ಬೆಳಗಾವಿ:ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರು ಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆ ಜಾರಿಗೆ ತರುವ ಚಿಂತನೆಯಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು ಅನುಕೂಲವಾಗಲು ಐದರಿಂದ ಹತ್ತು ಲಕ್ಷ ರೂಪಾಯಿ …
Read More »Monthly Archives: ಜುಲೈ 2023
ಸರ್ವರ್ ಸ್ಲೋ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ ನೋಂದಣಿ ವಿಳಂಬ.
ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಸುರಿಯುವ ಮಳೆಯಲ್ಲೇ ಮಹಿಳೆಯರು ಗಂಟೆಗಟ್ಟಲೇ ನಿಂತಿರುವುದು ನಗರದ ರಿಸಾಲ್ದಾರ್ ಗಲ್ಲಿಯ ಬೆಳಗಾವಿ ಒನ್ ಕೇಂದ್ರದಲ್ಲಿ ಕಂಡು ಬಂತು. ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ಸಿಕ್ಕ ದಿನದಿಂದಲೂ ಇಲ್ಲಿನ ಬೆಳಗಾವಿ ಒನ್ ಕೇಂದ್ರದಲ್ಲಿ ಮಹಿಳೆಯರ ದಟ್ಟಣೆ ನಿತ್ಯವೂ ಇದ್ದು, ಮಂಗಳವಾರ ಸಹ ಸುರಿವ ಮಳೆ ಲೆಕ್ಕಿಸದೇ ಛತ್ರಿ ಹಿಡಿದುಕೊಂಡು ಸಾಲಿನಲ್ಲಿ ನಿಂತ ಮಹಿಳೆಯರು ತಮ್ಮ ಸರದಿ ಯಾವಾಗ ಬರುತ್ತೊ ಎಂದು ಕಾಯುತ್ತಾ ನಿಂತಿದ್ದರು. …
Read More »ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಉನ್ನತಾಧಿಕಾರಿಗಳ ತಂಡ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಭೇಟಿ
ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನಮುನಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಚಿಕ್ಕೋಡಿಯಲ್ಲಿ ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಿಐಡಿ ಐಜಿ ಪ್ರವೀಣ ಮಧುಕರ್ ಪವಾರ್ ಹಾಗೂ ಎಫ್‌ಎಸ್‌ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಸೇರಿ ಇತರ ಹಿರಿಯ ಅಧಿಕಾರಿಗಳು ಜೈನಮುನಿಗಳು ಇದ್ದ ಕೊಠಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ …
Read More »ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಜನರಿಂದ ಹಣ ಪಡೆದರೆ ಕ್ರಿಮಿನಲ್ ಪ್ರಕರಣ:ಹೆಬ್ಬಾಳ್ಕರ್
ಬೆಳಗಾವಿ: “ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರಾದರು ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ಮೂವರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” …
Read More »ಐವರು I.A.S. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ. ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ. ಗಂಗಾಧರಸ್ವಾಮಿ ಜಿ.ಎಂ- ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಎಂದು ಪೋಸ್ಟ್ ಮಾಡಲಾಗಿದೆ. ಶ್ರೀ ನಾಗೇಂದ್ರ ಪ್ರಸಾದ್ ಕೆ.- ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ. ಅಶ್ವಿಜಾ ಬಿ. ವಿ- ಆಯುಕ್ತರು, ತುಮಕೂರು …
Read More »ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಕಥೆ ಸೃಷ್ಟಿಸಿ ಕಣ್ಣೀರು ಹಾಕಿದ್ದ ಹಂತಕಿ ಪತ್ನಿ ಜೈಲು ಪಾಲಾಗಿರುವ ಘಟನೆ ನಡೆದಿದೆ. ಕಳೆದ ಜೂ. 15 ರಂದು ಕಾಶೆಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕೊಂಕಲ್ ಗ್ರಾಮದ ಜಮೀನಿನ ಮರವೊಂದಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಕಾಶೆಪ್ಪ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಹೀಗಾಗಿ, ಸಾವಿನ ಬಗ್ಗೆ …
Read More »ಜೆಡಿಎಸ್ – ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ H.D.D.
ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಶಾಸಕ ಜಿ ಟಿ ದೇವೇಗೌಡ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಗೆಲ್ಲುವ ಸಾಮರ್ಥ್ಯ ಇದೆಯೋ ಅಲ್ಲಿ ನಿಲ್ಲುತ್ತೇವೆ. ಅಧಿಕೃತ ವಿರೋಧ ಪಕ್ಷ ಬಿಜೆಪಿ, ಅನಧಿಕೃತ …
Read More »ಸಿಂಗಾಪುರ ಆಪರೇಷನ್ ವಿಚಾರ: ಏಕಾಏಕಿ ಮೌನಕ್ಕೆ ಜಾರಿದ ಡಿಕೆಶಿ
ಬೆಂಗಳೂರು: ನಿನ್ನೆಯಷ್ಟೇ ಸಿಂಗಾಪುರದಲ್ಲಿ ಕುಳಿತು ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಆಪರೇಷನ್ ಪ್ರಯತ್ನ ನಡೆದಿದೆ ಎಂದು ಆರೋಪ ಮಾಡಿದ್ದ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಆ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯ ರೀತಿ ಇದು ಗೋಚರಿಸಿದೆ. ನಿನ್ನೆ ಮಾಧ್ಯಮಗಳ ಪ್ರಶ್ನೆಗೆ ರಾಜ್ಯ ಸರ್ಕಾರ ಪತನಗೊಳಿಸಲು ಸಿಂಗಪೂರದಲ್ಲಿ ಕುಳಿತು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಮಾಹಿತಿ ನಮಗೆ ಇದೆ. ನಾವು ಇಂತಹ ಪ್ರಯತ್ನಕ್ಕೆ ಬೆಲೆ ಸಿಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದರು. ಆದರೆ, ಇಂದು …
Read More »ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್ ಸೆನ್ಸ್ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್ ಸೆನ್ಸ್ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ. ಸೋಮವಾರ ಮುಂಜಾನೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಪ್ರತಿ ಬಾರಿಯೂ ತಮ್ಮ ಟ್ರೆಂಡಿ ಬಟ್ಟೆಗಳಿಂದ ಎಲ್ಲರನ್ನೂ ಆಶ್ಚರ್ಯಗೊಳಿಸುತ್ತಾರೆ. ಈ ಬಾರಿಯೂ ಸ್ಟೈಲಿಶ್ ಅವತಾರದಲ್ಲಿ ಗಮನ ಸೆಳೆದರು. ಪಾಪರಾಜಿಗಳ ಕೋರಿಕೆಯ ಮೇರೆಗೆ ನಟಿ ತನ್ನ ಮಿಲಿಯನ್ ಡಾಲರ್ ಸ್ಮೈಲ್ ಅನ್ನು ನೀಡಿದರು. …
Read More »ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಹಾಮಳೆಗೆ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಕಲಬುರಗಿ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಗಂಡ ಬಸವರಾಜ ಬಳಗಾರ (35) ಮೃತಪಟ್ಟ ಮಹಿಳೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆಯ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದು …
Read More »