Breaking News

Daily Archives: ಜುಲೈ 5, 2023

ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು

ಮೈಸೂರು: ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ …

Read More »

ಸರ್ಕಾರ ನೀಡಿದ ಗ್ಯಾರಂಟಿಗಳನ್ನ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ

ದಾವಣಗೆರೆ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನು ಬಿಟ್ರೇ ಯಾವುದೇ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು‌ ಕಾಂಗ್ರೆಸ್ ಹೇಳುತ್ತಿದೆ. …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ

ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.

Read More »

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ.. ಕರ್ನಾಟಕದ್ದು ಯಾವಾಗ?

ನವದೆಹಲಿ: ಬಿಜೆಪಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.ಸಾಂಸ್ಥಿಕ ಪುನಶ್ಚೇತನಕ್ಕಾಗಿನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಪಕ್ಷದ ರಾಷ್ಟ್ರೀಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಬದಲಾವಣೆ ಊಹಾಪೋಹಗಳಿಗೆ ಮತ್ತಷ್ಟು ಪೃಷ್ಠಿ ನೀಡಿದೆ.     ಹಾಲಿ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ ಅವರನ್ನು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ, ಹಿಂದುಳಿದ …

Read More »

ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.     …

Read More »

ಕುಮಾರಸ್ವಾಮಿ ಹೇಳಿಕೆ ಸ್ವಾಗತಿಸಿದ್ದರ ಹಿಂದೆ ಲೋಕಸಭೆ ಹೊಂದಾಣಿಕೆಯಿಲ್ಲ

ಬೆಂಗಳೂರು: ಗ್ಯಾರಂಟಿ ವಿಚಾರದಲ್ಲಿ ಜೆಡಿಎಸ್ ನಿಲುವನ್ನು ಸ್ವಾಗತಿಸಿದ ಮಾತ್ರಕ್ಕೆ ಅದನ್ನು ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಕೋನದಿಂದ ನೋಡಬಾರದು, ಇದು ಮೈತ್ರಿಯ ಸುಳಿವಲ್ಲ, ನಾವು ಜನರ ಪರ ನಿಂತಿದ್ದೇವೆ, ಜೆಡಿಎಸ್ ಕೂಡ ಜನರ ಪರ ನಿಂತಿದೆ ಅಷ್ಟೆ ಇದು ಹೊಂದಾಣಿಕೆಯ ನಿಲುವಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದ್ದಾರೆ.   ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿಲ್ಲ …

Read More »

212 ವಿಧಾನಸಭೆ ಕ್ಷೇತ್ರಗಳು, 61 ಲೋಕಸಭೆ ಕ್ಷೇತ್ರಗಳ ಖರ್ಗೆ ಕಣ್ಣು.. ನಾಳೆ ಹೊಸ ಅಭಿಯಾನಕ್ಕೆ ಚಾಲನೆ

ನವದೆಹಲಿ: ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸಾಂಪ್ರದಾಯಿಕ ದಲಿತ ಮತಬ್ಯಾಂಕ್‌ ತನ್ನತ್ತ ಸೆಳೆಯಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ 212 ಆಯ್ದ ವಿಧಾನಸಭೆ ಕ್ಷೇತ್ರಗಳು ಮತ್ತು 61 ಸಂಸದೀಯ ಕ್ಷೇತ್ರಗಳಲ್ಲಿ ಈ ಸಮುದಾಯವನ್ನು ಸಜ್ಜುಗೊಳಿಸಲು ಜುಲೈ 5ರಂದು ಅಭಿಯಾನ ಆರಂಭಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ತನ್ನ ಪ್ರಜಾಪ್ರಭುತ್ವದ ರುಜುವಾತುಗಳು ಹಾಗೂ ಅಂತರ್ಗತ ರಾಜಕೀಯದ ಸೂಚಕವಾಗಿ ದಲಿತ ನಾಯಕ ಖರ್ಗೆ ಅವರನ್ನು ಪಕ್ಷದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಿತ್ತು. ಅಧಿಕಾರ ವಹಿಸಿಕೊಂಡ …

Read More »

ರಾಜ್ಯ ಸರ್ಕಾರಕ್ಕೆ ಪಂಚ ಗ್ಯಾರಂಟಿಗಳ ಹೊರೆ: 2023-24ನೇ ಸಾಲಿನ ಸಾಲದ ಸ್ಥಿತಿಗತಿ ಹೀಗಿದೆ..

ಬೆಂಗಳೂರು: ಪಂಚ ಗ್ಯಾರಂಟಿಗಳ ಬೃಹತ್ ಹೊರೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಜೆಟ್​ಗೆ (2023-24) ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ನೇತೃತ್ವದ ನೂತನ ಸರ್ಕಾರದ ಹೊಸ ಬಜೆಟ್ ಮಂಡನೆಯ ತಯಾರಿಯಲ್ಲಿ ಅವರಿದ್ದಾರೆ.‌ ಇದು ಮುಂದಿನ 9 ತಿಂಗಳ ಅವಧಿಗೆ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ.‌ ನಿರ್ಗಮಿತ ಬಿಜೆಪಿ ಸರ್ಕಾರ 2023-24ನೇ ಸಾಲಿನ‌ ಬಜೆಟ್ ಮಂಡಿಸಿತ್ತು. ಬೊಮ್ಮಾಯಿ ಮಂಡಿಸಿದ್ದ ಬಜೆಟ್​ನಲ್ಲಿ 2023- 24ರಲ್ಲಿ ಅಂದಾಜು 77,750 ಕೋಟಿ ರೂ ಸಾಲ ಮಾಡುವುದಾಗಿ ತಿಳಿಸಿದ್ದರು.‌ ಇದೀಗ ಹೊಸ …

Read More »

ಭಾರತ ಕ್ರಿಕೆಟ್​ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್​ ನೇಮಕ

ನವದೆಹಲಿ: ಭಾರತ ಹಿರಿಯ ಪುರುಷರ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವೇಗಿ ಅಜಿತ್​ ಅಗರ್ಕರ್​ ನೇಮಕವಾಗಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಶಿಫಾರಸಿನ ಮೇರೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ ಈ ವಿಚಾರವನ್ನು ಪ್ರಕಟಿಸಿದ್ದಾರೆ. ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಪುರುಷರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರ ಸಿಎಸಿ …

Read More »

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಶಾಲಾ, ಕಾಲೇಜುಗಳಿಗೆ ಇಂದು ರಜೆ

ಕಾರವಾರ: ರಾಜ್ಯದಲ್ಲಿ ಕೆಲವೆಡೆ ಮುಂಗಾರು ಕ್ಷೀಣವಾಗಿದ್ದರೆ, ಕರಾವಳಿ ಜಿಲ್ಲೆಗಳು ಹಾಗೂ ಘಟ್ಟದ ಮೇಲ್ಭಾಗದ ಕೆಲವು ತಾಲೂಕುಗಳಲ್ಲಿ ವರ್ಷಧಾರೆ ಬಿರುಸು ಪಡೆದಿದೆ. ಮಂಗಳವಾರ ಸುರಿದ ಭಾರಿ ಮಳೆಗೆ ಭಟ್ಕಳ, ಕಾರವಾರದ ಬಳಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದೆ. ಕಾರವಾರದಲ್ಲಿ ಮಂಗಳವಾರ ಸಂಜೆ ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಜಡಿ ಮಳೆಗೆ ನಗರದ ಗ್ರೀನ್ ಸ್ಟ್ರೀಟ್ …

Read More »