Breaking News

Daily Archives: ಜುಲೈ 20, 2023

ಭಾರತದಲ್ಲಿ ಆದ ಮದುವೆ, ಆಸ್ಟ್ರೇಲಿಯಾದಲ್ಲಿ ವಿಚ್ಛೇದನ

ಚೆನ್ನೈ, ತಮಿಳುನಾಡು: ಆಸ್ಟ್ರೇಲಿಯಾದಲ್ಲಿ ಓದುತ್ತಿದ್ದಾಗ ಕರ್ನಾಟಕದ ಹುಡುಗ ಮತ್ತು ತಮಿಳುನಾಡಿನ ಹುಡುಗಿ ಭೇಟಿಯಾಗಿದ್ದರು. ಬಳಿಕ ಇವರ ಮಧ್ಯೆ ಪರಿಚಯ ಬೆಳೆಯಿತು. ಇವರ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರೂ ಅಕ್ಟೋಬರ್ 2006 ರಲ್ಲಿ ಚೆನ್ನೈನ ಕ್ರಿಶ್ಚಿಯನ್ ಚರ್ಚ್‌ನಲ್ಲಿ ವಿವಾಹವಾದರು. ಈ ಅಂತರ್ಧರ್ಮೀಯ ದಂಪತಿಗೆ ಮುದ್ದಾದ ಗಂಡು ಮಗುವೂ ಸಹ ಜನಿಸಿದೆ. ಇನ್ನು ಈ ದಂಪತಿ ತಮ್ಮ ಕುಟುಂಬದೊಂದಿಗೆ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದರು. ಕುಟುಂಬ ಸಮೇತ ಆಸ್ಟ್ರೇಲಿಯದಲ್ಲಿ ವಾಸವಿದ್ದ ಸಂದರ್ಭದಲ್ಲಿ ಗಂಡನ ಕುಟುಂಬಕ್ಕೆ ಪತ್ನಿಯ ಧರ್ಮ, …

Read More »

B.J.P.&J.D.S. ಸದಸ್ಯರ ಗೈರಿನ ನಡುವೆಯೇ ವಿಧಾನ ಪರಿಷತ್​ನಲ್ಲಿ 5 ವಿಧೇಯಕಗಳಿಗೆ ಅಂಗೀಕಾರ

ಬೆಂಗಳೂರು : ಕಾಂಗ್ರೆಸ್​ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಹೊರ ರಾಜ್ಯದ ರಾಜಕಾರಣಿಗಳ ಸ್ವಾಗತಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳ ನಿಯುಕ್ತಿ ಮಾಡಿದ್ದು ಹಾಗು ಬಿಜೆಪಿಯ 10 ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರ ಗೈರಿನ ನಡುವೆ ವಿಧಾನ ಪರಿಷತ್ ಕಲಾಪವನ್ನು ನಡೆಸಲಾಯಿತು. ಈ ವೇಳೆ 5 ಪ್ರಮುಖ ವಿಧೇಯಕಗಳನ್ನು ಪ್ರತಿಪಕ್ಷ ಸದಸ್ಯರ ಗೈರಿನಲ್ಲಿ ಅಂಗೀಕರಿಸಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, …

Read More »

ಬೆಳಗಾವಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳ

ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್​ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ. ಮತ್ತೊಂದು ಕಡೆ ವೇದಗಂಗಾ ನದಿಯಲ್ಲಿ ಒಳಹರಿವು ನೀರಿನ ಮಟ್ಟ ಹೆಚ್ಚಳವಾದ ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಜತ್ರಾಟ- ಭೀವಶಿ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ಪೊಲೀಸರು …

Read More »

10 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ

ಬೆಂಗಳೂರು: 10 ಜಿಜೆಪಿ ಶಾಸಕರನ್ನು ಸದನ ಮುಗಿಯುವವರೆಗೆ ಸ್ಪೀಕರ್​ ಅಮನಾತು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಮಾನತಾದ ಬಿಜೆಪಿ ಶಾಸಕರು ಸೇರಿ ಇತರೆ ಬಿಜೆಪಿ ಶಾಸಕರು ಹಾಗೂ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ಮುನಿರತ್ನ, ಸುರೇಶ್ ಕುಮಾರ್, ಬೈರತಿ ಬಸವರಾಜ್, ಸುನೀಲ್ ಕುಮಾರ್, ಗೋಪಾಲಯ್ಯ ಸೇರಿ ಹಲವು ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾದ್ದಾರೆ. ಬಿಜೆಪಿ ಶಾಸಕರು …

Read More »

ಬಿಜೆಪಿ ಶಾಸಕರ ಅಮಾನತು ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದಾರೆ.

ಬೆಂಗಳೂರು: ನಿನ್ನೆ 10 ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದಾರೆ. ವಿರೋಧ ಪಕ್ಷಗಳ ಗೈರುಹಾಜರಿ ನಡುವೆಯೇ ವಿಧಾನಮಂಡಲದ ಕಲಾಪ ಇಂದು ಆರಂಭಗೊಳ್ಳುವ ಮೂಲಕ ಮತ್ತೊಂದು ಅನಪೇಕ್ಷಣೀಯ ವಿದ್ಯಮಾನ ನಡೆದಿದೆ. ವಿಧಾನಮಂಡಲದ 30 ವರ್ಷಗಳ ಇತಿಹಾಸದಲ್ಲಿ ಪ್ರತಿಪಕ್ಷಗಳು ಸಂಪೂರ್ಣ ಬಹಿಷ್ಕಾರ ಹಾಕಿ ಅದರ ಬಳಿಕವೂ ಕಲಾಪ ನಡೆದ ಉದಾಹರಣೆ ಇಲ್ಲ. ಪ್ರಜಾಸತ್ತಾತ್ಮಕ ವಿಷಯಗಳಿಗಾಗಿ ಹಲವಾರು ಬಾರಿ ಪ್ರತಿಭಟನೆಗಳಾಗಿವೆ. ಆ ವೇಳೆ ಸಭಾತ್ಯಾಗ ಮಾಡಿರುವ ಉದಾಹರಣೆಗಳು …

Read More »

ಕನ್ಯಾ ಭಾಗ್ಯ ಯೋಜನೆ ತರುವಂತೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ

ಹಾವೇರಿ : ಜಿಲ್ಲೆಯ ಯುವ ರೈತರು ಇದೀಗ ಹೊಸ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಯುವಕರಿಗೆ ಇದೀಗ ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ. ಹೀಗಾಗಿ ಜಿಲ್ಲೆಯ ಯುವಕರು ವಿವಿಧೆಡೆ ಕನ್ಯೆ ನೋಡಿ ಬರುತ್ತಾರೆ. ಆದರೆ ಹುಡುಗಿಯ ಕಡೆಯವರು ಕೃಷಿಕರಿಗೆ ಕನ್ಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಹಲವು ಭಾಗ್ಯಗಳನ್ನು ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ಯಾಭಾಗ್ಯ ಯೋಜನೆಯನ್ನು ಆರಂಭಿಸುವಂತೆ ಜಿಲ್ಲೆಯ ರೈತರು ಪತ್ರ ಬರೆಯುವ ಮೂಲಕ ಹೊಸ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ …

Read More »

ಕೇಂದ್ರದ ನಾಯಕ ಓಲೈಕೆಗಾಗಿ ರಾಜ್ಯದ ಬಿಜೆಪಿ ನಾಯಕರು ಈ ರೀತಿಯ ಸಾಹಸಗಳನ್ನು ಮಾಡುತ್ತಿದ್ದಾರೆ ಎಂದು ಡಿಕೆಶಿ

ಬೆಂಗಳೂರು: ದೆಹಲಿ ನಾಯಕರು ನೋಡಲಿ ಅಂತ ಬಿಜೆಪಿ ನಾಯಕರು ರೇಸ್​ನಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶೆಯಿಂದ ಗೂಂಡಾ ವರ್ತನೆ ತೋರುತ್ತಿದ್ದಾರೆ. ಯಾರು ಹೆಚ್ಚಿಗೆ ಮಾತನಾಡುತ್ತಾರೆ, ಯಾರು ಹೆಚ್ಚು ಫೋಟೋಗೆ ಬರುತ್ತಾರೆ ಎಂದು ದೆಹಲಿ ನಾಯಕರು ನೋಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮಹಾಭಾರತದಲ್ಲಿ ನಡೆಯುವಂತೆ ನಾಟಕ‌ ತೋರಿಸುತ್ತಿದ್ದಾರೆ. ಅವರಿಗೆ ಹಕ್ಕಿದೆ, ಏನು ಬೇಕಾದರು ಮಾಡಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ದಲಿತ ಸಭಾದ್ಯಕ್ಷರ …

Read More »

ಏಷ್ಯಾಕಪ್​ ಕ್ರಿಕೆಟ್​ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿ

ಏಷ್ಯಾಕಪ್​ ಕ್ರಿಕೆಟ್​ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ: ಏಷ್ಯಾಕಪ್​ ಕ್ರಿಕೆಟ್​ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬುಧವಾರ ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಸೆ.10ರಂದು ಕೊಲಂಬೊದಲ್ಲಿ ಸೂಪರ್ 4 ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಏಷ್ಯಾಕಪ್​ ಕ್ರಿಕೆಟ್​ ಟೂರ್ನಿಯಲ್ಲಿ ಆರು ತಂಡಗಳು ಪಾಲ್ಗೊಳ್ಳಲಿವೆ. …

Read More »

ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು

ಬೆಂಗಳೂರು: ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು ಬೆಂಗಳೂರಿನಿಂದ ಹೊರಡಲಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್​ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ …

Read More »

2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭ

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಈಗಾಗಲೇ 65 ಪಕ್ಷಗಳು ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟವನ್ನು ಸೇರುವ ಮೂಲಕ ಚುನಾವಣಾ ಅಖಾಡಕ್ಕೆ ಸಜ್ಜುಗೊಳ್ಳುತ್ತಿವೆ. ಆದರೆ, ಸಂಸತ್ತಿನಲ್ಲಿ ಒಟ್ಟು 91 ಸದಸ್ಯರನ್ನು ಹೊಂದಿರುವ ಕನಿಷ್ಠ 11 ಪಕ್ಷಗಳು ತಟಸ್ಥ ಸ್ಥಿತಿಗೆ ಜಾರಿವೆ. ಇದರಲ್ಲಿ ಮೂರು ಪಕ್ಷಗಳು ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒಡಿಶಾದಂತಹ ಮೂರು ದೊಡ್ಡ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಒಟ್ಟಾಗಿ 63 ಸದಸ್ಯರನ್ನು ಲೋಕಸಭೆಗೆ …

Read More »