Breaking News

Daily Archives: ಜುಲೈ 20, 2023

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಆಹಾರ ಪದಾರ್ಥ ವಿತರಣೆ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡುವ ಕಾರ್ಯವನ್ನು ಕೈಗೆತ್ತಿಕೊಂಡಿದೆ. ವಿಶ್ವದ ಅತಿದೊಡ್ಡ ರೈಲ್ವೆ ಫ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಜೊತೆಗೆ ಸಾಕಷ್ಟು ಜನಪರ ಕಾರ್ಯವನ್ನು ಮಾಡಿರುವ ನೈಋತ್ಯ ರೈಲ್ವೆ ವಲಯವು, ಈಗ ಪ್ರಯಾಣಿಕರಿಗೆ ಕಡಿಮೆ ದರದಲ್ಲಿಯೇ ಗುಣಮಟ್ಟದ …

Read More »

ಕಂಗಾಲಾಗಿದ್ದ ಬೆಳಗಾವಿ ರೈತರ ಮೊಗದಲ್ಲಿ ಮಂದಹಾಸ

ಬೆಳಗಾವಿ: ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಬೆಳಗಾವಿ ರೈತರು ಕಂಗಾಲಾಗಿದ್ದರು. ಕಳೆದೊಂದು ವಾರದಿಂದ ಸುರಿಯಿತ್ತಿರುವ ಮಳೆಯಿಂದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಬಿಟ್ಟು ಬಿಡದೇ ಮಳೆಯಾಗುತ್ತಿರುವುದರಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ನೀರಿಲ್ಲದೇ ಕಮರುತ್ತಿದ್ದ ಭತ್ತದ ಸಸಿಗಳಿಗೆ ಸದ್ಯ ಜೀವ ಕಳೆ ಬಂದಂತಾಗಿದೆ. ನೀರಿಲ್ಲದೇ ಖಾಲಿ ಖಾಲಿಯಾಗಿದ್ದ ಬೆಳಗಾವಿ ಸುತ್ತಮುತ್ತಲಿನ ರೈತರ ಗದ್ದೆಗಳಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲ ನೀರು ಕಾಣಿಸುತ್ತಿದೆ. ರೈತರ ಪ್ರಾರ್ಥನೆಗೆ ವರುಣ ದೇವ ಕೃಪೆ ತೋರಿದ್ದಾನೆ. ಜಿಲ್ಲೆಯಾದ್ಯಂತ ವಾರದಿಂದ‌ ಬಿಟ್ಟು …

Read More »

ಜೀವನ್ ಭೀಮಾನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಹೋಟೆಲ್‌ ಕ್ಯಾಶಿಯರ್​ನ ಕೊಲೆಯಾಗಿದೆ.

ಬೆಂಗಳೂರು : ನಗರದ ಪ್ರತಿಷ್ಠಿತ ಹೋಟೆಲ್​ ಕ್ಯಾಶಿಯರ್​ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಲ್ಲಿನ ಜೀವನ್ ಭೀಮಾನಗರ ಮುರುಗೇಶ್​ ಪಾಳ್ಯದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ಅಂಡ್​ ಸರ್ವಿಸ್ ಅಪಾರ್ಟ್‌ಮೆಂಟಿನ ಕ್ಯಾಶಿಯರ್ ಸುಭಾಷ್ ಕೊಲೆಯಾದವರು ಎಂದು ಗುರುತಿಸಲಾಗಿದೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನಿಂದ ಕೃತ್ಯ ನಡೆದಿದ್ದು, ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುಭಾಷ್ ವಾಸವಿದ್ದ ರೂಮಿನಲ್ಲಿ ಸೋಫಾ ಮೇಲೆ ಮಲಗಿದ್ದಾಗ ಆತನಿಗೆ ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಬೆಳಗ್ಗೆ …

Read More »

ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್ ವಶಕ್ಕೆ: ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾಹಿತಿ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಡಿ ಐವರು ಶಂಕಿತ ಭಯೋತ್ಪಾದಕರನ್ನ ಬಂಧಿಸಿರುವ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣದ‌ ಐದನೇ ಆರೋಪಿ ಜಾಯಿದ್ ತಬರೇಜ್ ನ ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿದ್ದ ನಾಲ್ಕು ಜೀವಂತ ಗ್ರೆನೇಡ್ ಜಪ್ತಿ ಮಾಡಿದ್ದಾರೆ. ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದ ಆರೋಪದಡಿ ಸುಹೇಲ್, ಜಾಹಿದ್, ಮುದಾಸಿರ್, ಫೈಜರ್ ಹಾಗೂ ಉಮರ್ ಎಂಬುವರನ್ನು ನಿನ್ನೆ ಸಿಸಿಬಿ ಪೊಲೀಸರು ಬಂಧಿಸಿ 7 ಕಂಟ್ರಿ ಮೇಡ್ ಪಿಸ್ತೂಲ್, 42 …

Read More »

ಬಿಎಸ್​ವೈ ಪುತ್ರ ವಿಜಯೇಂದ್ರ: ಅಮಿತ್ ಶಾ, ನಡ್ಡಾ ಜೊತೆ ಮಹತ್ವದ ಮಾತುಕತೆ

ಬೆಂಗಳೂರು : ವಿಧಾನಸಭೆ ಅಧಿವೇಶನ ನಡೆಯುತ್ತಿರುವ ನಡುವೆಯೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ದೆಹಲಿ ಪ್ರವಾಸದಲ್ಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ಬಾಕಿ ಇರುವ ವೇಳೆ ವಿಜಯೇಂದ್ರ ಹೈಕಮಾಂಡ್ ಭೇಟಿ ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ ಬಿ ವೈ ವಿಜಯೇಂದ್ರರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿಯನ್ನು …

Read More »

ಕೆಆರ್​ಪಿಪಿ ಸದಸ್ಯನ ಕೊಲೆ… ಮಗನ ಜನ್ಮದಿನದಂದೇ ಪ್ರಾಣ ಬಿಟ್ಟ ತಂದೆ

ಬಳ್ಳಾರಿ: ಕಳೆದ ರಾತ್ರಿ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣಾ ಕಾಲೋನಿಯಲ್ಲಿ ನಡೆದಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಕೆಆರ್​ಪಿಪಿ ಕಾರ್ಯಕರ್ತನಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೆಹಬೂಬ್ ಬಾಷಾರನ್ನ ಕಾಂಗ್ರೆಸ್ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಘಟನೆ ಸದನದಲ್ಲೂ ಚರ್ಚೆಗೆ ಕಾರಣವಾಗಿದೆ. ಬಳ್ಳಾರಿ ನಿವಾಸಿ ಮೆಹಬೂಬ್ ಬಾಷಾ ಅವರು ಗಾಲಿ ಜನಾರ್ದನ ರೆಡ್ಡಿಯವರ ನೂತನ ಕೆಆರ್​ಪಿಪಿ ಪಕ್ಷದ ಕಾರ್ಯಕರ್ತರಾಗಿದ್ದರು. ಮೆಹಬೂಬ್​ ಬಾಷಾ …

Read More »

ಒಂದು ದಿನ ಕೂಲಿ ಕೆಲಸ.. ಇನ್ನೊಂದು ದಿನ ಕಾಲೇಜು.. ಕೆಮಿಸ್ಟ್ರಿಯಲ್ಲಿ ಪಿಎಚ್​ಡಿ.. ಬಡತನದಲ್ಲಿ ಅರಳಿದ ಭಾರತಿ ಈಗ ​ಡಾಕ್ಟರ್!

ಅನಂತಪುರ (ಆಂಧ್ರಪ್ರದೇಶ): ವಿವಾಹಿತ ಮಹಿಳೆಯೊಬ್ಬರು ದಿನಗೂಲಿ ಕೆಲಸ ಮಾಡುತ್ತಲೇ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಬಡತನ, ಮದುವೆ, ಮಕ್ಕಳು, ಕೌಟುಂಬಿಕ ಜವಾಬ್ದಾರಿಗಳು ಓದಲು ಅಡ್ಡಿಯಾಗುವುದಿಲ್ಲ ಎಂಬುದನ್ನು ಈ ಸಾಧಕಿ ನಿರೂಪಿಸಿದ್ದಾರೆ. ಪಿಎಚ್​ಡಿ ಪದವಿ ಮುಗಿಸಿರುವ ಈಕೆ ಪ್ರೊಫೆಸರ್ ಆಗಬೇಕೆಂಬ ಮಹಾದಾಸೆಯನ್ನೂ ಹೊಂದಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಾಕೆ ಭಾರತಿ ಎಂಬುವವರೇ ಈ ವಿಶಿಷ್ಟ ಸಾಧಕಿ. ಇವರದ್ದು ತೀರಾ ಬಡ ಕುಟುಂಬ. ದಿನವೂ ದುಡಿಯಲು ಹೋಗದಿದ್ದರೆ ಜೀವನ ನಿರ್ವಹಣೆಯೇ ಕಷ್ಟ ಸಾಧ್ಯ. ದಿನಗೂಲಿ …

Read More »

ಪ್ರಾಂಶುಪಾಲರ ವಿರುದ್ಧ ಕಿರುಕುಳ ದೂರು: ಮತ್ತೊಂದು ಪ್ರಕರಣದಲ್ಲಿ ಯುವಕನ ಲವ್ವಿಡವ್ವಿ, ಬಾಲಕಿ ಗರ್ಭಿಣಿ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳಾಗಿವೆ.   ಶಿವಮೊಗ್ಗದ ಪ್ರತಿಷ್ಟಿತ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮದೆ ಕಾಲೇಜಿನ ವಿದ್ಯಾರ್ಥಿನಿಯ ಜೊತೆ ಸಂಪರ್ಕ ಬೆಳೆಸಿದ್ದಾರೆ. ಪ್ರಾಂಶುಪಾಲರಿಗೆ 48 ವರ್ಷವಾಗಿದ್ದು, ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದೆ. ಪಾಠ ಮಾಡುವ ವಿದ್ಯಾರ್ಥಿನಿಗೆ ನಂಬಿಸಿ, ಆಕೆಯ ಜೊತೆ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ. ಪ್ರಾಂಶುಪಾಲರು ಕಾಲೇಜಿನಲ್ಲಿ ಚೆನ್ನಾಗಿಯೇ ಪಾಠ ಮಾಡುತ್ತಿದ್ದರು. ಎಲ್ಲಾ …

Read More »

ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆ

ಬೆಂಗಳೂರು : ನಗರದ ಜನನಿಬಿಡ ಪ್ರದೇಶಗಳಲ್ಲಿ ಶಂಕಿತ ಭಯೋತ್ಪಾದಕರು ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ಹೀಗಾಗಿ, ಇಲ್ಲಿನ ಸ್ಥಳೀಯರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಪ್ರಕರಣದ ಐದನೇ ಆರೋಪಿ ಜಾಯೇದ್ ತಬ್ರೆಸ್​ನ ಕೊಡಿಗೆಹಳ್ಳಿಯ ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್​ಗಳನ್ನ ಸಿಸಿಬಿ ವಶಪಡಿಸಿಕೊಂಡಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ತಿಳಿದುಬಂದಿದೆ. 2021 ರಲ್ಲಿ ಉಪ್ಪಿನಂಗಡಿ …

Read More »

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ …

Read More »