ದಾವಣಗೆರೆ: ಆಧುನಿಕ ಹಾಗೂ ಪಾಶ್ಚಿಮಾತ್ಯ ಆಟಗಳ ಮಧ್ಯದಲ್ಲೂ ಭಾರತದ ದೇಸಿಯ ಕ್ರೀಡೆಗಳು ತಮ್ಮ ಜನಪ್ರಿಯತೆಯನ್ನು ಇಂದಿಗೂ ಉಳಿಸಿಕೊಂಡು ಬಂದಿವೆ. ಹೀಗಾಗಿ ಸದಾ ಕಾಲೇಜು, ಪರೀಕ್ಷೆ, ಪ್ರಾಜೆಕ್ಟ್ ವರ್ಕ್ ಎಂದು ಬ್ಯೂಸಿಯಾಗಿರುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳು, ಮಳೆಗಾಲದ ಮೋಡ ಮುಸುಕಿದ ವಾತಾವರಣದಲ್ಲಿ ಕೆಸರು ಗದ್ದೆ ಓಟ, ಹಗ್ಗ- ಜಗ್ಗಾಟ ಸೇರಿದಂತೆ ಹಲವು ದೇಸಿ ಕ್ರೀಡೆಗಳನ್ನು ಆಡುವ ಮೂಲಕ ಸಖತ್ ಎಂಜಾಯ್ ಮಾಡಿದರು. ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಸಂಘದಿಂದ ಜೆಜೆಎಂ ಕಾಲೇಜು ವಿದ್ಯಾರ್ಥಿಗಳು …
Read More »Daily Archives: ಜುಲೈ 15, 2023
ಬೆಂಗಳೂರು – ಮೈಸೂರು ಹೈವೇಯ ದುಪ್ಪಟ್ಟು ಟೋಲ್ ವಿರೋಧಿಸಿ ಕರವೇ ಸ್ವಾಭಿಮಾನಿ ಸೇನೆ ಪ್ರತಿಭಟನೆ
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ದುಪ್ಪಟ್ಟು ಟೋಲ್ ವಸೂಲಿ ವಿರೋಧಿಸಿ ಹಾಗೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಪ್ರತಿಭಟನೆ ನಡೆಸಿತು. ರಾಜ್ಯಾಧ್ಯಕ್ಷರಾದ ನಿಂಗರಾಜ್ ಗೌಡ ನೇತೃತ್ವದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ನೂರಾರು ಜನ ಕಾರ್ಯಕರ್ತರು ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದಿಂದ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣವಾಗಿದೆ. ಆದರೂ ಅದನ್ನ ಬಳಸಲು ದುಪ್ಪಟ್ಟು …
Read More »ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ
ಬೆಂಗಳೂರು: ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ ಎದುರಾಗಿದೆ. ತರಕಾರಿ ಹಾಗೂ ನಿತ್ಯ ಬಳಸುವ ವಸ್ತುಗಳು ಆಗಸಕ್ಕೇರಿದ ಹಿನ್ನೆಲೆ ತರಕಾರಿ ಖರೀದಿಗೆ ಹಿಂದೆ ಮುಂದೆ ಯೋಚಿಸುವ ಪರಿಸ್ಥಿತಿ ಬಂದಿದೆ. ದುಬಾರಿ ಬೆಲೆ ಕಾರಣ ಶಾಲಾ ಬಿಸಿಯೂಟದಲ್ಲಿ ಪೌಷ್ಠಿಕಾಂಶದ ಕೊರತೆ ಎದುರಾಗಿದೆ. ಅಂಗನವಾಡಿ ಕೇಂದ್ರಗಳು ನೀಡುತ್ತಿರುವ ಊಟದಲ್ಲಿ ತರಕಾರಿ ತುಂಡುಗಳೇ ನಾಪತ್ತೆ ಆಗುತ್ತಿದೆ. ಅಂಗನವಾಡಿ ಕೇಂದ್ರಗಳು ಬರಿ ಅನ್ನ ಮತ್ತು ತಿಳಿಸಾರು ಮೊರೆ ಹೋಗುತ್ತಿದ್ದಾರೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಟಿಕ …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »ಮುಂಗಾರು ಮಳೆ ವಿಳಂಬವಾಗಿದ್ದರಿಂದ ಎಲೆಕೋಸು ಇಳುವರಿ ಕುಂಠಿತವಾಗಿದ್ದು, ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರ ನಷ್ಟ
ಹಾವೇರಿ: ಜಿಲ್ಲೆಯ ರೈತರು ಅತ್ಯುತ್ತಮವಾದ ಎಲೆಕೋಸು ಬೆಳೆಯುತ್ತಾರೆ. ಇಲ್ಲಿ ಬೆಳೆಯುವ ಎಲೆಕೋಸಿಗೆ ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚು ಬೇಡಿಕೆ ಇದ್ದು, ಜಿಲ್ಲೆಯಿಂದ ದೊಡ್ಡ ಪ್ರಮಾಣದಲ್ಲಿ ಎಲೆಕೋಸು ರಫ್ತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನೂರಾರು ರೈತರು ಕೆಲ ವರ್ಷಗಳಿಂದ ಎಲೆಕೋಸು ಬೆಳೆಯುತ್ತಿದ್ದಾರೆ. ಆದರೆ, ಪ್ರತಿವರ್ಷ ಉತ್ತಮ ಆದಾಯಗಳಿಸುತ್ತಿದ್ದ ಎಲೆಕೋಸು ಬೆಳೆಗಾರರು ಈ ವರ್ಷ ನಷ್ಟದ ಹಾದಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮಳೆ ವಿಳಂಬದಿಂದ ಎಲೆಕೋಸು ಫಸಲು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲಾ. …
Read More »ಜೈನಮುನಿ ಕಾಮಕುಮಾರ ನಂದಿ ಮಹಾರಾಜರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ
ಚಿಕ್ಕೋಡಿ: ಹಿರೇಕೊಡಿ ನಂದಿ ಪರ್ವತ ಮಹಾರಾಜರ ಹತ್ಯೆಯಿಂದ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ಆಗಿದೆ. ಒಕ್ಕೊರಲಾಗಿ ಖಂಡಿಸಿ ನ್ಯಾಯ ಕೊಡಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕು. ನೊಂದ ಮನಸ್ಸುಗಳಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮಗಳ …
Read More »ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಕಣಕ್ಕಿಳಿಸುವ ಬಗ್ಗೆ ತೀರ್ಮಾನಿಸಿಲ್ಲ,ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ.
ಬೆಳಗಾವಿ: ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಮೊದಲು ಕಾರ್ಯಕರ್ತರಿಗೆ ಆದ್ಯತೆ ಕೊಡುತ್ತೇವೆ. ಅವಶ್ಯಕತೆ ಬಿದ್ದರಷ್ಟೇ ಪುತ್ರಿ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ. ಕೊನೇ ಘಳಿಗೆಯಲ್ಲಿ ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬ್ಲಾಕ್ ಅಧ್ಯಕ್ಷರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ …
Read More »ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ …
Read More »ಜು.18 ರಂದು ತಾಜ್ ವೆಸ್ಟೆಂಡ್ನಲ್ಲಿ ವಿಪಕ್ಷಗಳ ಸಭೆ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ವಿಪಕ್ಷಗಳು ಪಾಟ್ನಾ ಬಳಿಕ ತಮ್ಮ ಎರಡನೇ ಸಭೆಯನ್ನು ಇಲ್ಲಿ ಜುಲೈ 18 ರಂದು ನಡೆಸಲಿದ್ದು, ಅದರ ಸಿದ್ಧತೆ ಪರಿಶೀಲನೆಗೆ ದೆಹಲಿ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಸಿದ್ಧತೆಗಳ ವೀಕ್ಷಣೆ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ನಲ್ಲಿ ಸಭೆ ನಡೆಯಲಿದ್ದು, ಒಟ್ಟು 24 ಪಕ್ಷಗಳ ಪ್ರಮುಖ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »