ನವದೆಹಲಿ: ಜೂನ್ ತಿಂಗಳು ಮುಗಿಯುತ್ತಿದೆ. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ ಆದಷ್ಟು ಬೇಗ ಈ ಕಾರ್ಯ ಮಾಡಿ ಮುಗಿಸಿ. ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿದೆ. ಈ ಮೊದಲು ಪ್ಯಾನ್ ಮತ್ತು ಆಧಾರ ಜೋಡಣೆ ಮಾಡುವುದಕ್ಕೆ ಮಾರ್ಚ್ 31 ರವರೆಗೆ ಸಮಯವನ್ನು ನಿಗದಿಪಡಿಸಲಾಗಿತ್ತು. ಆಗ ಅದನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿತ್ತು. ಈಗ ಈ ಗಡುವಿನೊಳಗೆ ನೀವು ಪ್ಯಾನ್-ಆಧಾರ್ ಲಿಂಕ್ ಮಾಡದಿದ್ರೆ ನಿಮ್ಮ …
Read More »Monthly Archives: ಜೂನ್ 2023
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೆ ಅಪಘಾತ: ಬಸ್ ಕಂಡಕ್ಟರ್ ಸಾವು
ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಇಂದು ಘಟನೆ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ …
Read More »ಅಕ್ಕಿ ಬದಲು ಹಣ ಪಾವತಿಸಲು ತೀರ್ಮಾನಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸಮರ
ಬೆಂಗಳೂರು : ರಾಜ್ಯ ಸರ್ಕಾರವು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್ ಸರ್ಕಾರದ ನಿರ್ಣಯವನ್ನು ಬಿಜೆಪಿ ಖಂಡಿಸಿದೆ. ‘ಹೋರಾಟ ಮಾಡುತ್ತೇವೆ’: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣೆ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ …
Read More »ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.
ನವದೆಹಲಿ: ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಕ್ವಿಂಟಲ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (Fair and Remunerative Price – FRP)ಯನ್ನು 10 ರೂಪಾಯಿ ಹೆಚ್ಚಳ ಮಾಡಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು 315 ರೂ.ಗೆ ನಿಗದಿ ಮಾಡಿದೆ. ಇದಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …
Read More »ತ್ರಿಪುರದಲ್ಲಿ ರಥಕ್ಕೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ 7 ಭಕ್ತರು ಸಾವು
ಅಗರ್ತಲಾ (ತ್ರಿಪುರ): ತ್ರಿಪುರದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ ರಥಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಕುಮಾರ್‌ಘಾಟ್‌ನಲ್ಲಿ ರಥಕ್ಕೆ ಹೈಟೆನ್ಶನ್ ವೈರ್ ತಗುಲಿ ಏಳು ಜನ ಭಕ್ತರು ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಇದರ ನಡುವೆಯೇ ರಥಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಇಂದು ಸಂಜೆ 4.30ರ ಸುಮಾರಿಗೆ ಭಕ್ತರು ರಥ ಎಳೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. …
Read More »ವಿಜಯ ಸಂಕೇಶ್ವರ ಅವರ ತ್ಯಾಗದಿಂದ ಯತ್ನಾಳ್ ಕೇಂದ್ರದಲ್ಲಿ ಸಚಿವರಾಗಿದ್ದರು: ನಿರಾಣಿ
ವಿಜಯಪುರ: ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರ ತ್ಯಾಗದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕೇಂದ್ರದಲ್ಲಿ ಸಚಿವರಾಗಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅಣು ಪರೀಕ್ಷೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದರು. ಅಂದು ಇವರನ್ನು ದಿ. ಅನಂತ್ ಕುಮಾರ್ ತಡೆದರು. ನಂತರ ಜೆಡಿಎಸ್ ಸೇರಿ ಟೋಪಿ ಹಾಕಿಕೊಂಡು ನಮಾಜ್ ಮಾಡಿದ್ದರು ಎಂದು ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಶಿಕ್ಷಣ ಸಂಸ್ಥೆಗಳು ಪಡೆಯುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ: ಹೈಕೋರ್ಟ್
ಬೆಂಗಳೂರು: ”ಶಿಕ್ಷಣ ಸಂಸ್ಥೆಗಳು ಸಾರ್ವಜನಿಕರಿಂದ ಪಡೆಯುವ ದೇಣಿಗೆಗೆ ಆದಾಯ ತೆರಿಗೆ ಪಾವತಿಯಿಂದ ವಿನಾಯಿತಿ ಇರಲಿದೆ” ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಆದಾಯ ತೆರಿಗೆ ವಿನಾಯಿತಿ ನೀಡಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ನೀಡಿದ್ದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾ.ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿ ಆದೇಶಿಸಿದೆ. ಅಲ್ಲದೇ, …
Read More »ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು ಪ್ರಾರ್ಥನೆ ಮಾಡಿದರು. ಇಲ್ಲಿಯತನಕ ಸಮರ್ಪಕ ಮಳೆಯಾಗದೇ …
Read More »ಕೊಪ್ಪಳದ ವಿದ್ಯಾರ್ಥಿನಿಯಿಂದ ಸಿಎಂಗೆ ಅಭಿನಂದನಾ ಪತ್ರ: ಬಾಲಕಿಗೆ ಮರುಪತ್ರ ಬರೆದ ಸಿದ್ದರಾಮಯ್ಯ
ಕೊಪ್ಪಳ : ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ಸಿದ್ದರಾಮಯ್ಯರಿಗೆ ಅಭಿನಂದನೆ ಪತ್ರ ಬರೆದಿದ್ದಳು. ಈ ಪತ್ರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ವಿದ್ಯಾರ್ಥಿನಿ ಹರ್ಷ ವ್ಯಕ್ತಪಡಿಸಿದ್ದಾಳೆ. ಕೊಪ್ಪಳ ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನಲ್ಲಿ 8ನೇ ತರಗತಿ ಓದುತ್ತಿರುವ ಶ್ರೇಯಾಂಕ ವಿ.ಮೆಣಸಗಿ ಎಂಬ ವಿದ್ಯಾರ್ಥಿನಿ ಸಿದ್ದರಾಮಯ್ಯರಿಗೆ ಮೇ 29ರಂದು ಪತ್ರ ಬರೆದಿದ್ದಳು. ಪತ್ರದಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮದ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಳು. ಈ ಬಾರಿಯೂ ಉತ್ತಮ …
Read More »ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಪ್ಲೊಮಾ ಇಂಜಿನಿಯರಿಂಗ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಾಮೀಣ ಇಂಧನ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಹುದ್ದೆ ಕಾರ್ಯ ನಿರ್ವಹಣೆ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷಣೆಯ ತರಗತಿಗಳನ್ನು ತೆಗೆದುಕೊಳ್ಳುವ ಜ್ಞಾನ ಹೊಂದಿರಬೇಕು. …
Read More »