Breaking News

Monthly Archives: ಜೂನ್ 2023

ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ವಿಜಯಪುರ: ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ …

Read More »

ದಾವಣೆಗೆರೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ದಾವಣಗೆರೆ : ಕಾಲೇಜು ಕಾಂಪೌಂಡ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಅನುಮಾನಾಸ್ಪದ ಸಾವು ಎಂದು ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜೂನ್​​ 18ರ ಭಾನುವಾರ ರಾತ್ರಿ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಬಳಿಯ ಮಾನ್ಯತಾ ಪಬ್ಲಿಕ್​ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಕಾಂಪೌಂಡ್​ ಹತ್ತುವಾಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ …

Read More »

ಹಿಂದಿನ ಸರ್ಕಾರದ ಎಲ್ಲಾ ಅವ್ಯವಹಾರ ತನಿಖೆ ಮಾಡಿಸುತ್ತೇವೆ.: ಸಿದ್ದರಾಮಯ್ಯ

ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ …

Read More »

ಯಡಿಯೂರಪ್ಪರನ್ನು ಕೆಳಗಿಳಿಸಬಾರದಿತ್ತು, ಶೆಟ್ಟರ್, ಈಶ್ವರಪ್ಪಗೆ ಟಿಕೆಟ್ ಕೋಡ್ಬೆಕಿತ್ತು: ಎಂ ಪಿ ರೇಣುಕಚಾರ್ಯ

ದಾವಣಗೆರೆ: ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದೇವೆ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸ ಬಾರದಿತ್ತು. ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಬೇಕಿತ್ತು. ಈ ತಪ್ಪು ನಿರ್ಧಾರದಿಂದ ನಮಗೆ ಸೋಲಾಗಿದೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಚುನಾವಣೆಯಲ್ಲಿ ಪಕ್ಷ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ‌ ಸರ್ಕಾರಕ್ಕೆ …

Read More »

ರಾಜ್ಯದ ಆಹಾರ ಧಾನ್ಯಗಳ ಬೆಲೆ ಇಳಿಕೆ ಮಾಡಬೇಕಾದವರು ಕೇಂದ್ರ ಸರ್ಕಾರ ಅಲ್ವಾ ಎಂದ ಸಿಎಂ‌ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಆಹಾರ ಧಾನ್ಯಗಳ ಬೆಲೆ ಇಳಿಕೆ ಮಾಡಬೇಕಾದವರು ಕೇಂದ್ರ ಸರ್ಕಾರ ಅಲ್ವಾ ಎಂದು ಸಿಎಂ‌ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ವಿಧಾನಸೌಧ ಪೂರ್ವ ಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆಹಾರ ಧಾನ್ಯ, ತರಕಾರಿ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬೆಲೆ ಇಳಿಕೆ ಮಾಡಬೇಕಾದವರು ಯಾರು?.   ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ವಿಧಾನಸೌಧ ಪೂರ್ವ ಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ …

Read More »

“ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭವಿದ್ದಾಗ ಮಾತ್ರ ಸಿಜೇರಿಯನ್ ಮಾಡಬೇಕು. :ದಿನೇಶ್ ಗುಂಡೂರಾವ್,

ಮೈಸೂರಿನ ಕೆ.ಆರ್.ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಕೆ. ಹರೀಶ್ ಗೌಡ ಹಾಗು ಅನಿಲ್ ಚಿಕ್ಕಮಾದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರು : ನಗರದ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ಕೊಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೆರಿಗೆ ವಾರ್ಡ್‌ನಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಿದರು. “ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭವಿದ್ದಾಗ ಮಾತ್ರ ಸಿಜೇರಿಯನ್ ಮಾಡಬೇಕು. ರೋಗಿಗಳಿಗೆ ಹೊರಗೆ ಔಷಧಿ ತೆಗೆದುಕೊಂಡು ಬನ್ನಿ ಎಂದು …

Read More »

ಎಲ್ಲ ನಾಯಕರು ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಟೀಲ್ ಎಚ್ಚರಿಕೆ

ಮಂಗಳೂರು : ಯಾರೂ ಯಾವುದೇ ಹೇಳಿಕೆಗಳ‌ನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಎಲ್ಲರೂ ಕೆಲಸ ಮಾಡಬೇಕು. ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ …

Read More »

ಮುಂಗಾರು ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ.

ಕಲಬುರಗಿ : ಮಳೆಗಾಲ ಆರಂಭವಾಗಿ ತಿಂಗಳಾಗುತ್ತಿದ್ದರು ಸಹ ತೊಗರಿನಾಡು ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಮಳೆ ಬಾರದೆ ರೈತರು ಕೃಷಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಗಿದ್ದಾರೆ. ಆಕಾಶದತ್ತ ಮುಖ ಮಾಡಿರೋ ರೈತಾಪಿ ವರ್ಗ ಸಾಂಪ್ರದಾಯಿಕ ಆಚರಣೆಗೆ ಮುಂದಾಗಿದ್ದು, ಮಳೆಗಾಗಿ ಜಿಲ್ಲೆಯಲ್ಲಿ ರೈತರು ಕಪ್ಪೆಗಳ ಮದುವೆಯನ್ನು ಶಾಸ್ತ್ರೋಕ್ತವಾಗಿ ಮಾಡಿ ದೇವರಲ್ಲಿ ಮೊರೆ ಇಟ್ಟಿದ್ದಾರೆ‌. ಕಲಬುರಗಿ ತಾಲ್ಲೂಕಿನ ಜಂಬಗಾ ಬಿ ಗ್ರಾಮಸ್ಥರು ಮಳೆಗಾಗಿ ಕಪ್ಪೆಗಳ ಮದುವೆ ನೆರವೇರಿಸಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ‌. ಗಂಡು ಮತ್ತು …

Read More »

ವಂದೇ ಭಾರತ್ ರೈಲಿನಲ್ಲೂ ಬೆಳಗಾವಿಗೆ ಅನ್ಯಾಯ

ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.   3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …

Read More »

ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.   ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ ವಿಕಾಸ್ ಕುಮಾರ್ ವಿಕಾಶ್- …

Read More »