Breaking News

Monthly Archives: ಜೂನ್ 2023

ತಾಯಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಶರಣಾದ ಸಹೋದರಿಯರು

ಹುಬ್ಬಳ್ಳಿ : ನೇಣು ಬಿಗಿದುಕೊಂಡು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ. ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ತಾಯಿ‌ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು …

Read More »

ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ

ಅಹಮದಾಬಾದ್ (ಗುಜರಾತ್): ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ಮುಂದಾಗಿದೆ. ಈ ಬಗ್ಗೆ ಖ್ಯಾತಿ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ಒಡಿಶಾ ರೈಲು ಅಪಘಾತದ ಸುದ್ದಿಯಿಂದ ತಾನು ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಗೌತಮ್ ಅದಾನಿ …

Read More »

ಭೂಮಿ ಮತ್ತು ಮನುಕುಲವನ್ನು ರಕ್ಷಿಸಲು ಪರಿಸರವನ್ನು ರಕ್ಷಿಸುವುದು ಅತ್ಯಂತ ಅವಶ್ಯಕ.

ಮಾನವರ ಜೀವನ ಮತ್ತು ಪರಿಸರದ ಮಧ್ಯೆ ಆಳವಾದ ಸಂಬಂಧವಿದೆ. ಪ್ರಕೃತಿಯಿಲ್ಲದೇ ಜೀವನವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಪ್ರಕೃತಿಯೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಎಲ್ಲ ಮಾನವರಿಗೆ ಅವಶ್ಯಕವಾಗಿದೆ. ಆದರೆ, ತಂತ್ರಜ್ಞಾನದ ಆಮೂಲಾಗ್ರ ಬೆಳವಣಿಗೆ ಮತ್ತು ಆಧುನಿಕ ಜೀವನಶೈಲಿಯ ಹೆಚ್ಚಳದಿಂದ ಪರಿಸರಕ್ಕೆ ಸರಿಪಡಿಸಲಾಗದ ಅಪಾಯವಾಗುತ್ತಿದೆ ಎನ್ನುವುದು ಕೂಡ ಸತ್ಯ. ಇದಕ್ಕಾಗಿಯೇ ಪರಿಸರ ರಕ್ಷಣೆಯ ಬಗ್ಗೆ ಮತ್ತು ಪರಿಸರದ ಸ್ವಚ್ಛತೆಗಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ …

Read More »

ಬಸ್​ ಕಾರು ಮುಖಾಮುಖಿ ಡಿಕ್ಕಿ: ಐವರ ದುರ್ಮರಣ

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 115 ಕಿಮೀ ದೂರದಲ್ಲಿರುವ ನಾಗ್ಭಿಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪಾ ಗ್ರಾಮದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. “ನಾಗ್ಪುರದಿಂದ ನಾಗಭೀಡ್‌ಗೆ ಕಾರಿನಲ್ಲಿ ಆರು ಜನರು ಪ್ರಯಾಣಿಸುತ್ತಿದ್ದಾಗ, ಈ ಕಾರು ವಿರುದ್ಧ …

Read More »

ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಆತ್ಮಹತ್ಯೆ

ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ‌. ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ. ದರ್ಶಿನಿ ಹೊಸಕೋಟೆ ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು ಎನ್ನಲಾಗಿದೆ. ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕಾಗಮಿಸಿದ ಪೊಲೀಸರು ಭೇಟಿ …

Read More »

ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ನಡೆದಿದೆ. ಹತ್ಯೆಯಾದ ವ್ಯಕ್ತಿ ತಿಗಡಿ ಗ್ರಾಮದ ನಿವಾಸಿ ಸುರೇಶ್ ಖಣಗಾಂವಿಯಾಗಿದ್ದು, ಶಂಕರ್ ಖಣಗಾಂವಿ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಹತ್ಯೆಗೀಡಾದ ಸುರೇಶ್ ಮಾಜಿ ಸೈನಿಕನಾಗಿದ್ದು, ಸದ್ಯ ಜಮೀನಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ್ ಖಣಗಾಂವಿ ಹಾಗೂ ಹತ್ಯೆಗೀಡಾದ …

Read More »

ಆನೆದಂತ ಕಳ್ಳರ ಬಂಧನ

ನಿಪ್ಪಾಣಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೌಂದಲಗಾ ಗ್ರಾಮದ ಮಾಂಗೂರು ವೃತ್ತದಲ್ಲಿ ಆನೆ ದಂತವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ಸಿಐಡಿ ತಂಡ ಬಂಧಿಸಿದೆ. ಬಂಧಿತ ಇಬ್ಬರು ಶಂಕಿತರ ಹೆಸರುಗಳು ನಿತೀಶ ಅಂಕುಶ ರಾವುತ ( 35) ಅಹಮದನಗರದ ಜಿಲ್ಲೆಯ ಪೆಡಗಾಂವ ನಿವಾಸಿ ಮತ್ತು ಖಂಡು ಪೋಪಟ್ ರಾವುತ್ (34) ಸೋಲಾಪುರ ಜಿಲ್ಲೆಯ ಕರ್ಮಲಾ ಗ್ರಾಮದ ನಿವಾಸಿಗಳಾಗಿದ್ದು,.. ಇಬ್ಬರು ಶಂಕಿತರಿಂದ 12 ಕೆಜಿ ತೂಕದ ಆನೆ ದಂತವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು …

Read More »

ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್

ರಾಜ್ಯದಲ್ಲಿ ಹಿಟ್ಲರ್ ಸರ್ಕಾರ ಆಡಳಿತಕ್ಕೆ ಬಂದಿದೆ ಎಂಬ ಚಕ್ರವರ್ತಿ ಸುಲಿಬೆಲೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್ ನೀಡಿದ್ದಾರೆ‌. ಕಾಂಗ್ರೆಸ್ ಸರ್ಕಾರವನ್ನ ಹಿಟ್ಲರ್ ಸರ್ಕಾರಕ್ಕೆ ಹೋಲಿಸಿದ ಸುಲಿಬೆಲೆಗೆ ಕ್ಲಾಸ್ ತೆಗೆದುಕೊಂಡ ಎಂ ಬಿ ಪಾಟೀಲ್ ಹಿಂದೆ ನಾಲ್ಕು ವರ್ಷ ಸುಲಿಬೆಲೆ ಏನ್ ಮಾಡಿದ್ದಾರೆ ಕೇಳಿ, ನಾಲ್ಕು ವರ್ಷ ಸುಲಿಬೆಲೆ ಅನಾಹುತ ಮಾಡಿದ್ದಾರೆ‌. ಸುಲಿಬೆಲೆ ಮಾಡಿದ ಅನಾಹುತಗಳನ್ನ ನಾವು ಸರಿಪಡೆಸುತ್ತಿದ್ದೇವೆ ಎಂದರು. ಪಠ್ಯಪುಸ್ತಕ, ಹಿಜಾಬ್, ಹಲಾಲ್, …

Read More »

ಸಮಾಜಕ್ಕೆ ಕೈಗನ್ನಡಿಯಾಗಿರುವ ದಲಿತರು ಬಾಬಾಸಾಹೇಬರ ಅಭಿಯಾನವನ್ನು ಮುಂದುವರಿಸಬೇಕು:ರಾಜ ರತ್ನ ಅಂಬೇಡ್ಕರ್

ಶತಮಾನಗಳಿಂದ ಶೋಷಣೆಯಿಂದ ನರಳುತ್ತಿರುವ ದಲಿತ ಮತ್ತು ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಲು ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಿರಂತರ ಹೋರಾಟ ಮಾಡಿದರು. ಇಂದು ಸಮಾಜಕ್ಕೆ ಕೈಗನ್ನಡಿಯಾಗಿರುವ ದಲಿತರು ಈ ಅಭಿಯಾನವನ್ನು ಮುಂದುವರಿಸಬೇಕು ಎಂದು ಬಾಬಾಸಾಹೇಬರ ಮರಿಮೊಮ್ಮಗ ರಾಜ ರತ್ನ ಅಂಬೇಡ್ಕರ್ ಅವರು ಮನವಿ ಮಾಡಿದರು. ಇಂದು ಬೆಳಗಾವಿಯ ಸದಾಶಿವನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಬೌದ್ಧ ಸಮಾಜದ ವತಿಯಿಂದ “ಆರ್ಥಿಕ ಉನ್ನತಿಯತ್ತ ಒಂದು ಹೆಜ್ಜೆ” ಯುವ ಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಲಾಯಿತು. ರಾಜರತ್ನ ಅಂಬೇಡ್ಕರ್ …

Read More »

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರವಾಗಿತ್ತು

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರವಾಗಿತ್ತು. ಹೀಗಾಗಿ ಅಫ್ಘಾನಿಸ್ತಾನದಿಂದ ಮರುಳಶಂಕರ ದೇವರು, ಕಾಶ್ಮೀರದಿಂದ ಮೋಳಿಗೆಯ ಮಾರಯ್ಯ ಮೊದಲಾದವರು ಕನ್ನಡ ನಾಡಿನ ಕಲ್ಯಾಣ ನಗರಕ್ಕೆ ಬಂದರು. ಹೀಗೆ ಬಂದ ಮರುಳಶಂಕರ ದೇವರ ಕುರಿತು ಡಾ.ದಯಾನಂದ ನೂಲಿ ಅವರು ಬೃಹತ್ ಕಾದಂಬರಿ ಬರೆದಿರುವುದು ಗಮನಾರ್ಹ ಎಂದು ಡಾ. ಗುರುಪಾದ ಮರಿಗುದ್ದಿ ಅಭಿಪ್ರಾಯ ಪಟ್ಟರು. ಬೆಳಗಾವಿ ನಾಗನೂರು ಮಠದ ಎಸ್.ಜಿ.ಬಿ.ಐ.ಟಿ ಸಭಾಂಗಣದಲ್ಲಿ ದಿನಾಂಕ 4ರಂದು …

Read More »