ಚಿಕ್ಕೋಡಿ: ಮೊಬೈಲ್ ಚಾರ್ಜ್ ಹಾಕಲು ಹೋಗಿ ಯುವಕ ವಿದ್ಯುತ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶಿರಪ್ಪೆವಾಡಿ ಗ್ರಾಮದ ಆಕಾಶ ಸಂಕಪಾಳ (27) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ. ಮುಂಜಾನೆ ಎಂಟು ಗಂಟೆ ಸುಮಾರಿಗೆ ಮನೆಯಲ್ಲಿ ಮೊಬೈಲ್ ಚಾರ್ಚ್ ಹಾಕುವುದಕ್ಕೆ ಯುವಕ ಮುಂದಾಗಿದ್ದಾನೆ. ಆಕಸ್ಮಿಕವಾಗಿ ವಿದ್ಯುತ್ ಕೈಗೆ ತಗುಲಿ ಸಾವು ಸಂಭವಿಸಿದೆ ಎಂದು ಮೃತ ಯುವಕನ ತಂದೆ ನಿಪ್ಪಾಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
Read More »Daily Archives: ಜುಲೈ 27, 2023
ಡೇಟಿಂಗ್ ಆಯಪ್ ಜಾಲ.. ಮಹಿಳೆ ಮಾತಿಗೆ ಮರುಳಾಗಿ ಕೋಟಿ ಕೋಟಿ ಕಳೆದುಕೊಂಡ
ಚೆನ್ನೈ, ತಮಿಳುನಾಡು: ಸೈಬರ್ ಅಪರಾಧಗಳಿಗೆ ಹೆಸರುವಾಸಿಯಾಗಿರುವ ಉತ್ತರ ರಾಜ್ಯದ ಹಲವು ಗ್ಯಾಂಗ್‌ಗಳು ದೇಶಾದ್ಯಂತ ನಾನಾ ರೀತಿಯಲ್ಲಿ ಅತ್ಯಾಧುನಿಕ ರೀತಿಯಲ್ಲಿ ವಂಚನೆ ನಡೆಸಿ ಸಾರ್ವಜನಿಕರಿಂದ ನಿರಂತರವಾಗಿ ಹಣ ದೋಚುತ್ತಿದ್ದಾರೆ. ಅಷ್ಟೇ ಅಲ್ಲ ಚೆನ್ನೈ ಮೂಲದ ಚಿನ್ನದ ವ್ಯಾಪಾರಿಯೊಬ್ಬರಿಗೆ ಕೋಟಿಗಟ್ಟಲೆ ವಂಚಿಸಿದ ಪ್ರಕರಣದಲ್ಲಿ ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್ ಸೈಬರ್ ಕ್ರೈಂ ಪೊಲೀಸರು ಉತ್ತರ ರಾಜ್ಯದ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಡೇಟಿಂಗ್ ಆಯಪ್ ಮೂಲಕ ವಂಚನೆ: ತಮಗೆ ಆದ ವಂಚನೆ ಬಗ್ಗೆ ಚೆನ್ನೈನ ಪಾರ್ಕ್ …
Read More »ರಾಜ್ಯಾದ್ಯಂತ ಮುಂಗಾರು ಅಬ್ಬರ ಮುಂದುವರೆದಿದೆ. ಗಡಿ ಜಿಲ್ಲೆ ಬೀದರ್ನಲ್ಲೂ ಧಾರಾಕಾರ ಮಳೆ
ಬೀದರ್: ರಾಜ್ಯಾದ್ಯಂತ ಮುಂಗಾರು ಅಬ್ಬರ ಮುಂದುವರೆದಿದೆ. ಗಡಿ ಜಿಲ್ಲೆ ಬೀದರ್ನಲ್ಲೂ ಧಾರಾಕಾರ ಮಳೆಯಾಗುತ್ತಿದೆ. ತಡರಾತ್ರಿ ಜಿಲ್ಲೆಯಲ್ಲಿ ಸರಾಸರಿ 8.77 ಮಿ.ಮೀ. ಮಳೆ ದಾಖಲಾಗಿದೆ. ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆಗಳು ಭರ್ತಿಯಾಗಿವೆ. ಕೆಲವೆಡೆ ಪ್ರವಾಹ ಭೀತಿ ಉಂಟಾಗಿದೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುವ ಆತಂಕ ರೈತರದ್ದು. ಮಂಗಳವಾರ ರಾತ್ರಿ ಬೀದರ್ ನಗರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಬುಧವಾರವೂ ಅಲ್ಲಲ್ಲಿ ಮಳೆ …
Read More »ಥಣಿಯಲ್ಲಿ ಮನೆ ಬಿದ್ದು ಯುವಕ; ವಿಜಯನಗರದಲ್ಲಿ ಗೋಡೆ ಕುಸಿದು ವೃದ್ಧೆ ಸಾವು
ಚಿಕ್ಕೋಡಿ: ಕಳೆದ ಹದಿನೈದು ದಿನಗಳಿಂದ ಸತತವಾಗಿ ಚಿಟಿಕೆ ಮಳೆ ಸುರಿಯುತ್ತಿದ್ದು ಮನೆಗೋಡೆ ಕುಸಿದು ಯುವಕ ಸಾವನ್ನಪ್ಪಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತರೆಂದು ಗುರುತಿಸಲಾಗಿದೆ. ತನ್ನ ತಂದೆ ತಾಯಿ ಹಾಗೂ ಸಹೋದರನನ್ನು ಮನೆಯಿಂದ ಹೊರಕಳಿಸಿ ತಾನು ಹೊರಬರುವ ಹೊತ್ತಿಗೆ ಹಠಾತ್ ಮೈಮೇಲೆ ಮಣ್ಣು, ಕಲ್ಲು ಬಿದ್ದು ಯುವಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಅಥಣಿ ಪಿಎಸ್‌ಐ ಹಾಗೂ ಸಿಪಿಐ …
Read More »ಉಡುಪಿ ವಾಶ್‌ರೂಂ ವಿಡಿಯೋ ಪ್ರಕರಣ; ಮೂವರು ವಿದ್ಯಾರ್ಥಿನಿಯರ ವಿರುದ್ಧ FIR, ಖುಷ್ಬೂ ಭೇಟಿ
ಉಡುಪಿ : ನಗರದ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್ರೂಮ್ನಲ್ಲಿ ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಗಂಭೀರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆರೋಪಿತ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿತ ವಿದ್ಯಾರ್ಥಿನಿಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) …
Read More »ಕಾರ್ಗಿಲ್ ವಿಜಯೋತ್ಸವ ಇಡೀ ದೇಶವೇ ಗರ್ವ, ಹೆಮ್ಮೆ, ಅಭಿಮಾನ ಪಡುವಂತದ್ದು., ಈ ಯುದ್ಧದಲ್ಲಿ ಗಂಡು ಮೆಟ್ಟಿದ ನಾಡು ಬೆಳಗಾವಿ ಜಿಲ್ಲೆಯ ವೀರಯೋಧರು ಕೂಡ ಭಾಗಿ
ಬೆಳಗಾವಿ: ಕಾರ್ಗಿಲ್ ವಿಜಯೋತ್ಸವ ಇಡೀ ದೇಶವೇ ಗರ್ವ, ಹೆಮ್ಮೆ, ಅಭಿಮಾನ ಪಡುವಂತದ್ದು. ಈ ಯುದ್ಧದಲ್ಲಿ ಗಂಡು ಮೆಟ್ಟಿದ ನಾಡು ಬೆಳಗಾವಿ ಜಿಲ್ಲೆಯ ವೀರಯೋಧರು ಕೂಡ ಭಾಗಿಯಾಗಿ ಶತ್ರುಗಳನ್ನು ಹೊಡೆದುರುಳಿಸುವ ಮೂಲಕ ತಮ್ಮ ಶೌರ್ಯ, ಸಾಹಸ ಪ್ರದರ್ಶಿಸಿದ್ದರು. ಅಲ್ಲದೇ ಹಲವು ಯೋಧರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಬಲಿ ಕೊಟ್ಟು ಹುತಾತ್ಮರಾಗಿದ್ದಾರೆ. ಹೌದು ಜುಲೈ 26 ಬಂದರೆ ಸಾಕು ಕಾರ್ಗಿಲ್ ವಿಜಯೋತ್ಸವದ ಸಂಭ್ರಮ ಮನೆ ಮಾಡಿರುತ್ತದೆ. ಆ ಸಂಭ್ರಮಕ್ಕೆ ಕಾರಣವಾಗಿರುವ ವೀರಯೋಧರನ್ನು ಸ್ಮರಿಸಲಾಗುತ್ತದೆ. ಹೀಗೆ …
Read More »ಪಂಚ ಗ್ಯಾರಂಟಿ ಯೋಜನೆ ಜಾರಿ ಹಿನ್ನೆಲೆ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದ D.C.M.
ಬೆಂಗಳೂರು : ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಕೋರಿಕೆಯಂತೆ (ಸರ್ಕಾರಿ ನೌಕರರ) ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ …
Read More »