ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ, ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.
Read More »Daily Archives: ಜುಲೈ 14, 2023
ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನನ ಬರ್ಬರ ಹತ್ಯೆ
ಬೆಳಗಾವಿ ಸಮೀಪದ ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಇಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕೆಲ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ಜಗಳದಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಪಿರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ (25) ಕೊಲೆಯಾದವರು. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಂಜಾ ಅಥವಾ ಮದ್ಯದ ಅಮಲಿನಿಂದ ಗೊಂದಲ ಉಂಟಾಗಿರಬಹುದು …
Read More »ಬಾಯಿ ಚಪ್ಪರಿಸಿ ಹಾವು ತಿಂದ ಜಿಂಕೆ!, ಹೌಹಾರುವ ವಿಡಿಯೋ ಇಲ್ಲಿದೆ ನೋಡಿ
ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ. ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ …
Read More »‘ಅನ್ನಭಾಗ್ಯ’ ಯೋಜನೆ: ಇಂದು ಈ ಜಿಲ್ಲೆಯ ‘ಫಲಾನುಭವಿ’ಗಳ ಖಾತೆಗೆ ಹಣ ಜಮಾ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಬಳಿಕ, ಇಂದು ಇತರೆ ಜಿಲ್ಲೆಗಳ ಪಡಿತರ ಚೀಟಿದಾರರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. …
Read More »ಬಿಸಿಯೂಟ ಅಡುಗೆ ಸಿಬ್ಬಂದಿ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ …
Read More »ಬೆಂಗಳೂರಲ್ಲಿ ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ: ಮೈಮೇಲಿದ್ದ ಚಿನ್ನ, ಫೋನ್ ಪೇಯಿಂದ ಹಣ ಎಗರಿಸಿ ಎಸ್ಕೇಪ್
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿದ ದರೋಡೆಕೋರರು, ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಬಳಿಕ ಹಣ ಮತ್ತು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ವಿದ್ಯಾರಣ್ಯಪುರದ ರಾಮಚಂದ್ರಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು. ಈ ಪೈಕಿ ಮೂವರು ಖಾಸಗಿ ಕಂಪನಿಯಲ್ಲಿ …
Read More »ಮಹಾರಾಷ್ಟ್ರ, ಆಂಧ್ರದಂತೆ ಸಿನಿಮಾ ಟಿಕೆಟ್ ಬೆಲೆ ಕಡಿಮೆ ಮಾಡಿ: ಹಿರಿಯ ನಟ ಅಶೋಕ್
ಸಿನಿಮಾ ಟಿಕೆಟ್ ಬಗ್ಗೆ ಹಿರಿಯ ನಟ ಅಶೋಕ್ ಮಾತನಾಡಿರುವುದು..ಕನ್ನಡ ಸಿನಿಮಾಗಳು ವಿಶ್ವದಾದ್ಯಂತ ಸದ್ದು ಮಾಡುತ್ತಿವೆ. ಅದ್ಧೂರಿ ಮೇಕಿಂಗ್ ಜೊತೆಗೆ ಬೆಸ್ಟ್ ಕಂಟೆಂಟ್ ಆಧಾರಿತ ಚಿತ್ರಗಳು ಸಿನಿಪ್ರಿಯರನ್ನು ಆಕರ್ಷಿಸುತ್ತಿವೆ. ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಭರಾಟೆ ಜೋರಾಗಿದೆ. ಆದರೆ ಚಿತ್ರಮಂದಿರಗಳು ಮಾತ್ರ ಮಂಕಾಗಿವೆ. ಪ್ರೇಕ್ಷಕರು ಅಷ್ಟಾಗಿ ಚಿತ್ರಮಂದಿರಗಳತ್ತ ಬರುತ್ತಿಲ್ಲ ಅನ್ನೋದು ಮಾಲೀಕರ ಅಳಲು. ಇದರ ಎಫೆಕ್ಟ್ ನಿರ್ಮಾಪಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ತಟ್ಟುತ್ತಿದೆ. ಓಟಿಟಿಯಲ್ಲಿ ಶೀಘ್ರ ಬಿಡುಗಡೆ: ಅಷ್ಟಕ್ಕೂ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಏಕೆ ಬರುತ್ತಿಲ್ಲ …
Read More »ಚಂದ್ರಯಾನ – 3 ಮಿಷನ್ನಲ್ಲಿ ಬೆಳಗಾವಿ ಯುವ ವಿಜ್ಞಾನಿ
ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …
Read More »ನಾಡ ಅಧಿದೇವತೆಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ
ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಸಂಭ್ರಮ. ನಾಡ ಅಧಿದೇವತೆಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಇದರ ಜೊತೆಗೆ ದೇವಾಲಯದ ಒಳಭಾಗದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರು ಬೆಳಗ್ಗೆಯಿಂದಲೇ ತಾಯಿಯ ದರ್ಶನ ಪಡೆಯುತ್ತಿದ್ದು, ರಾತ್ರಿಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ. ಗರ್ಭಗುಡಿಯ ಒಳಗಿರುವ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಉತ್ಸವ …
Read More »ಜೈನ ಮುನಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.
ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ಇಬ್ಬರೂ ಆರೋಪಿಗಳನ್ನು ಪೊಲೀಸರು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಜೈನಮುನಿಯ ಡೈರಿ ಸುಟ್ಟು ಹಾಕಿದ್ದರು. ಸದ್ಯ ಚಿಕ್ಕೋಡಿ ಪೊಲೀಸರು ಡೈರಿಯಲ್ಲಿದ್ದ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೈನಮುನಿ ಹತ್ಯೆ ಕೇಸ್‌ನಲ್ಲಿ ಬಂಧಿಸಿದ್ದ ಇಬ್ಬರು ಆರೋಪಿಗಳ ವಿಚಾರಣೆಯೂ ಚುರುಕು ಪಡೆದುಕೊಂಡಿದೆ. ಜೈನ ಮುನಿಯ ಹತ್ಯೆ ಬಳಿಕ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಡೈರಿಯನ್ನು ಸಹ ಅಲ್ಲಿಂದ ಆರೋಪಿಗಳು ಹೊತ್ಯೊಯ್ದಿದ್ದರು. ಅದಾದ …
Read More »