Breaking News

Monthly Archives: ಜುಲೈ 2023

ಉಡುಪಿ ವಾಶ್‌ರೂಂ ವಿಡಿಯೋ ಪ್ರಕರಣ; ಮೂವರು ವಿದ್ಯಾರ್ಥಿನಿಯರ ವಿರುದ್ಧ FIR, ಖುಷ್ಬೂ ಭೇಟಿ

ಉಡುಪಿ : ನಗರದ ಪ್ಯಾರಾಮೆಡಿಕಲ್​ ಕಾಲೇಜಿನ ವಾಶ್​ರೂಮ್​ನಲ್ಲಿ ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಗಂಭೀರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆರೋಪಿತ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಮಲ್ಪೆ ಪೊಲೀಸ್​ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಆರೋಪಿತ ವಿದ್ಯಾರ್ಥಿನಿಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) …

Read More »

ಕಾರ್ಗಿಲ್ ವಿಜಯೋತ್ಸವ ಇಡೀ ದೇಶವೇ ಗರ್ವ, ಹೆಮ್ಮೆ, ಅಭಿಮಾನ ಪಡುವಂತದ್ದು., ಈ ಯುದ್ಧದಲ್ಲಿ ಗಂಡು ಮೆಟ್ಟಿದ ನಾಡು ಬೆಳಗಾವಿ ಜಿಲ್ಲೆಯ ವೀರಯೋಧರು ಕೂಡ ಭಾಗಿ

ಬೆಳಗಾವಿ: ಕಾರ್ಗಿಲ್ ವಿಜಯೋತ್ಸವ ಇಡೀ ದೇಶವೇ ಗರ್ವ, ಹೆಮ್ಮೆ, ಅಭಿಮಾನ ಪಡುವಂತದ್ದು. ಈ ಯುದ್ಧದಲ್ಲಿ ಗಂಡು ಮೆಟ್ಟಿದ ನಾಡು ಬೆಳಗಾವಿ ಜಿಲ್ಲೆಯ ವೀರಯೋಧರು ಕೂಡ ಭಾಗಿಯಾಗಿ ಶತ್ರುಗಳನ್ನು ಹೊಡೆದುರುಳಿಸುವ ಮೂಲಕ ತಮ್ಮ ಶೌರ್ಯ, ಸಾಹಸ ಪ್ರದರ್ಶಿಸಿದ್ದರು. ಅಲ್ಲದೇ ಹಲವು ಯೋಧರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಬಲಿ ಕೊಟ್ಟು ಹುತಾತ್ಮರಾಗಿದ್ದಾರೆ. ಹೌದು ಜುಲೈ 26 ಬಂದರೆ ಸಾಕು ಕಾರ್ಗಿಲ್ ವಿಜಯೋತ್ಸವದ ಸಂಭ್ರಮ ಮನೆ ಮಾಡಿರುತ್ತದೆ. ಆ ಸಂಭ್ರಮಕ್ಕೆ ಕಾರಣವಾಗಿರುವ ವೀರಯೋಧರನ್ನು ಸ್ಮರಿಸಲಾಗುತ್ತದೆ. ಹೀಗೆ …

Read More »

ಪಂಚ ಗ್ಯಾರಂಟಿ ಯೋಜನೆ ಜಾರಿ ಹಿನ್ನೆಲೆ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದ D.C.M.

ಬೆಂಗಳೂರು : ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಕೋರಿಕೆಯಂತೆ (ಸರ್ಕಾರಿ ನೌಕರರ) ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ …

Read More »

ನಕಲಿ ಗೃಹ ಲಕ್ಷ್ಮಿ ಯೋಜನೆ ಸರ್ಟಿಫಿಕೇಟ್ ನೀಡುತ್ತಿದ್ದ ಸೈಬರ್ ಸೆಂಟರ್ ಮಾಲೀಕನ ಬಂಧನ

ಮೈಸೂರು : ಕಾಂಗ್ರೆಸ್​ ಘೋಷಿಸಿರುವ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಗೃಹ ಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್​ ಸೃಷ್ಟಿ ಮಾಡಿ ಮಾರಾಟ ಮಾಡುತ್ತಿದ್ದ ಸೈಬರ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎನ್ನಲಾಗಿದ್ದು, ಈ ಬಗ್ಗೆ ಮೇಟಗಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮೇಟಗಳ್ಳಿಯ ಸುಧಾಮೂರ್ತಿ ರಸ್ತೆಯಲ್ಲಿರುವ ಸೈಬರ್ ಸೆಂಟರ್​ನಲ್ಲಿ ಆರೋಪಿ ಸುರೇಶ್​ ಕುಮಾರ್​, ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಅಪ್ಲೋಡ್​ ಮಾಡುವ …

Read More »

ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಬರೆದ ಪತ್ರ ಸಹಜವಾಗಿದೆ

ವಿಜಯಪುರ : ಕಾಂಗ್ರೆಸ್ ಶಾಸಕ ತನ್ವೀರ್​ ಸೇಠ್​ ಡಿಜೆ – ಕೆಜಿಹಳ್ಳಿ ಸೇರಿದಂತೆ ವಿವಿಧೆಡೆ ನಡೆದ ಗಲಭೆ ಪ್ರಕರಣವನ್ನು ಮರುಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಪರಮೇಶ್ವರ್​ ಅವರಿಗೆ ಬರೆದ ಪತ್ರ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್​ ಪ್ರತಿಕ್ರಿಯಿಸಿದ್ದಾರೆ. ಇದು ಸಹಜ ಪ್ರಕ್ರಿಯೆಯಾಗಿದೆ. ಈಗಾಗಲೇ ಗೃಹ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು. ವಿಜಯಪುರದಲ್ಲಿ ಕುಡಿಯುವ ನೀರಿನ ಕುರಿತು ಅಧಿಕಾರಿಗಳ ಸಭೆ ನಡೆಸಿ …

Read More »

ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮೂಲಕ ಚಿನ್ನಾಭರಣ ಕಳ್ಳತನ

ಬೆಂಗಳೂರು: ಒಂದೂವರೆ ವರ್ಷಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು ಮನೆ ಗೆಲಸ ಮಾಡುತ್ತಿದ್ದ ಆರೋಪಿತೆಯನ್ನ ಬಂಧಿಸಿದ್ದಾರೆ. ಹಲವು ಬಾರಿ‌ ನೋಟೀಸ್ ನೀಡಿ ಸುಳ್ಳು ಪತ್ತೆ ಪರೀಕ್ಷೆಗೆ (ಪಾಲಿಗ್ರಪಿ) ಒಳಪಡಿಸಿದರೂ ಗುಟ್ಟು ಬಿಟ್ಟುಕೊಡದ ಕಿಲಾಡಿ ಮಹಿಳಾ ಆರೋಪಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾಳೆ. ಪರೀಕ್ಷೆ ವೇಳೆ ನೀಡಿದ ಸುಳಿವು ಆಧರಿಸಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲೆಯ ಜನತಾ ಕಾಲೊನಿಯ …

Read More »

50 ದಿನಗಳ ಬಳಿಕ ಹೈದರಾಬಾದ್‌ಗೆ ಮರಳಿದ ಪ್ರಭಾಸ್

ಹೈದರಾಬಾದ್: ಆದಿಪುರುಷ್ ಬಿಡುಗಡೆ ಬಳಿಕ ವಿದೇಶಕ್ಕೆ ಹಾರಿದ್ದ ಡಾರ್ಲಿಂಗ್ ಪ್ರಭಾಸ್, ಇದೀಗ ಮತ್ತೆ ವಾಪಸ್ ಭಾರತಕ್ಕೆ ಬಂದಿದ್ದಾರೆ. ಅಮೆರಿಕದಲ್ಲಿ ಪ್ರತಿಷ್ಠಿತ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ಈವೆಂಟ್​​ನಲ್ಲಿ ಭಾಗವಹಿಸಿದ್ದ ಅವರು, ಇಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಂತಾರಾಷ್ಟ್ರೀಯ ಮಟ್ಟದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ಸಮಾರಂಭದಲ್ಲಿ ಪ್ರಭಾಸ್ ಜೊತೆಗೆ ‘ಕಲ್ಕಿ 2898 AD’ ಚಿತ್ರ ತಂಡದ ಎಲ್ಲ ನಟ-ನಟಿಯರು ಕೂಡ ಭಾಗಿಯಾಗಿದ್ದರು. ಚಿತ್ರೀಕರಣ ವೇಳೆ ಪೆಟ್ಟು ಬಿದ್ದು ಸುರಿಸುಮಾರು 50 ದಿನಗಳನ್ನು …

Read More »

100 ರೂಪಾಯಿಗಾಗಿ ಮಗನನ್ನೇ ಕೊಂದ ಕುಡುಕ ತಂದೆ!

ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗನನ್ನು ಕೊಂದ ತಂದೆ : ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಮಗು ಗಂಭೀರವಾಗಿ …

Read More »

ಬಿಎಸ್​ಇ ಸೆನ್ಸೆಕ್ಸ್​ ಮತ್ತು ನಿಫ್ಟಿ ಇಂದು ಏರಿಕೆಯಲ್ಲಿ ಕೊನೆಗೊಂಡಿವೆ.

ಮುಂಬೈ : ಮೂರು ದಿನಗಳಿಂದ ನಡೆದಿದ್ದ ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಪ್ರಕ್ರಿಯೆ ಬುಧವಾರ ಅಂತ್ಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಇಂದು ಏರಿಕೆಯೊಂದಿಗೆ ಮುಕ್ತಾಯಗೊಂಡವು. ಬಿಎಸ್‌ಇಯ 30-ಷೇರುಗಳ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 351.49 ಪಾಯಿಂಟ್‌ಗಳು ಅಥವಾ ಶೇಕಡಾ 0.53 ರಷ್ಟು ಏರಿಕೆಯೊಂದಿಗೆ 66,707.20 ಪಾಯಿಂಟ್‌ಗಳಿಗೆ ಕೊನೆಗೊಂಡಿತು. ಎನ್‌ಎಸ್‌ಇ ನಿಫ್ಟಿ 97.70 ಪಾಯಿಂಟ್‌ಗಳು ಅಥವಾ ಶೇಕಡಾ 0.5 ರಷ್ಟು ಏರಿಕೆಯೊಂದಿಗೆ 19,778.30 ಪಾಯಿಂಟ್‌ಗಳ ಮಟ್ಟದಲ್ಲಿ ಕೊನೆಗೊಂಡಿತು. ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಶೇರುಗಳು ಗರಿಷ್ಠ ಶೇ …

Read More »

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜ ಎಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್​ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ನವರಿಗೆ ಕೇವಲ …

Read More »