Breaking News

Daily Archives: ಜುಲೈ 1, 2023

ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ನಾವು ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನೂ ಆರಂಭಿಸುತ್ತಿದ್ದೇವೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್‌ ನಮ್ಮ ಯೋಜನೆ ಜಾರಿಯಾಗಲ್ಲ ಎಂಬ ಸಂಭ್ರಮದಲ್ಲಿದ್ದವು. ಅವರಿಗೆ ನಿರಾಸೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಆರಂಭವಾಗಲಿದೆ. ಗೃಹಜ್ಯೋತಿ ಯೋಜನೆಯಡಿ ಈ ತಿಂಗಳಿನಿಂದ ನಮ್ಮ ಸರ್ಕಾರ 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ …

Read More »

ಬಿಪಿಎಲ್ ಕಾರ್ಡುದಾರರಿಗೆ ಈ ತಿಂಗಳು ಹಣ ಸಿಗೋದಿಲ್ಲ: ಸಚಿವ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಪ್ರತಿ ಯೂನಿಟ್​ಗೆ 170 ರೂಪಾಯಿ ಸರ್ಕಾರ ವರ್ಗಾವಣೆ ಮಾಡುತ್ತದೆ ಎಂದು ಘೋಷಣೆ ಮಾಡಲಾಗಿದೆ. ಆದರೆ, ಈ ತಿಂಗಳು ಯಾರಿಗೂ ಹಣ ಸಿಗೋದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ …

Read More »

ಅವಧಿ ಮುಗಿದ ಆಹಾರ ಉತ್ಪನ್ನಗಳ ಮರು ಪ್ಯಾಕಿಂಗ್.. ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ

ಬೆಂಗಳೂರು: ಬಳಕೆಯ ಅವಧಿ ಮುಗಿದ ಆಹಾರ ಉತ್ಪನ್ನಗಳನ್ನು ಮರು ಪ್ಯಾಕಿಂಗ್ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿ ಆಗಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾಟನ್ ಪೇಟೆಯ ಖಾಸಗಿ ಟ್ರೇಡಿಂಗ್ ಕಂಪನಿಯ ಗೋದಾಮಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಅವಧಿ ಮುಗಿದ ಆಹಾರಗಳುಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಸೇರಿದ, ಬಳಕೆಯ ಅವಧಿ ಮೀರಿದ ಬಿಸ್ಕೆಟ್ಸ್, ಚಾಕೊಲೇಟ್, ಚಾಕೊಲೇಟ್ ಪೌಡರ್, ಅಡುಗೆ ಎಣ್ಣೆ, …

Read More »

ಬಜೆಟ್ ಅಧಿವೇಶನ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ

ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ …

Read More »

ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ,ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ

ರಾಯಚೂರು: ಜಿಲ್ಲೆಯ ಅಪ್ಪನದೊಡ್ಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಮಕ್ಕಳಿಗೆ ನೀಡಲು ತಯಾರಾದ ಬಿಸಿಯೂಟದ ಉಪ್ಪಿಟ್ಟಿಗೆ ಹಲ್ಲಿಯೊಂದು ಬಿದ್ದಿದ್ದು, ಮಕ್ಕಳು ಈ ಉಪ್ಪಿಟ್ಟನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ. ಈ ಘಟನೆಗೆ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಇನ್ನು ಘಟನೆ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿದ್ದಾರೆ. ಅಸ್ವಸ್ಥಗೊಂಡ ಮಕ್ಕಳಿಗೆ ಶಾಲೆ ಬಳಿಯೇ ಆರೋಗ್ಯ ತಪಾಸಣೆ ಮಾಡಿಸಿ 30 ಮಕ್ಕಳನ್ನು ಯಪಲದಿನ್ನಿ …

Read More »

ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು

ಹುಬ್ಬಳ್ಳಿ : ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಅದರಂತೆ ಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ ಎಂದು ಹೇಳಿದರು. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ!

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ! ಗೋಕಾಕ : ಜರ್ಮನಿ ದೇಶದ ಜರ್ಮನ್ ಸ್ಪೋರ್ಟ್ ಕಲೋನ್ ವತಿಯಿಂದ ಆಯೋಜಿಸಿರುವ 8 ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಮಂಜುಳಾ ಗೊರಗುದ್ದಿ ಆಯ್ಕೆಯಾಗಿದ್ದು ಅವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿದ್ದಾರೆ. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯುವ ನಾಯಕ ರಾಹುಲ್ …

Read More »

ಗೃಹಜ್ಯೋತಿ ಯೋಜನೆ ಆರಂಭ ಘೋಷಿಸಿದ ಸಿಎಂ: ಮಹಾರಾಷ್ಟ್ರ ದುರಂತಕ್ಕೆ ತೀವ್ರ ಆತಂಕ

ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ವಿದ್ಯುತ್​ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮದದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್​ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ವಿರೋಧ …

Read More »

ಕೈಕೊಟ್ಟ ಮಳೆ.. ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಬದುಕು

ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ. ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಸಾಲದ ಶೂಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸ್ಥಿತಿಗೆ ಬಂದಿದ್ದಾನೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ …

Read More »