ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ಆರ್. ಅಶೋಕ್, ಹಿರಿಯ ಶಾಸಕರಾದ ಸುರೇಶ್ ಕುಮಾರ್, ವಿ. ಸುನೀಲ್ ಕುಮಾರ್, ಮುನಿರತ್ನ, ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಕಿನಕಾಯಿ, ಧೀರಜ್ ಮುನಿರಾಜು, ಚನ್ನಬಸಪ್ಪ, ಜ್ಯೋತಿ ಗಣೇಶ್, ಸಿ. ಕೆ ರಾಮಮೂರ್ತಿ ಸೇರಿದಂತೆ ಹಲವರು ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದ …
Read More »Daily Archives: ಜುಲೈ 19, 2023
ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದು, ಜನ ನಮಗೆ ಅಧಿಕಾರ ನೀಡಿರುವ ಕಾರಣ ನಾವು ಇಲ್ಲಿ ಕುಳಿತ್ತಿದ್ದೇವೆ. ಬಿಜೆಪಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ನಡೆ ಖಂಡಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ಕಳೆದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾವು ಹಾಗೂ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಮಾಡಿದ್ದೆವು. ಆಗಲೂ …
Read More »ಮಾನಸಿಕ ಅಸ್ವಸ್ಥ ಮಗನನ್ನು ಕೊಲೆ ಮಾಡಿದ ತಂದೆ
ಬೆಳಗಾವಿ: ಕಳೆದ ಮೇ 31ರಂದು ಖಾನಾಪುರ ಪಟ್ಟಣದ ಹೊರವಲಯದ ಮಲಪ್ರಭಾ ನದಿ ತೀರದಲ್ಲಿ ಪತ್ತೆಯಾದ ಅಪರಿಚಿತ ಯುವಕನ ಅಸಹಜ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ತಂದೆಯೇ ತನ್ನ ಮಾನಸಿಕ ಅಸ್ವಸ್ಥ ಮಗನನ್ನು ಕೊಲೆ ಮಾಡಿರುವ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದ್ದು, ಆರೋಪಿ ತಂದೆಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಪರಿಚಿತ ಶವದ ಮರಣೋತ್ತರ ತನಿಖೆ ನಡೆಸಿದ್ದ ಪೊಲೀಸರಿಗೆ ಮೃತ ವ್ಯಕ್ತಿ ವಿಷ ಸೇವಿಸಿರುವುದು ಮತ್ತು ಆತನ ತಲೆಗೆ ಬಲವಾಗಿ …
Read More »ಕುಸಿದು ಬಿದ್ದ ಯತ್ನಾಳ್
ಬೆಂಗಳೂರು: ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು. ಅಸ್ವಸ್ಥಗೊಂಡ ಅವರನ್ನು ತಕ್ಷಣ ಸ್ಟ್ರೆಚರ್ನಲ್ಲಿ ಮಾರ್ಷಲ್ಗಳು ಹೊತ್ತು ಕೊಂಡು ಹೋಗಿ, ಆಸ್ಪತ್ರೆಗೆ ರವಾನಿಸಿದರು. ಸುದ್ದಿ ತಿಳಿದಾಕ್ಷಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ …
Read More »ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ಕಾಂಗ್ರೆಸ್ ವರ್ತಿಸಿದೆ : H.D.K.
ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಂತರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು. ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. …
Read More »ಜೈನಮುನಿ ಹತ್ಯೆ ಪ್ರಕರಣ.. ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ ಸಿಎಂ, ಜೈನಮುನಿ ಅವರು ಕಾಣೆಯಾಗಿರುವ ಬಗ್ಗೆ ಜುಲೈ 7 ರಂದು ದೂರು ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು. ನಾರಾಯಣಪ್ಪ ಬಸಪ್ಪ ಮಾಳಗಿ ಅವರ ಜಮೀನಿನ ಕೊಳವೆ ಬಾವಿಯಲ್ಲಿ …
Read More »ಡಿಎಂಕೆ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಮತ್ತು ಅವರ ಪುತ್ರ ಗೌತಮ ಚಿಕಾಮಣಿ ಒಡೆತನದ 7 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ
ಚೆನ್ನೈ (ತಮಿಳುನಾಡು): ಡಿಎಂಕೆ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಮತ್ತು ಅವರ ಪುತ್ರ ಗೌತಮ ಚಿಕಾಮಣಿ ಒಡೆತನದ 7 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಈ ಶೋಧದ ಕೊನೆಯಲ್ಲಿ ಜಾರಿ ಇಲಾಖೆಯ ಅಧಿಕಾರಿಗಳು ಸಚಿವ ಪೊನ್ಮುಡಿ ಅವರನ್ನು ಕಚೇರಿಗೆ ಕರೆದೊಯ್ದು ವಶಪಡಿಸಿಕೊಂಡ ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಎರಡನೇ ದಿನವೂ ಸಚಿವ ಪೊನ್ಮುಡಿ ಹಾಗೂ ಅವರ ಪುತ್ರ ಗೌತಮ ಚಿಕಮಣಿ ಅವರನ್ನು ಜಾರಿ ಅಧಿಕಾರಿಗಳು 3 ಗಂಟೆಗಳ ಕಾಲ …
Read More »ಸ್ಪೀಕರ್ ಪೀಠದತ್ತ ಪೇಪರ್ ಎಸೆದು ಬಿಜೆಪಿ ಶಾಸಕರ ತೀವ್ರ ಪ್ರತಿಭಟನೆ
ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಶಾಸಕರ ಪ್ರತಿಭಟನೆ ತೀವ್ರಗೊಂಡು ವಿಧೇಯಕಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠದತ್ತ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವಿಧಾನಸಭೆಯಲ್ಲಿ ಇಂದು ನಡೆಯಿತು. ರಾಜಕೀಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಇದರ ಮಧ್ಯೆ ಸ್ಪೀಕರ್ ಯು ಟಿ ಖಾದರ್, ಪ್ರತಿಪಕ್ಷದ ಶಾಸಕರಿಗೆ ಕಲಾಪದಲ್ಲಿ ಭಾಗವಹಿಸುವಂತೆ ಮನವಿ …
Read More »ನಿರ್ಮಾಪಕ ಕುಮಾರ್ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಕಿಚ್ಚನ ಅಭಿಮಾನಿಗಳು
ಚಾಮರಾಜನಗರ: ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ದೂರು ಕೊಟ್ಟು ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ. ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಮೂಲದ ನಿರ್ಮಾಪಕ ಎಂ ಎನ್ ಕುಮಾರ್ ಹಾಗೂ ಎಂ ಎನ್ ಸುರೇಶ್ ಎಂಬುವವರು ಸುಳ್ಳು ಸುದ್ದಿ ಹಾಗೂ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಸುದೀಪ್ ಅವರಿಗೆ ಮಾನಹಾನಿ ಮಾಡುತ್ತಿದ್ದಾರೆ. ಅಲ್ಲದೆ, …
Read More »ಬಿಜೆಪಿ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್ ಆದೇಶ
ಬೆಂಗಳೂರು: ಬಿಜೆಪಿ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದ್ದಾರೆ. ಇದಕ್ಕೂ ಮೊದಲು, ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಪ್ರತಿಪಕ್ಷ ಮುಂದಾಗಿತ್ತು. ಅತ್ತ ಬಿಜೆಪಿ ಸದಸ್ಯರ ಅಮಾನತಿಗೆ ಆಡಳಿತ ಪಕ್ಷ ನಿಲುವಳಿ ಸೂಚನೆ ಮಂಡಿಸಿತ್ತು. ಸದ್ಯ 10 ಮಂದಿ ಬಿಜೆಪಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಿಶ್ವಾಸ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದ್ದರು. ಭೋಜನ …
Read More »