Breaking News

Monthly Archives: ಜುಲೈ 2023

ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ.

ಬೆಳಗಾವಿ: ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ. ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಹತ್ತು ದಿನಗಳಿಂದ ಬೆಳಗಾವಿ ನಗರ ಮತ್ತು ಜಿಲ್ಲಾದ್ಯಂತ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಅಲ್ಲದೇ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲೆಯ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಹದಾಯಿ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಪರಿಣಾಮ …

Read More »

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಒಟ್ಟು ಖಾಲಿ ಇರುವ 13 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.   ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯ ಶೀಘ್ರಲಿಪಿ ಮತ್ತು ಶಾರ್ಟ್​ಎಂಡ್​​ …

Read More »

ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಬೆಳಗಾವಿ ಯುವತಿ ಆಯ್ಕೆ

ಬೆಳಗಾವಿ : ಸಾಧಿಸುವ ಛಲವಿರುವ ಜನರಿಗೆ ಯಾವುದೂ ಅಡ್ಡಿಯಾಗದು ಅಂತಾರೆ. ಈ ಮಾತನ್ನು ಜಿಲ್ಲೆಯ ಯುವತಿ ತೋರಿಸಿಕೊಟ್ಟಿದ್ದಾರೆ. ತನ್ನ ಅಂಗವೈಕಲ್ಯ ಮೆಟ್ಟಿ ನಿಂತು ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರ ಹೆಸರು ಮಂಜುಳಾ ಶಿವಾನಂದ ಗೊರಗುದ್ದಿ. ಕರದಂಟು ನಾಡು ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ನಿವಾಸಿ. ಜುಲೈ 28ರಿಂದ ಜರ್ಮನಿಯಲ್ಲಿ ಆರಂಭವಾಗುತ್ತಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಮಂಜುಳಾ, ಚಕ್ರ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ …

Read More »

ಹಾಲ್ನೊರೆಯಂತೆ ಚಿಮ್ಮುತ್ತಿದೆ ಗೋಕಾಕ್ ಜಲಪಾತ

ಬೆಳಗಾವಿ: ಅಮೆರಿಕ ದೇಶದ ಪ್ರಸಿದ್ಧ ನಯಾಗರ ಜಲಪಾತವನ್ನು ಹೋಲುವುದರಿಂದ ಭಾರತದ ನಯಾಗಾರವೆಂದೇ ಕರೆಯಲ್ಪಡುವ ನಯನ ಮನೋಹರ ಗೋಕಾಕ್​ ಫಾಲ್ಸ್ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆಕರ್ಷಕ ದೃಶ್ಯ ಕಂಡು ಜನ ಪುಳಕಗೊಳ್ಳುತ್ತಿದ್ದಾರೆ. ಹಾಸುಗಲ್ಲುಗಳ ಮೇಲೆ ಹರಿದು ಬರುವ ಜಲಧಾರೆಯ ಸೊಬಗು ನೋಡುವುದೇ ಒಂದು ಸಡಗರ. ಪಶ್ಚಿಮ ಘಟ್ಟದಲ್ಲಿ ಅಕ್ಷರಶಃ ವರುಣರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಘಟಪ್ರಭಾ, ಹಿರಣ್ಯಕೇಶಿ ನದಿಗಳಿಗೆ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಅಪಾರ ಪ್ರಮಾಣದ ನೀರು ಗೋಕಾಕ್ …

Read More »

K.I.A.D.B. ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ

ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು, ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್​ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.   ಈ ಬಗ್ಗೆ ಮಾತನಾಡಿರುವ ಸಚಿವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ …

Read More »

ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಟ್ಟು ಸೇರಿಸಿ, ಶ್ರಮಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟವರು ಬಾಲಗಂಗಾಧರ ತಿಲಕ್ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ವೀರ ಸಾವರ್ಕರ್ ಯುವಬಳಗದ ವತಿಯಿಂದ ಭಾನುವಾರ ಸಂಜೆ ನಗರದ ತಿಲಕ್ ನಗರದಲ್ಲಿ ಆಯೋಜಿಸಿದ್ದ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಲೋಕ ಮಾನ್ಯ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವವನ್ನು ತಿಲಕ್​ ನಗರದಲ್ಲಿ ಆಚರಿಸುತ್ತಿರುವುದು …

Read More »

ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ 18 ಟಿಎಂಸಿ ನೀರು, ರೈತರಿಗೆ ಸಂತಸ

ಬಳ್ಳಾರಿ, ರಾಯಚೂರು ರೈತರಲ್ಲಿ ಕೊಂಚ ಆಶಾಭಾವನೆ ಮೂಡಿದೆ. 10 ದಿನದಲ್ಲಿ 18 ಟಿಎಂಸಿ ನೀರು ಜಲಾಶಯಕ್ಕೆ ಬಂದಿದ್ದು, ರೈತರು ಮೊದಲ ಬೆಳೆ ಭತ್ತದ ನಾಟಿ ಶುರು ಮಾಡಿದ್ದಾರೆ.     ತುಂಗಭದ್ರಾ ಜಲಾಶಯ ವಿಜಯನಗರ: ತ್ರಿವಳಿ ರಾಜ್ಯಗಳಿಗೆ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಭರವಸೆ ಮೂಡಿದೆ. ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದಂತೆ ಇತ್ತ ರೈತರು ಮೊದಲನೆ ಬೆಳೆ …

Read More »

ಕೃಷ್ಣಾ ನದಿ ತೀರದ ಪ್ರದೇಶವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೀಕ್ಷಣೆ ಮಾಡಿದರು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ನದಿಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲ. ಆದ್ರೆ ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 27ರ ವರೆಗೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದ್ದಾರೆ. ನಿಪ್ಪಾಣಿ ತಾಲೂಕಿನ ದೂಧ್​ ಗಂಗಾ ನದಿ ತೀರದ ಹಲವು ಗ್ರಾಮಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ …

Read More »

ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ

ವಿಜಯಪುರ : ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮೂರು ಮನೆಗಳು ಕುಸಿತಗೊಂಡಿವೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ವಿಜಯಪುರದಲ್ಲಿ 16.6 ಮಿ.ಮೀಟರ್, ತಿಕೋಟಾ 4.2ಮಿ.ಮೀಟರ್, ಬಬಲೇಶ್ವರದಲ್ಲಿ 3.8 ಮೀ. ಮೀಟರ್ ಮಳೆಯಾಗಿರುವ ಬಗ್ಗೆ ವರದಿ ಆಗಿದೆ. ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಉತ್ತಮ ಮಳೆಗೆ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಮಳೆಯಾಗುತ್ತಿರುವುದರಿಂದ …

Read More »

ಆನ್​ಲೈನ್​ ಗೇಮ್​ನಲ್ಲಿ ₹58 ಕೋಟಿ ಕಳೆದುಕೊಂಡ ಉದ್ಯಮಿ: ಆರೋಪಿ ಮನೆಯಿಂದ ₹17 ಕೋಟಿ ಹಣ, ಚಿನ್ನದ ಬಿಸ್ಕೆಟ್​ ವಶ

ನಾಗಪುರ (ಮಹಾರಾಷ್ಟ್ರ) : ಇತ್ತೀಚಿನ ದಿನಗಳಲ್ಲಿ ಆನ್​ಲೈನ್​ ಗೇಮ್‌ಗಳನ್ನು ಆಡಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಆರೋಪಿಗಳು ಅಮಾಯಕರಿಗೆ ಮೋಸ ಮಾಡಿ ಹಣ ಗಳಿಸುತ್ತಿದ್ದಾರೆ. ಹೆಚ್ಚು ಹಣ ಮಾಡುವ ಆಸೆಗೆ ಬಿದ್ದು, ಇದ್ದ ಹಣವನ್ನು ಕಳೆದುಕೊಂಡು ಜನರು ಬೀದಿಗೆ ಬೀಳುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಖ್ಯಾತ ಉದ್ಯಮಿಯೊಬ್ಬರು ಆನ್​ಲೈನ್​ ಗೇಮಿನ ಗೀಳಿಗೆ ಬಿದ್ದು 58 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ …

Read More »