Breaking News

Daily Archives: ಜುಲೈ 25, 2023

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಹಾಮಳೆಗೆ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕಲಬುರಗಿ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಗಂಡ ಬಸವರಾಜ ಬಳಗಾರ (35) ಮೃತಪಟ್ಟ ಮಹಿಳೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆಯ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದು …

Read More »

ರಾಜ್ಯದಲ್ಲಿ ಮಳೆ – ಬೆಳೆ ಪರಿಸ್ಥಿತಿ : ಜುಲೈ 26 ರಂದು ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು: ರಾಜ್ಯದಲ್ಲಿನ ಹವಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ತಿಂಗಳ 26 ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳು ಮತ್ತು ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿ ಇರುವ ಜಿಲ್ಲೆಗಳೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರದ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು, ಕೃಷಿ ಸಚಿವರು ಸೇರಿದಂತೆ …

Read More »

ಅಸಲಿ ಪಾಸ್ ಪೋರ್ಟ್ ಬಳಸಿಯೇ ವಿದೇಶಕ್ಕೆ ಪರಾರಿ

ಬೆಂಗಳೂರು: ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಮೊಹಮ್ಮದ್ ಜುನೈದ್ ಪತ್ತೆಗೆ ಈಗಾಗಲೇ ಲುಕ್ ಔಟ್ ನೊಟೀಸ್ ಜಾರಿಯಾಗಿದೆ. ಈ ಲುಕ್​ ಔಟ್​ ನೋಟಿಸ್​ ಜಾರಿ ಮಾಡಿರುವ ಬೆಂಗಳೂರು ಕೇಂದ್ರಿಯ ಅಪರಾಧ ವಿಭಾಗ (ಸಿಸಿಬಿ) ಶಂಕಿತನ ಹಿನ್ನೆಲೆ ಬಗ್ಗೆ ಮಾಹಿತಿ ಕಲೆ ಹಾಕಿದೆ. 2021ರಲ್ಲಿ ರಕ್ತಚಂದನ ಸಾಗಾಟ ಪ್ರಕರಣದಡಿ ಜೈಲಿಗೆ ಹೋಗಿ ಬಂದಿದ್ದ ಜುನೈದ್, ಬೆಂಗಳೂರು ಬಿಟ್ಟು ವಿದೇಶದಲ್ಲಿ ಅಡಗಿಕೊಂಡಿದ್ದಾನೆ. ಕೊಲ್ಲಿ ರಾಷ್ಟ್ರವಾಗಿರುವ ಅಜೆರ್ಭೈಜಾನ್ ದೇಶದ …

Read More »

ಮಹಿಳೆಯ ಹೊಟ್ಟೆಯಲ್ಲಿ ಜೋಡಿ ಫೋರ್ಸ್ಪ್ಸ್: ಪೊಲೀಸರ ತನಿಖಾ ವರದಿಯಿಂದ ದೃಢ

ಕೋಯಿಕ್ಕೋಡ್ (ಕೇರಳ): ಕೋಯಿಕ್ಕೋಡ್‌ನ ಹರ್ಷಿನಾ ಮಲಯಿಲ್ ಕುಲಂಗರ ಎಂಬುವವರ ಹೊಟ್ಟೆಯಲ್ಲಿದ್ದ ಜೋಡಿ ಫೋರ್ಸ್ಪ್ಸ್ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸೇರಿದ್ದು ಎಂದು ಪೊಲೀಸ್ ತನಿಖಾ ವರದಿ ದೃಢಪಡಿಸಿದೆ.   ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ವೇಳೆ ಹರ್ಷಿನಾ ಅವರ ಹೊಟ್ಟೆಯಲ್ಲಿ ಕತ್ತರಿ ಸಿಲುಕಿತ್ತು ಎಂದು ತನಿಖಾ ವರದಿ ತಿಳಿಸುತ್ತದೆ. ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಮೂರನೇ ಹೆರಿಗೆ ವೇಳೆ ಹರ್ಷಿನಾ ಅವರ ದೇಹದಲ್ಲಿ ಫೋರ್ಸ್ಪ್ಸ್ ಸಿಲುಕಿರುವುದು ಪತ್ತೆಯಾಗಿದೆ. ಈ ಗಂಭೀರ ವೈದ್ಯಕೀಯ …

Read More »

ವೀಸಾ ಅರ್ಜಿದಾರರೇ ಗಮನಿಸಿ..ಅಮೆರಿಕ ರಾಯಭಾರಿ ಕಚೇರಿ ಗ್ರಾಹಕ ಕೇಂದ್ರ ನವೀಕರಣ, ಜುಲೈ 25 ರಿಂದ 4 ದಿನ ಸೇವೆ ಇರಲ್ಲ

ನವದೆಹಲಿ: ವೀಸಾ ಅರ್ಜಿದಾರರೇ ಎಚ್ಚರ!, ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿ ತನ್ನ ಗ್ರಾಹಕ ಸೇವಾ ಕೇಂದ್ರವನ್ನು ಬೇರೊಂದು ಪ್ಲಾಟ್​ಫಾರ್ಮ್​ಗೆ ವರ್ಗ ಮಾಡುತ್ತಿದ್ದು, ಜುಲೈ 25 ರಿಂದ 28 ರವರೆಗೆ ವೀಸಾ ಅರ್ಜಿಗಳ ಸ್ವೀಕಾರ, ಹಣ ಪಾವತಿ ಸೇವೆ ಇರುವುದಿಲ್ಲ.   ಹೀಗಂತ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅಮೆರಿಕ ಧೂತಾವಾಸ ಟ್ವೀಟ್​ ಮೂಲಕ ತಿಳಿಸಿದೆ. ಅಂದರೆ, ಅಮೆರಿಕಕ್ಕೆ ಹೋಗಬಯಸುವ ಪ್ರಯಾಣಿಕರು ವೀಸಾ ಬಯಸಿ ಅಮೆರಿಕ ಧೂತಾವಾಸಕ್ಕೆ ಕರೆ, ಅರ್ಜಿ ಸಲ್ಲಿಕೆ, …

Read More »

ಬಾಯಿಗೆ ಹಲ್ಲಿ ನುಗ್ಗಿ ಮಗು ಸಾವು,

ಕೊರ್ಬಾ (ಛತ್ತೀಸ್​ಗಢ) : ಹಲ್ಲಿಯೊಂದು ಬಾಯಿಯೊಳಗೆ ನುಗ್ಗಿದ ಪರಿಣಾಮ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಛತ್ತೀಸ್​ಗಢದ ಕೊರ್ಬಾದಲ್ಲಿ ನಡೆದಿದೆ. ಆದರೆ, ಹಲ್ಲಿಗೆ ಮನುಷ್ಯನನ್ನು ಸಾಯಿಸುವಷ್ಟು ವಿಷ ಇರುವುದಿಲ್ಲ. ಇದಕ್ಕೆ ಬೇರೆಯದೇ ಕಾರಣ ಇರಬೇಕು ಎಂಬುದು ವೈದ್ಯರ ಅನುಮಾನ. ಹಲ್ಲಿ ಕೂಡ ಮಗುವಿನ ಬಾಯಿಯಲ್ಲೇ ಸಾವನ್ನಪ್ಪಿದ್ದು, ಅಚ್ಚರಿ ಉಂಟು ಮಾಡಿದೆ. ಕೊರ್ಬಾ ಜಿಲ್ಲೆಯ ಸುಮೇಧಾ ನಾಗಿನ್‌ಭಂಥ ಗ್ರಾಮದಲ್ಲಿ ಈ ಅಚ್ಚರಿ ಘಟಿಸಿದೆ. ಮಲಗಿದ್ದ ವೇಳೆ ಮಗುವಿನ ಬಾಯಿಯಲ್ಲಿ ಹಲ್ಲಿ ಇರುವುದನ್ನು ತಾಯಿ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅದರಲ್ಲೂ ಅಘನಾಶಿನಿ ನದಿ ನೆರೆಗೆ ಹಲವು ಗ್ರಾಮಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಅಘನಾಶಿನಿ, ಗಂಗಾವಳಿ, ಶರಾವತಿ, ವರದಾ ಹಾಗು ಕಾಳಿ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಘಟ್ಟದ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಗಂಗಾವಳಿ ಹಾಗೂ ಅಘನಾಶಿನಿ …

Read More »

ಚಿಕ್ಕೋಡಿಯಲ್ಲಿ ಹಲವು ದೇವಸ್ಥಾನಗಳು ಜಲಾವೃತ

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಪ್ರಮುಖ ದೇವಾಲಯಗಳು ಜಲಾವೃತವಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಗಣೇಶ್ ಮಂದಿರ ಜಲದಿಗ್ಬಂದನ ಗೊಂಡಿದ್ದು, ಮಹಾರಾಷ್ಟ್ರ – ಕರ್ನಾಟಕ ಗಡಿಯಲ್ಲಿರುವ ನರಸಿಂಹ ಹಾಡಿ ದೇವಸ್ಥಾನ ಭಾಗಶಃ ಜಲಾವೃತವಾಗಿದೆ. ಇನ್ನು ಭಕ್ತರು ರಭಸವಾಗಿ ಹರಿಯುತ್ತಿರುವ ನೀರನ್ನು ಲೆಕ್ಕಿಸದೇ, ದತ್ತ ದೇವರ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳ …

Read More »