೈಯನ್ನು ಶ್ವೇತಾ ಏಕಾಏಕಿ ಕೊಯ್ದಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ಮಗು ಸ್ಥಳದಲ್ಲಿಯೇ ಸಾವನಪ್ಪಿದೆ. ಬಳಿಕ …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯಲ್ಲಿ ಚೆನ್ನರಾಜ್‌ ಹಟ್ಟಿಹೊಳಿ ದರ್ಪ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಚೇರಿಯಲ್ಲಿ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್‌ ಹಟ್ಟಿಹೊಳಿ ಮಾಧ್ಯಮದವರ ಜತೆ ದರ್ಪ ಪ್ರದರ್ಶಿಸಿದ್ದು ಟೀಕೆಗೆ ಗುರಿಯಾಗಿದೆ. ಇದೀಗ ಆ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂದು ಟೀಕಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಕುಳಿತು ಎಂಎಲ್​​ಸಿ ಚೆನ್ನರಾಜ್ ಹಟ್ಟಿಹೊಳಿ, ಗ್ಯಾರಂಟಿ ಯೋಜನೆಗಳ ಕುರಿತಾದ ಅನುಮಾನಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ತೆರಳಿದ್ದ ಮಾಧ್ಯಮದವರ ಜತೆ ಅಹಂಕಾರದಿಂದ ವರ್ತಿಸಿದ್ದರು. ಚೆನ್ನರಾಜ್ …

Read More »

M.B.ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ ಪ್ರಹ್ಲಾದ್‌ ಜೋಶಿ

ಧಾರವಾಡ : ಎಂಬಿ ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಸಚಿವ ಎಂಬಿ ಪಾಟೀಲ್ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ನಮ್ಮ ಸರಕಾರವಿದ್ದರೂ ನಾವು ಸಂಯಮದಿಂದ ವರ್ತಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣೆಗಳು ಸಹಜ. ಇವರು ಮಾಡುತ್ತಿರುವುದನ್ನು ನೋಡಿ ಹಿಟ್ಲರ್ ಸರ್ಕಾರ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. …

Read More »

ಪಿಂಚಣಿ ಪಡೆಯುತ್ತಿರುವ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆ ಸಿಗಲಿದೆ, ಅವರಿಗೆ ಪಿಂಚಣಿ ಮೊಟಕುಗೊಳಿಸುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ ಪಿಂಚಣಿ ಸೌಲಭ್ಯ ಪಡೆದುಕೊಳ್ಳುವವರಿಗೆ ಅವರ ಪಿಂಚಣಿ ಮೊಟಕು ಮಾಡುವುದಿಲ್ಲ, ಈ ಬಗ್ಗೆ ಗೊಂದಲ ಬೇಡ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂದಾಯ ಇಲಾಖೆಯ ಅಡಿಯಲ್ಲಿ 78 ಲಕ್ಷ ನಾನಾ ರೀತಿಯ ಜನರಿಗೆ ವಿವಿಧ ರೀತಿಯ ಪಿಂಚಣಿ ಸೌಲಭ್ಯ ಇದೆ. ಇದಕ್ಕಾಗಿ 10,411 ಕೋಟಿ ಈ ವರ್ಷ ಖರ್ಚು ಆಗುತ್ತದೆ‌. ಗೃಹ ಲಕ್ಷ್ಮೀ ಯೋಜನೆ …

Read More »

ಹುಬ್ಬಳ್ಳಿ ಧಾರವಾಡ ನಡುವೆ ತಲೆಎತ್ತಲಿದೆ ಹೊಸ ಟೌನ್ ಶಿಪ್;

ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಸುಸಜ್ಜಿತ ರಸ್ತೆ, ಯುಜಿಡಿ, ನೀರು, ಪಾರ್ಕಿಂಗ್‌ ಹಾಗೂ ಉದ್ಯಾನ ಸೇರಿದಂತೆ ಅಗತ್ಯ ಮೂಲಸೌಲಭ್ಯವುಳ್ಳ ಮಾದರಿಯ ಟೌನ್‌ಶಿಪ್‌ ನಿರ್ಮಿಸಲು ಯೋಜಿಸಲಾಗಿದ್ದು, ಈ ಬಗ್ಗೆ ಈಗಾಗಲೇ ನಗರಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ‘ವಿಜಯ ಕರ್ನಾಟಕ’ ಕಚೇರಿಯಲ್ಲಿ ಸೋಮವಾರ ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿಗಳೊಂದಿಗೆ ನಡೆದ ‘ಶಾಸಕರೊಂದಿಗೆ …

Read More »