ಕಾರವಾರ : ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ ಕಡಿಮೆಯಾಗಿದ್ದು, ನದಿ ತೀರಗಳಲ್ಲಿ ಪ್ರವಾಹ ಇಳಿಕೆಯಾಗುತ್ತಿರುವ ಕಾರಣ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ, ಈ ನಡುವೆ ಜಿಲ್ಲೆಯಲ್ಲಿ ನಡೆದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯಲ್ಲಿ ಜಿಲ್ಲೆಯ 439 ಪ್ರದೇಶಗಳಲ್ಲಿ ಭೂ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ವರದಿಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ. ಬಹುಪಾಲು ಅರಣ್ಯ ಪ್ರದೇಶವನ್ನೇ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ. ಅದರಲ್ಲಿಯೂ ಕಳೆದ ನಾಲ್ಕು …
Read More »Daily Archives: ಜುಲೈ 29, 2023
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ ಬಿಡುಗಡೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಿ ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಬಲವಾಗಿದೆ. ಸಿ ಟಿ ರವಿ ಅವರನ್ನು 2020 ರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಇದೀಗ ಹೈಕಮಾಂಡ್ ಇಂದು ರಿಲೀಸ್ ಮಾಡಿರುವ ಪದಾಧಿಕಾರಗಳ ಪಟ್ಟಿಯಲ್ಲಿ ಸಿ ಟಿ ರವಿ ಅವರನ್ನು ಕೈಬಿಡಲಾಗಿದೆ. ಬಿಜೆಪಿಯಲ್ಲಿ ಎರಡು ಹುದ್ದೆ ಅಲಂಕರಿಸುವ ಹಾಗಿಲ್ಲ ಎಂಬ …
Read More »ಗಡಿ ಜಿಲ್ಲೆಯಲ್ಲಿ ಮಕ್ಕಳಿಗೆ ಮತ್ತೆ ಬಂತು ವಿಚಿತ್ರ ಚುಕ್ಕಿ ರೋಗ.
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ವಿಚಿತ್ರ ಕಾಯಿಲೆಯೊಂದು ಮತ್ತೆ ಬೆಳಕಿಗೆ ಬಂದಿದ್ದು, ವೈದ್ಯಲೋಕಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಕಾಯಿಲೆಗೆ ತುತ್ತಾಗಿರುವ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎಂದು ಕರೆಯಲಾಗುತ್ತದೆ. ಇದು ಒಂದು ಬಾರಿ ಮಕ್ಕಳಿಗೆ ಅಂಟಿಕೊಂಡರೆ ಸಾವು ಖಚಿತ ಎಂಬ ಮಾತಿದ್ದು, ಈ ರೀತಿ ಮಾರಕ ಕಾಯಿಲೆ ಹನೂರು ತಾಲೂಕಿನ ಕುರಟ್ಟಿ ಹೊಸೂರು, …
Read More »ಎರಡು ಟ್ರಾವೆಲ್ ಬಸ್ಗಳ ಮಧ್ಯೆ ಅಪಘಾತ
ಬುಲ್ದಾನ(ಮಹರಾಷ್ಟ್ರ): ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಎರಡು ಟ್ರಾವೆಲ್ ಬಸ್ಗಳ ಮಧ್ಯೆ ಅಪಘಾತ ನಡೆದು 6 ಜನ ಪ್ರಯಾಣಿಕರು ಸಾವನ್ನಪ್ಪಿ, 25 ಪ್ರಯಾಣಿಕರು ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಫ್ಲೈಓವರ್ ಮೇಲೆ ಸಂಭವಿಸಿದೆ. ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ ಹಿಂಗೋಲಿಗೆ ಹೋಗುತ್ತಿತ್ತು. ಈ …
Read More »ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಆರೋಗ್ಯ ಸೌಧದಲ್ಲಿವಿಶ್ವ ಹೆಪಟೈಟಿಸ್ ದಿನಾಚರಣೆ ಕಾರ್ಯಕ್ರಮ
ಬೆಂಗಳೂರು: ”ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯವಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಶುಕ್ರವಾರ ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಪಟೈಟಿಸ್ ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಲಿವರ್ಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್ನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ, ಅದು ನಮಗೆ …
Read More »ಶಾಲಾ ವಿದ್ಯಾರ್ಥಿನಿಗೆ ಬಸ್ ಹತ್ತಲು ಅಡ್ಡಿಪಡಿಸಿದ ಆರೋಪದ ಮೇಲೆ ಬಸ್ ಚಾಲಕನ ಅಮಾನತುಗೊಳಿಸಿ ಆದೇಶಿ
ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್ ಹತ್ತಲು ಶಾಲಾ ವಿದ್ಯಾರ್ಥಿನಿಯರಿಗೆ ಅಡ್ಡಿಪಡಿಸಿದ್ದಲ್ಲದೇ, ಬುರ್ಖಾ ಧರಿಸಿ ಮಾತನಾಡು ಎಂದು ಹೇಳಿ ಅನುಚಿತವಾಗಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಬಸ್ ಡಿಪೋ 3 ರ ಚಾಲಕ ಮೆಹಬೂಬ್ ಪಟೇಲ್ ಅಮಾನತುಗೊಂಡ ಚಾಲಕ. ಜುಲೈ 26ರಂದು ಬಸವಕಲ್ಯಾಣ – ಕಲಬುರಗಿ ಮಧ್ಯೆ ಸಂಚರಿಸುವ ಬಸ್ ಕಮಲಾಪುರ ನಿಲ್ದಾಣದಲ್ಲಿ ನಿಂತಾಗ ಕಮಲಾಪುರದಿಂದ ಓಕಳಿ ಗ್ರಾಮಕ್ಕೆ …
Read More »ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಐಪಿಎಸ್ ಅಧಿಕಾರಿ ಹಿಲೋರಿಗೆ ಬಿಗ್ ರಿಲೀಫ್
ಬೆಂಗಳೂರು : ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ. ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು …
Read More »ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ :C.M. ಪರಿಶೀಲನೆ
ಬೆಂಗಳೂರು: ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಇಲ್ಲಿನ ಅಪಘಾತ ಸ್ಥಳಗಳ ವೀಕ್ಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆಯುವ ಸ್ಥಳಗಳು, ರಸ್ತೆ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಹೆದ್ದಾರಿ ನಿರ್ಮಾಣದಲ್ಲಿ ಕಳಪೆ …
Read More »