Breaking News

Daily Archives: ಜುಲೈ 15, 2023

ಚಂದ್ರಯಾನ 3 ತಂಡದಲ್ಲಿದ್ದ ಚಿಕ್ಕಮಗಳೂರಿನ ಡಾ.ನಂದಿನಿ

ಚಿಕ್ಕಮಗಳೂರು: ಇಡೀ ಪ್ರಪಂಚವೇ ಕಾತರದಿಂದ ಕಾಯುತ್ತಿದ್ದ, ಭಾರತದ ಕನಸಿನ ಯೋಜನೆ ಚಂದ್ರಯಾನ 3 ನಿನ್ನೆಯಷ್ಟೆ ಇಸ್ರೋ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಗೆ ಉಡಾವಣೆಗೊಂಡಿದೆ. ಚಂದ್ರಯಾನ 3 ಯೋಜನೆ ಹಾಗೂ ಇದರ ಯಶಸ್ವಿ ಉಡಾವಣೆಯ ಹಿಂದೆ ಹಲವಾರು ವಿಜ್ಞಾನಿಗಳ ಪರಿಶ್ರಮವಿದೆ. ದೇಶದ ಬೇರೆ ಬೇರೆ ಜಿಲ್ಲೆಗಳ ವಿಜ್ಞಾನಿಗಳು ಈ ಯೋಜನೆಗಾಗಿ ಹಗಲು ಇರುಳು ಕೆಲಸ ಮಾಡಿದ್ದಾರೆ. ಇದೀಗ ಆಂಧ್ರಪ್ರದೇಶದ ಶ್ರೀ ಹರಿಕೋಟಾ ಸತೀಶ್‌ ಧವನ್‌ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ …

Read More »

”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ

ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …

Read More »

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …

Read More »

ಕಪರಟ್ಟಿಯ ಬಸವರಾಜ ಹಿರೇಮಠ ಅವರನ್ನ ಪ್ರಶಂಶಿಸಿದ ಸರ್ವೊತ್ತಮ ಜಾರಕಿಹೊಳಿ

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »

ಲಂಚ ಪಡೆಯುತ್ತಿದ್ದ ಫುಡ್​ ಇನ್ಸ್​ಪೆಕ್ಟರ್​ನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು : ಆಹಾರೋತ್ಪನ್ನಗಳ ವ್ಯಾಪಾರ ಪರವಾನಗಿ ಪರಿಶೀಲನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆಹಾರ ನಿರೀಕ್ಷಕ (ಫುಡ್ ಇನ್ಸ್‌ಪೆಕ್ಟರ್)ನನ್ನು ವಶಕ್ಕೆ ಬಂಧಿಸಿದ್ದಾರೆ. ಒಂದು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟು 43 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದಾಗ ಫುಡ್ ಇನ್ಸ್‌ಪೆಕ್ಟರ್ ಮಹಾಂತೇಗೌಡ ಬಿ ಕಡಬಾಳುನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆಹಾರೋತ್ಪನ್ನಗಳ ಮಾರಾಟ ಪರವಾನಗಿ ನೀಡಲು ರಂಗಧಾಮಯ್ಯ ಎಂಬುವರಿಂದ ₹ 1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಾಂತೇಗೌಡ, ಮುಂಗಡವಾಗಿ 10 ಸಾವಿರ …

Read More »

ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್

ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್​ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್​ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …

Read More »

ಜು. 19 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.   ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »