ಬೆಂಗಳೂರು : ಬೆಂಗಳೂರಿನ ಹಳಗೇವಡೇರನಹಳ್ಳಿಯಲ್ಲಿ 2.5 ಎಕರೆ ಭೂಮಿ ಡಿನೋಟಿಫೈ ಮಾಡಿದ್ದ ಕುರಿತು ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರ (ಸಿಎಜಿ) ವರದಿ ಆಧರಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ. ಸಿಎಜಿ …
Read More »Monthly Archives: ಜೂನ್ 2023
ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ತನಿಖೆಗೆ ಆದೇಶ
ಬೆಂಗಳೂರು : ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವರ್ಷ ಜುಲೈ 23 ಮತ್ತು 24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಸಲ್ಲಿಸಿದ್ದ …
Read More »ಪರಿಷತ್ ಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್ಗೆ ಜಯ, ಬಿಜೆಪಿಗೆ ಶೂನ್ಯ ಸಾಧ್ಯತೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರg ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ಉಪ ಚುನಾವಣೆಗೆ ಚುನಾವಣೆ ಅಧಿಕಾರಿಗಳು ಪ್ರತ್ಯೇಕ ಅಧಿಸೂಚನೆ ಹೊರಡಿಸುವುದರಿಂದ ಹಾಗೂ ಚುನಾವಣೆಯು ರಾಜೀನಾಮೆ ನೀಡಿರುವ ಸದಸ್ಯರ ಬಾಕಿ ಇರುವ ಅವಧಿಗೆ ನಡೆಯುವುದರಿಂದ ಹೆಚ್ಚಿನ …
Read More »ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ, ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಗದಗ ಮತ ಕ್ಷೇತ್ರದಲ್ಲಿ ವಿಧಾನಸಭೆ ಅಧಿವೇಶನದ ಮಾದರಿಯಲ್ಲೇ ಜನರಿಂದ ‘ಜನತಾ ಸದನ’
ಗದಗ: ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಂತೆಯೇ ಗದಗ ಮತ ಕ್ಷೇತ್ರದಲ್ಲಿ ಜನತಾ ಸದನ ನಡೆಸಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜನತಾ ಸದನವು ಪ್ರತಿ ತಿಂಗಳು ನಾಲ್ಕನೇ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಒಂದು ದಿನ ಹಳ್ಳಿ ಮತ್ತೊಂದು ದಿನ ನಗರ ಪ್ರದೇಶದಲ್ಲಿ ಜರುಗಲಿದೆ. ಜನತಾ ಸದನ ಉದ್ಘಾಟನಾ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದ್ದು, …
Read More »ಸಚಿವ ಎಂ ಬಿ ಪಾಟೀಲ್ – ಶಾಸಕ ಯತ್ನಾಳ್ ಮಧ್ಯೆ ಟ್ವೀಟ್ ವಾರ್
ವಿಜಯಪುರ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಸಚಿವ ಎಂ. ಬಿ ಪಾಟೀಲ ನೀಡಿದ ಎಚ್ಚರಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎಂದು ತಿರುಗೇಟು ನೀಡಿದ್ದಾರೆ. ನೂತನ ಸಚಿವರಾಗಿ ಮೊನ್ನೆ ಎಂ. ಬಿ. ಪಾಟೀಲ ಅವರು ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಚಿಂತಕ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮಾತನಾಡಿ, ಅವರು ಇದೇ …
Read More »ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಂಗಳೂರು : ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳು ಗೋರಿಪಾಳ್ಯದ ನಿವಾಸಿಗಳಾಗಿದ್ದು, ಶಾಕೀಬ್, ಸುಹೈಲ್ ಹಾಗೂ ಮೊಹಮ್ಮದ್ ಸಕ್ಲೇನ್ ಎಂದು ಗುರುತಿಸಲಾಗಿದೆ. ಐಷಾರಾಮಿ ಜೀವನಕ್ಕಾಗಿ ಕಳ್ಳತನದ ಅಡ್ಡದಾರಿ ಹಿಡಿದಿದ್ದ ಮೂವರು ಆರೋಪಿಗಳು ನಗರದಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಳ್ಳತ್ತಿದ್ದರು. ನಂತರ ಬೈಕಿನಲ್ಲಿ ತೆರಳಿ ಐಫೋನ್ಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದರು. ಕದ್ದ ಬಳಿಕ ಹೈದರಾಬಾದ್ಗೆ ಐಫೋನ್ …
Read More »ಮಧ್ಯಾಹ್ನ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡ 35 ಸೈನಿಕರು: ಆಸ್ಪತ್ರೆಗೆ ದಾಖಲು
ಹಾಸನ : ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಅಸ್ವಸ್ಥಗೊಂಡ 35 ಮಂದಿ ಯೋಧರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗರ ಕ್ಯಾಂಪ್ನಲ್ಲಿರುವ ವಾಹನ ಚಾಲನಾ ತರಬೇತಿಯ ಸೈನಿಕರು ಇಂದು ಮಧ್ಯಾಹ್ನ ಎಂದಿನಂತೆ ಊಟ ಸೇವಿಸಿದ್ದರು. ಕೆಲ ಹೊತ್ತಿನ ಬಳಿಕ ಸುಮಾರು 35 ಮಂದಿ ಯೋಧರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ತಕ್ಷಣ ಇವರನ್ನು ಸಕಲೇಶಪುರದ …
Read More »ಪ್ರಾಚಾರ್ಯರಿಂದಲೇ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ದೂರು ದಾಖಲು
ಬಳ್ಳಾರಿ: ಬಳ್ಳಾರಿಯ ಪ್ರತಿಷ್ಠಿತ ಅಲ್ಲಂ ಸುಮಂಗಲಮ್ಮ ಮಹಿಳಾ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಶರಣಪ್ಪ ತನಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಅತಿಥಿ ಉಪನ್ಯಾಸಕಿ ಆರೋಪ ಮಾಡಿದ್ದಾರೆ. ಉಪನ್ಯಾಸಕಿಗೆ ಅಶ್ಲೀಲ, ಲೈಂಗಿಕ ಕ್ರಿಯೆಗೆ ಒತ್ತಾಯ, ಪ್ರಾಣ ಬೆದರಿಕೆ ಹಾಕಿದ ಆರೋಪದಡಿ ಪ್ರಾಂಶುಪಾಲರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಎಎಸ್‌ಎಂ ಕಾಲೇಜಿನ ಪ್ರಾಚಾರ್ಯ ಶರಣಪ್ಪ (59) …
Read More »ಕಳ್ಳತನ ಮಾಡೋದನ್ನ ನೋಡಿದ ಬಾಲಕಿ ; ಕೊಲೆ ಮಾಡಿದ ದುಷ್ಕರ್ಮಿ .!
ಕಳ್ಳತನ ಮಾಡುತ್ತಿರುವುದನ್ನು ನೋಡಿದ 9 ವರ್ಷದ ಪುಟ್ಟ ಬಾಲಕಿಯನ್ನು ದುಷ್ಕರ್ಮಿಯೋರ್ವ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಘಟನೆ ನಡೆದಿದೆ. ಬಾಲಕಿ ನಾಪತ್ತೆಯಾದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆಯೊಳಗಿನ ಸ್ಟೋರ್ ರೂಮ್‌ನಲ್ಲಿ ಬಟ್ಟೆಯಿಂದ ಸುತ್ತಿಟ್ಟ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣ ಬೆನ್ನಟ್ಟಿದ ಪೊಲೀಸರು 19 ವರ್ಷದ ತರುಣನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಇನ್ನು ಆಕೆಯ ಮನೆಯಲ್ಲಿ ಹಣ ಕದಿಯುವುದನ್ನು …
Read More »