ಬೆಂಗಳೂರು: ರಾಜ್ಯದಲ್ಲಿನ ಬಾಡಿಗೆ ಮನೆಗಳಲ್ಲಿ ವಾಸಿಸುವವರೂ ಸೇರಿದಂತೆ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆಪಾದನೆ ಕೇಳಿ ಬಂದ ಹಿನ್ನೆಲೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್ವರೆಗೆ ಬಾಡಿಗೆದಾರರೂ ಬಿಲ್ ಪಾವತಿ …
Read More »Monthly Archives: ಜೂನ್ 2023
ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ.:ಸಚಿವ ಬಿ ನಾಗೇಂದ್ರ
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ. ವಿಜಯನಗರ ಜಿಲ್ಲೆಯ ಜನಪ್ರತಿನಿಧಿಗಳು ಮತ್ತೆ ಒಂದು ಮಾಡೋಕೆ ಒಪ್ಪಿದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಯುವಜನ ಸೇವಾ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ಹಂಪಿ, ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇರಿದಂತೆ ಇತರ ಪ್ರೇಕ್ಷಣೀಯ ಸ್ಥಳಗಳು ನಮ್ಮ ಜಿಲ್ಲೆಯಿಂದ …
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ತಾಂತ್ರಿಕ ಸ್ಪರ್ಶ: ಕ್ಷಣಾರ್ಧದಲ್ಲಿಯೇ ಆರೋಗ್ಯ ತಪಾಸಣೆ ವರದಿ ಆನ್ಲೈನ್ನಲ್ಲಿ ಲಭ್ಯ..
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿತ್ಯ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ. ಹೀಗೆ ಬರುವ ರೋಗಿಗಳು ಗಂಟೆಗಟ್ಟಲೆ ಕಾಯಲೇ ಬೇಕಾಗುತ್ತಿತ್ತು. ಆದರೆ ಇದೀಗ ಎಕ್ಸರೇ, ಸ್ಕ್ಯಾನಿಂಗ್ ಹಾಗೂ ರಕ್ತ ತಪಾಸಣೆ ರಿಪೋರ್ಟ್ ಅನ್ನು ಆನ್‌ಲೈನ್‌ನಲ್ಲೇ ನೀಡುವ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವ ವಿಚಾರವು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡ ಕಿಮ್ಸ್: ಕರ್ನಾಟಕ ವಿಜ್ಞಾನ ಮತ್ತು ವೈದ್ಯಕೀಯ …
Read More »ಜೂನ್ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಜೂನ್ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಿಕೋಟೆ, ಬೈಲಹೊಂಗಲ, ಬಸವನ …
Read More »ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ
ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, …
Read More »ಅಭಿಷೇಕ್-ಅವಿವಾ ಮದುವೆಗೆ ದುಬಾರಿ ಗಿಫ್ಟ್
ಅಭಿಷೇಕ್-ಅವಿವಾ ಮದುವೆಗೆ ದುಬಾರಿ ಗಿಫ್ಟ್ ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ. ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.
Read More »ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ; ಯೋಜನೆಯಿಂದ ವಂಚಿತರಾಗಲಿರುವ ಕರಾವಳಿ ಮಹಿಳೆಯರು
ಮಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಮಂಜೂರು ಮಾಡಿದೆ. ಈ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾಗಿದ್ದು, ಈ ಯೋಜನೆಯಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಮಹಿಳೆಯರು ವಂಚಿತರಾಗಲಿದ್ದಾರೆ. ರಾಜ್ಯದ ಮಹಿಳೆಯರಿಗೆ ದೊರೆತ ಉಚಿತ ಬಸ್ ಭಾಗ್ಯ ಕರಾವಳಿಯ ಮಹಿಳೆಯರಿಗೆ ಮರೀಚಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ …
Read More »ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ
ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ …
Read More »ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಸಿದ್ದರಾಮಯ್ಯ
ದಾವಣಗೆರೆ : ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ಸು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಂದು ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಇಂದು ಕೈ ನಾಯಕರಿಗೆ ಅದೃಷ್ಟದ ಜಿಲ್ಲೆಯಾಗಿ ಪರಿಣಮಿಸಿದೆ. ಚುನಾವಣೆ ವೇಳೆ ದಾವಣಗೆರೆಯಲ್ಲಿ ಸಮಾವೇಶ ಮಾಡಿದರೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂಬ …
Read More »ಅಕ್ರಮ ಹಣ ವರ್ಗಾವಣೆ ಆರೋಪ: ಐಎಎಸ್ ಅಧಿಕಾರಿ ಪತ್ನಿ ವಿರುದ್ಧದ ಇಡಿ ಸಮನ್ಸ್ ರದ್ದು ಪಡಿಸಿದ ಹೈಕೋರ್ಟ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಹಿರಿಯ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರ ಪತ್ನಿ ರಿಚಾ ಸಕ್ಸೇನಾ ಅವರಿಗೆ ಜಾರಿ ನಿರ್ದೇಶನಾಲ(ಇಡಿ) ಜಾರಿ ಮಾಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದು ಪಡಿಸಿದೆ. ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ನ್ನು ಪ್ರಶ್ನಿಸಿ ರೀಚಾ ಸಕ್ಸೇನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ ಆರೋಪಿಯನ್ನು …
Read More »